Menu

400 ಕೆಜಿ ಆರ್ ಡಿಎಕ್ಸ್ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ ವ್ಯಕ್ತಿ ಅರೆಸ್ಟ್

bomb threat

ಮುಂಬೈನಲ್ಲಿ ನಡೆಯುತ್ತಿರುವ ಸಾರ್ವಜನಿಕ ಗಣೇಶೋತ್ಸವ ವೇಳೆ ಬಾಂಬ್ ಸ್ಫೋಟಿಸುವುದಾಗಿ  ಬೆದರಿಕೆ ಹಾಕಿದ್ದ ಆರೋಪಿಯನ್ನು ಮುಂಬೈ ಪೊಲೀಸರು ನೋಯ್ಡಾದಲ್ಲಿ ಬಂಧಿಸಿದ್ದಾರೆ.

ಬಿಹಾರ ಮೂಲದ ಅಶ್ವಿನ್ ಕುಮಾರ್ ಸುಪ್ರಾ (50) ಎಂಬಾತನನ್ನು ಬಂಧಿಸಲಾಗಿದೆ.

ಮೊಬೈಲ್ ಫೋನ್ ಮತ್ತು ಸಿಮ್ ಕಾರ್ಡ್ ಬಳಸಿ ಆರೋಪಿ ಅಶ್ವಿನ್ ಕುಮಾರ್ 35 ವಾಹನಗಳಲ್ಲಿ 400 ಕೆಜಿ ಆರ್ ಡಿಎಕ್ಸ್ ಬಾಂಬ್ ಇರಿಸಿದ್ದು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದ.

ತನಿಖೆಯ ಸಮಯದಲ್ಲಿ, ಬೆದರಿಕೆ ಹಾಕಲು ಬಳಸಲಾದ ಫೋನ್ ಮತ್ತು ಸಿಮ್ ಅನ್ನು ಸಹ ಅಪರಾಧ ವಿಭಾಗ ವಶಪಡಿಸಿಕೊಂಡಿದೆ. ಸದ್ಯ ಆರೋಪಿಯನ್ನು ಮುಂಬೈಗೆ ಕರೆದೊಯ್ಯಲಾಗುತ್ತಿದೆ. ಮುಂಬೈ ತಲುಪಿದ ಬಳಿಕ ಹೆಚ್ಚಿನ ವಿಚಾರಣೆ ನಡೆಯಲಿದೆ.

ಪಾಕಿಸ್ತಾನ ಲಷ್ಕರ್-ಎ-ಜಿಹಾದಿ ಸಂಘಟನೆಯ 14 ಉಗ್ರರು ಭಾರತ ಪ್ರವೇಶಿಸಿದ್ದಾರೆ. 400 ಕೆಜಿ ಆರ್‌ಡಿಎಕ್ಸ್ ಸ್ಫೋಟಿಸಿ ಜನರನ್ನ ಕೊಲ್ಲಲಿದ್ದಾರೆ. ಅಲ್ಲದೇ ನಗರಾದ್ಯಂತ 34 ವಾಹನಗಳಲ್ಲಿ ಮಾನವ ಬಾಂಬ್ ಸ್ಫೋಟಿಸಲಾಗುವುದು ಎಂದು ಆರೋಪಿ ಅಶ್ವಿನ್ ಕುಮಾರ್ ಮುಂಬೈ ಸಂಚಾರ ಪೊಲೀಸ್ ಠಾಣೆಗೆ ಸಂದೇಶ ಕಳುಹಿಸಿದ್ದ

Related Posts

Leave a Reply

Your email address will not be published. Required fields are marked *