ದೇಶಾದ್ಯಂತ ತೈಲ ಕಂಪನಿಗಳು ಪೆಟ್ರೋಲ್, ಡೀಸೆಲ್ ದರ ಪ್ರತಿ ಲೀಟರ್‌ಗೆ ಸರಾಸರಿ 90 ಪೈಸೆ ಏರಿಕೆ ಮಾಡಿದ್ದು, ಒಂದೇ ವಾರದಲ್ಲಿ ಎರಡನೇ ಬಾರಿ ತೈಲ ಬೆಲೆ ಏರಿಕೆಯಾಗಿ ಗ್ರಾಹಕರನ್ನು ಕಂಗೆಡಿಸಿದೆ.
ಬೆಂಗಳೂರಿನಲ್ಲಿ ಮಂಗಳವಾರ ಡೀಸೆಲ್ ದರದಲ್ಲಿ ಪ್ರತಿ ಲೀಟರ್‌ಗೆ 94 ಪೈಸೆ ಏರಿಕೆಯಾಗಿದೆ. ನಾಲ್ಕು ದಿನಗಳ ಹಿಂದೆ 106.17 ರೂ. ಇದ್ದ ಪೆಟ್ರೋಲ್ ದರ 107.16 ರೂ. ಹಾಗೂ 94.10 ರೂ. ಇದ್ದ ಡೀಸೆಲ್ ದರ
95.03 ರೂ. ಗೆ ತಲುಪಿದೆ.
ಸರ್ಕಾರ ಸಾಮಾನ್ಯ ಜನರ ಹಿತದೃಷ್ಟಿಯಿಂದ ಇಂಧನ ದರ ನಿಯಂತ್ರಣಕ್ಕೆ ಗಮನ ಹರಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ. ಹೀಗೆ ಸತತ ಇಂಧನ ಬೆಲೆ ಏರಿಕೆಯಿಂದ ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಹೆಚಳಗೊಂಡಿದ್ದು, ಪರಿಸ್ಥಿತಿ ಇನ್ನಷ್ಟು ಬಿಗಡಾಯಿಸಲಿದೆ. ಜನಸಾಮಾನ್ಯರ ಬದುಕು ದುಸ್ತರವಾಗಲಿದೆ.


