ಪೆಟ್ರೋಲ್ ದರ ಮತ್ತೆ ಏರಿಕೆ; ಬೆಂಗಳೂರಿನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ಗೆ 102.54ರೂ.

 

ನವದೆಹಲಿ: ದೇಶದಲ್ಲಿ ಇಂಧನ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿದ್ದು, ಇದೀಗ ತೈಲ ಸಂಸ್ಥೆಗಳೂ ಶುಕ್ರವಾರ ಕೂಡ ಪೆಟ್ರೋಲ್ ದರವನ್ನು 37 ಪೈಸೆಯಷ್ಟು ಏರಿಕೆ ಮಾಡಿದೆ. ಆದರೆ, ಡೀಸೆಲ್ ದರವನ್ನು ಯಥಾಸ್ಥಿತಿ ಕಾಯ್ದುಕೊಂಡಿದೆ.

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 102.54ಕ್ಕೆ ಏರಿಕೆಯಾಗಿದ್ದು, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 99.22 ಕ್ಕೆ ತಲುಪಿದೆ.

ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 105.3 ಕ್ಕೆ ಏರಿಕೆಯಾಗಿದ್ದು, ಕೋಲ್ಕತಾದಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 99.1 ಕ್ಕೆ ಏರಿಕೆಯಾಗಿದೆ. ಇನ್ನು ಚೆನ್ನೈನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 100.18ಕ್ಕೆ ತಲುಪಿದೆ.

,

Leave a Reply

Your email address will not be published. Required fields are marked *