Saturday, October 18, 2025
Menu

ಆರ್ ಎಸ್ಎಸ್ ಪಥಸಂಚಲನದಲ್ಲಿ ಭಾಗಿಯಾದ ಪಿಡಿಒ ಅಮಾನತು

pdo

ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಪಥಸಂಚನದಲ್ಲಿ ಭಾಗಿಯಾಗಿದ್ದ ಪಂಚಾಯತ್‌ ಅಭಿವೃದ್ಧಿ ಅಧಿಕಾರಿಯನ್ನು (PDO) ರಾಜ್ಯ ಸರ್ಕಾರ ಸೇವೆಯಿಂದ ಅಮಾನತು ಮಾಡಿದೆ.

ಲಿಂಗಸುಗೂರು ತಾಲ್ಲೂಕಿನ ರೋಡಲಬಂಡಾ ಗ್ರಾಮದ ಪಿಡಿಒ ಪ್ರವೀಣ್ ಕುಮಾರ್ ಅವರನ್ನು ಪಂಚಾಯತ್ ರಾಜ್ ಇಲಾಖೆ ಆಯುಕ್ತೆ ಡಾ.ಅರುಂಧತಿ ಇಲಾಖಾ ತನಿಖೆ ಕಾಯ್ದಿರಿಸಿ ಅಮಾನತು ಮಾಡಿದ್ದಾರೆ.

ಅಕ್ಟೋಬರ್12 ರಂದು ಲಿಂಗಸುಗೂರು ಪಟ್ಟಣದಲ್ಲಿ ಆರ್‌ಎಸ್‌ಎಸ್‌ ಶತಮಾನೋತ್ಸವದ ಹಿನ್ನೆಲೆಯಲ್ಲಿ ಪಂಥಸಂಚಲನ ಕಾರ್ಯಕ್ರಮ ನಡೆದಿತ್ತು. ಈ ಪಥಸಂಚಲನದಲ್ಲಿ ಕೈಯಲ್ಲಿ ದೊಣ್ಣೆ ಹಿಡಿದುಕೊಂಡು ಗಣವೇಷ ಧರಿಸಿ ಪ್ರವೀಣ್ ಭಾಗವಹಿಸಿದ್ದರು.

ಕರ್ನಾಟಕ ಸಿವಿಲ್ ಸೇವಾ ನಿಯಮಗಳ ಉಲ್ಲಂಘನೆ ಹಾಗೂ ಸರ್ಕಾರಿ ನೌಕರನ ತರವಲ್ಲದ ರೀತಿ ನಡೆದುಕೊಂಡಿದ್ದರಿಂದ ಅಮಾನತು ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

Related Posts

Leave a Reply

Your email address will not be published. Required fields are marked *