ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ನಿಂತಿದ್ದ ಟ್ರಕ್ ಗೆ ಡಿಕ್ಕಿ ಹೊಡೆದ ಪರಿಣಾಮ 9 ಮಕ್ಕಳು ಸೇರಿದಂತೆ 11 ಮಂದಿ ಮೃತಪಟ್ಟು, 8 ಮಂದಿ ಗಾಯಗೊಂಡಿರುವ ಘಟನೆ ರಾಜಸ್ಥಾನದಲ್ಲಿ ಸಂಭವಿಸಿದೆ.
ಖಾತು ಶ್ಯಾಮ್‌ನಿಂದ ಹಿಂತಿರುಗುತ್ತಿದ್ದಾಗ ಬುಧವಾರ ಮುಂಜಾನೆ ದೌಸಾ – ಮನೋಹರ್‌ಪುರ ರಸ್ತೆಯ ಬಾಪಿ ಬಳಿ ಪಾರ್ಕಿಂಗ್ ಮಾಡಿದ್ದ ಟ್ರಕ್ಗೆ ಪಿಕಪ್ ವ್ಯಾನ್ ಡಿಕ್ಕಿ ಹೊಡೆದಿದೆ. ಮೃತರಲ್ಲಿ ನಾಲ್ವರು ಮಹಿಳೆಯರು ಮತ್ತು ಏಳು ಮಕ್ಕಳು ಸೇರಿದ್ದಾರೆ.
ಪಿಕಪ್ ವ್ಯಾನ್ನಲ್ಲಿದ್ದ ಪ್ರಯಾಣಿಕರು ಖಾತು ಶ್ಯಾಮ್ ಮತ್ತು ಸಲಾಸಾರ್ ಬಾಲಾಜಿ ದೇವಸ್ಥಾನದಲ್ಲಿ ದೇವರ ದರ್ಶನ ಪಡೆದ ಬಳಿಕ ಉತ್ತರ ಪ್ರದೇಶದಲ್ಲಿರುವ ಈಟಾ ನಗರಕ್ಕೆ ಹಿಂತಿರುಗುತ್ತಿದ್ದರು.
ಈ ವೇಳೆ ಮನೋಹರ್‌ಪುರ ಹೆದ್ದಾರಿಯಲ್ಲಿ ಬುಧವಾರ ಬೆಳಗ್ಗೆ 4 ರಿಂದ 5 ಗಂಟೆ ಸುಮಾರಿಗೆ ಈ ದುರ್ಘಟನೆ ನಡೆದಿದೆ ಎಂದು ದೌಸಾ ಪೊಲೀಸ್ ವರಿಷ್ಠಾಧಿಕಾರಿ ಸಾಗರ್ ಮಾಹಿತಿ ನೀಡಿದ್ದಾರೆ.
ಪಿಕಪ್ ವ್ಯಾನ್ನಲ್ಲಿ 25 ಜನರಿದ್ದರು. ಹೆದ್ದಾರಿಯ ಸರ್ವಿಸ್ ರಸ್ತೆಯಲ್ಲಿ ನಿಂತಿದ್ದ ಸ್ಟೇಷನರಿ ಟ್ರಕ್ಗೆ ವ್ಯಾನ್ ಡಿಕ್ಕಿ ಹೊಡೆದಿದೆ. ಗಾಯಗೊಂಡಿರುವ 8 ಜನರ ಪೈಕಿ ಓರ್ವರ ಸ್ಥಿತಿ ಗಂಭೀರವಾಗಿದೆ ಎಂದು ಎಸ್ ಪಿ ತಿಳಿಸಿದರು.