Menu

ಮುಂದುವರಿದ ಪೆಟ್ರೋಲ್, ಡೀಸೆಲ್ ದರ ಏರಿಕೆ

ದೇಶದಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 87 ಪೈಸೆ ಹಾಗೂ ಡೀಸೆಲ್ ಬೆಲೆ 91 ಪೈಸೆ ಹೆಚ್ಚಳವಾಗಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ 107.14 ರೂ., ಡೀಸೆಲ್ ಬೆಲೆ 95.04 ರೂ. ಆಗಿದೆ.

ಮೇ ತಿಂಗಳಲ್ಲಿ ಮೂರನೇ ಬಾರಿಗೆ ತೈಲ ಬೆಲೆಗಳು ಏರಿಕೆ ಕಂಡಿವೆ. ತೈಲ ಕಂಪನಿಗಳು ಗ್ರಾಹಕರ ಮೇಲೆ ಸತತವಾಗಿ ಇಂಧನ ಬೆಲೆ ಏರಿಕೆ ಹೊರೆ ಹೊರಿಸುತತ್ತಿವೆ. ಈ ವಾರದ ಆರಂಭ ಲೀಟರ್ ಇಂಧನಕ್ಕೆ 90 ಪೈಸೆ ಹೆಚ್ಚಿಸಲಾಗಿತ್ತು. ಮೊದಲು ಪ್ರತಿ ಲೀಟರ್‌ಗೆ 3 ರೂ. ಹೆಚ್ಚಿಸಲಾಗಿತ್ತು.

ಮಧ್ಯಪ್ರಾಚ್ಯದಲ್ಲಿ ಯುದ್ಧದ ವಾತಾವರಣ ಮತ್ತು ಯುಎಸ್-ಇರಾನ್ ನಡುವಿನ ಶಾಂತಿ ಮಾತುಕತೆಗಳ ಅನಿಶ್ಚಿತತೆ ಬೆಲೆ ಏರಿಕೆಗೆ ಪ್ರಮುಖ ಕಾರಣ ಎಂದು ಹೇಳಳಾಗುತ್ತಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಗಳು ತೀವ್ರ ಏರಿಳಿತ ಕಾಣುತ್ತಿವೆ.

ಸಾರ್ವಜನಿಕ ವಲಯದ ತೈಲ ಕಂಪನಿಗಳು ಪ್ರತಿ ತಿಂಗಳು 1,000 ಕೋಟಿ ರೂ. ನಷ್ಟವನ್ನು ಅನುಭವಿಸುತ್ತಿದ್ದವು. ಈ ನಷ್ಟದ ಹೊರೆಯನ್ನು ತಗ್ಗಿಸಲು ಬೆಲೆ ಪರಿಷ್ಕರಣೆಯ ಮೂಲಕ ಗ್ರಾಹಕರ ಮೇಲೆ ವರ್ಗಾಯಿಸಲು ಕಂಪನಿಗಳು ಆರಂಭಿಸಿವೆ.

ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಅವರು, ಜಾಗತಿಕ ತೊಡಕುಗಳು ಮತ್ತು ಏರುತ್ತಿರುವ ಕಚ್ಚಾ ತೈಲ ಬೆಲೆಗಳ ಹೊರತಾಗಿಯೂ ಭಾರತವು ಸ್ಥಿರ ಇಂಧನ ಪೂರೈಕೆಯನ್ನು ಖಚಿತಪಡಿಸಿದೆ ಎಂದು ಇತ್ತೀಚೆಗೆ ಹೇಳಿದ್ದರು. ದೇಶಾದ್ಯಂತ ಪೆಟ್ರೋಲ್, ಡೀಸೆಲ್ ಮತ್ತು ಎಲ್‌ಪಿಜಿಯ ತಡೆರಹಿತ ಲಭ್ಯತೆಯನ್ನು ಖಚಿತಪಡಿಸಲಾಗಿದ್ದು, ಬೇಡಿಕೆ ಪೂರೈಸಲು ದೇಶೀಯ ಎಲ್‌ಪಿಜಿ ಉತ್ಪಾದನೆಯನ್ನು ಗಮನಾರ್ಹವಾಗಿ ಹೆಚ್ಚಿಸಲಾಗಿದೆ ಎಂದಿದ್ದರು. ಆದರೆ ಬೆಲೆ ಮಾತ್ರ ಏರಿಕೆಯಾಗುತ್ತಲೇ ಇದೆ. ಈ ಬೆಳವಣಿಗೆ ಜನಸಾಮಾನ್ಯರ ಬದುಕನ್ನು ಹಳಿ ತಪ್ಪಿಸಿದೆ.

Related Posts

Leave a Reply

Your email address will not be published. Required fields are marked *