ಸರ್ಕಾರಿ ವೈದ್ಯಾಧಿಕಾರಿಗಳು ಹಾಗೂ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ನೌಕರರು ತಾವು ಕೈಗೊಳ್ಳಲಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಬರೆದಿರುವ ಪತ್ರದಲ್ಲಿ ಕಾಂಗ್ರೆಸ್ ಸರ್ಕಾರ ಔಷಧಿ ಪೂರೈಕೆಯಲ್ಲಿ ವಿಫಲವಾಗಿರುವ ಬಗ್ಗೆ ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಕಿಡಿ ಕಾರಿದ್ದಾರೆ.
ಸಿಎಂ @siddaramaiah ನವರೇ, ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಔಷಧಿ ಸಿಗುತ್ತಿಲ್ಲ ಎಂದು ವಿಪಕ್ಷಗಳು ಟೀಕೆ ಮಾಡಿದರೆ ಎಲ್ಲವೂ ಸರಿ ಇದೆ ಎಂದು ತಿಪ್ಪೆ ಸಾರಿಸುವ ಮಾತಾಡುತ್ತೀರಿ. ಮಾಧ್ಯಮಗಳು ವರದಿ ಮಾಡಿದರೂ ಕ್ಯಾರೆ ಎನ್ನುವುದಿಲ್ಲ ಎಂದು ಟೀಕಿಸಿದ್ದಾರೆ.
ಆದರೆ ದಿನನಿತ್ಯ ರೋಗಿಗಳಿಗೆ ಆರೋಗ್ಯ ಸೇವೆ ನೀಡುವ, ಆಸ್ಪತ್ರೆಗಳ ನಿರ್ವಹಣೆ ಮಾಡುವ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಗಳ ಅಧಿಕಾರಿಗಳು ಮತ್ತು ನೌಕರರು ಸ್ವತಃ ತಾವೇ ಲಿಖಿತ ರೂಪದಲ್ಲಿ ಔಷಧಿ ಪೂರೈಕೆಯಲ್ಲಿ ಆಗುತ್ತಿರುವ ವ್ಯತ್ಯಯದ ಬಗ್ಗೆ ಬಹಿರಂಗ ಮಾಡಿದ್ದಾರಲ್ಲ ಸ್ವಾಮಿ, ಈಗ ಏನು ಹೇಳುತ್ತೀರಿ? ಇನ್ನು ನಿಮ್ಮ ಆರೋಗ್ಯ ಸಚಿವ @dineshgrao ಅವರಂತೂ ಆರೋಗ್ಯ ಇಲಾಖೆಯನ್ನೇ ಸಂಪೂರ್ಣವಾಗಿ ಅನಾರೋಗ್ಯ ಪೀಡಿತಗೊಳಿಸಿದ್ದಾರೆ. ನಿಮ್ಮ @INCKarnataka ಸರ್ಕಾರಕ್ಕೆ ಕಿಂಚಿತ್ತಾದರೂ ನಾಚಿಕೆ, ಮಾನ ಮರ್ಯಾದೆ ಇದ್ದರೆ ಈ ಕೂಡಲೇ ವಿಧಾನಸಭೆ ವಿಸರ್ಜನೆ ಮಾಡಿ ಚುನಾವಣೆಗೆ ಹೋಗಬೇಕು ಎಂದು ಆಗ್ರಹಿಸಿದ್ದಾರೆ.
ಸರ್ಕಾರಿ ವೈದ್ಯಾಧಿಕಾರಿಗಳು ಹಾಗೂ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ನೌಕರರು ತಾವು ಕೈಗೊಳ್ಳಲಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಬರೆದಿರುವ ಪತ್ರದಲ್ಲಿ ಕಾಂಗ್ರೆಸ್ ಸರ್ಕಾರ ಔಷಧಿ ಪೂರೈಕೆಯಲ್ಲಿ ವಿಫಲವಾಗಿರುವ ಬಗ್ಗೆ, ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ.
ಸಿಎಂ @siddaramaiah ನವರೇ,… pic.twitter.com/XUYpWKboWW
— R. Ashoka (@RAshokaBJP) February 15, 2026
ಸಾವಿರಾರು ಎಡವಟ್ಟುಗಳ ಕಾಂಗ್ರೆಸ್ ಸರ್ಕಾರದ ಸಾವಿರ ದಿನಗಳ ಸಂಭ್ರಮಾಚರಣೆ ಬಗ್ಗೆ ಕರ್ನಾಟಕದ ಜನತೆಗೆ ಮಾತ್ರ ಹೇಸಿಗೆ ಹುಟ್ಟಿಲ್ಲ, ಸ್ವತಃ ಕಾಂಗ್ರೆಸ್ ಹೈಕಮಾಂಡ್ಗೂ ಹೇಸಿಗೆ ಹುಟ್ಟಿದಂತಿದೆ ಎಂದು ಮತ್ತೊಂದು ಎಕ್ಸ್ ಪೋಸ್ಟ್‌ನಲ್ಲಿ ಆರ್. ಅಶೋಕ ಆಕ್ರೋಶ ಹೊರ ಹಾಕಿದ್ದಾರೆ.
ಸಿಎಂ @siddaramaiah ಅವರೇ,ಸಾವಿರ ದಿನಗಳ ಸಂಭ್ರಮಾಚರಣೆಗೆ ನಿಮ್ಮ @INCIndia ಪಕ್ಷದ ಹೈಕಮಾಂಡ್ ನಾಯಕರು ಯಾಕೆ ಬರಲಿಲ್ಲ?, ಎಐಸಿಸಿ ಅಧ್ಯಕ್ಷರಾದ ಸನ್ಮಾನ್ಯ @kharge ಅವರು ಬೆಂಗಳೂರಿನಲ್ಲೇ ಇದ್ದರು ಬರಲಿಲ್ಲವಲ್ಲ ಯಾಕೆ? ದೆಹಲಿಗೆ ಕಳುಹಿಸಬೇಕಾದ ಲೆಕ್ಕದಲ್ಲಿ ಏನಾದರೂ ಕಡಿಮೆ ಆಯಿತಾ? ಅಥವಾ ಹೈಕಮಾಂಡ್ ನಾಯಕರನ್ನು ತಾವು ಆಹ್ವಾನ ಮಾಡಲೇ ಇಲ್ಲವಾ ಎಂದು ಪ್ರಶ್ನಿಸಿದ್ದಾರೆ.


