ಕೇಂದ್ರ ಸರ್ಕಾರವೇ ಪ್ಯಾಲೆಸ್ತೀನ್ ಪರ ಎಂದು ಹೇಳಿದರೂ ಕಲಬುರಗಿ ಬಳಿಕ ಚಿಕ್ಕಬಳ್ಳಾಪುರದಲ್ಲಿ ಪ್ಯಾಲೆಸ್ತೀನ್ ಧ್ವಜ ಹಾರಾಟ ವಿವಾದ ಭುಗಿಲೆದ್ದಿದೆ. ಚಿಂತಾಮಣಿ ತಾಲೂಕಿನ ಮುರುಗಮಲ್ಲ ದರ್ಗಾ ಉರುಸ್ ವೇಳೆ ಸರ್ಕಾರಿ ಗಂಧೋತ್ಸವ ವೇಳೆ ಪ್ಯಾಲೆಸ್ತೀನ್ ಧ್ವಜ ಹಾರಾಟ ಮಾಡಿದ್ದ ಪುಂಡರು ಪ್ಯಾಲೆಸ್ಟೈನ್ ಧ್ವಜ ಹಾರಿಸಿ ಇನ್ಸ್ಟಗ್ರಾಮ್ ನಲ್ಲಿ ಅಪ್ಲೋಡ್ ಮಾಡಿದ್ದಾರೆ.
ಪುಂಡರ ವಿರುದ್ದ ಕ್ರಮ ಕೈಗೊಳ್ಳುವಂತೆ ಹಿಂದುಪರ ಸಂಘಟನೆಗಳು ಆಗ್ರಹಿಸಿದ್ದು, ರಾಷ್ಟ್ರ ದ್ರೋಹ ಬಗೆದವರನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿವೆ. ವಿಜಯಪುರದಲ್ಲಿ ಈದ್ ಮಿಲಾದ್ ಆಚರಣೆಯ ನಿಮಿತ್ತ ಸ್ಥಳೀಯ ಮುಸ್ಲಿಂ ಸಂಘಟನೆಯೊಂದು ಆಯೋಜಿಸಿದ್ದ ಮೆರವಣಿಗೆಯಲ್ಲಿ ಪ್ಯಾಲೆಸ್ತೀನ್ ರಾಷ್ಟ್ರಧ್ವಜವನ್ನು ಪ್ರದರ್ಶಿಸಲಾಗಿದೆ ಎಂಬ ಆರೋಪವಿದೆ.
ನಗರದ ವಿವಿಧ ಭಾಗಗಳಿಂದ ಗಾಂಧಿ ಚೌಕ್ ಕಡೆ ಮೆರವಣಿಗೆಯ ಸಂದರ್ಭದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಇದರ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇದು ಇತ್ತೀಚಿನದೇ ಅಥವಾ ಹಳೆಯ ವೀಡಿಯೋ ಇರಬಹುದೇ ಎಂಬ ಬಗ್ಗೆ ಇನ್ನೂ ಸ್ಪಷ್ಟವಾಗಿಲ್ಲ. ವಿಜಯಪುರ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ವೈರಲ್ ಆಗಿರುವ ವಿಡಿಯೋದ ಸತ್ಯಾಸತ್ಯತೆಯನ್ನು ಪರಿಶೀಲಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ವಿಜಯಪುರ ಜಿಲ್ಲಾ ಪೊಲೀಸ್ ಅಧೀಕ್ಷಕ ಲಕ್ಷ್ಮಣ ನಿಂಬರಗಿ, ‘ಪ್ಯಾಲೆಸ್ತೀನ್ ಧ್ವಜವನ್ನು ಪ್ರದರ್ಶಿಸಿರುವುದು ನಿಜವೆಂದು ದೃಢಪಟ್ಟರೆ, ಕಾನೂನಿನ ಅಡಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.
ಈದ್ ಮಿಲಾದ್ ಮೆರವಣಿಗೆ ವೇಳೆ ಮುಸ್ಲಿಮ್ ಸಮುದಾಯಕ್ಕೆ ಸೇರಿದ ಕೆಲವರು ಪ್ಯಾಲೆಸ್ತೇನ್ ಪರವಾಗಿ ಘೋಷಣೆಗಳನ್ನು ಕೂಗಿ ಪ್ಯಾಲೆಸ್ತೇನ್ ಧ್ವಜಗಳನ್ನು ಹಾರಿಸಿದ ಘಟನೆ ಕಳೆದ ಬಾರಿ ಚಿತ್ರದುರ್ಗದಲ್ಲಿ ನಡೆದಿತ್ತು. ಕಲಬುರಗಿಯಲ್ಲೂ ಪ್ಯಾಲೆಸ್ತೀನ್ ಧ್ವಜ ಹಾರಾಟ ಇತ್ತೀಚೆಗೆ ವಿವಾದ ಸೃಷ್ಟಿಸಿತ್ತು.
ಚಿಕ್ಕಮಗಳೂರು-ಕಡೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕಿಗೆ ಪ್ಯಾಲಿಸ್ತೀನ್ ಧ್ವಜ ಕಟ್ಟಿ ಮುಸ್ಲಿಂ ಯುವಕರು ಓಡಾಡಿದ ಘಟನೆ ಕಳೆದ ಸೆಪ್ಟಂಬರ್‌ನಲ್ಲಿ ನಡೆದಿತ್ತು. ಇದಕ್ಕೆ ಹಿಂದೂ ಸಂಘಟನೆಗಳಿಂದ ತೀವ್ರ ಆಕ್ರೋಶ ವ್ಯಕ್ತವಾಗಿ ಬಂಧಿಸುವಂತೆ ಆಗ್ರಹ ಕೇಳಿ ಬಂದಿತ್ತು.