ಪಹಲ್ಗಾವ್ ನಲ್ಲಿ ಉಗ್ರರು ನಡೆದ ಮಾರಣಾಂತಿಕ ದಾಳಿಗೆ ಪ್ರತಿಯಾಗಿ ನಡೆಸುವ ಕಾರ್ಯಾಚರಣೆ ನಡೆಸಲು ಭಾರತೀಯ ಸೇನೆಗೆ ಪ್ರಧಾನಿ ನರೇಂದ್ರ ಮೋದಿ ಪೂರ್ಣ ಅಧಿಕಾರ ನೀಡಿದ್ದಾರೆ.
ಜಮ್ಮು ಕಾಶ್ಮೀರದ ಪಹಲ್ಗಾವ್ ನಲ್ಲಿ 26 ಪ್ರವಾಸಿಗರನ್ನು ಉಗ್ರರು ಹತ್ಯೆಗೈದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಭಾರತದ ಮೂರೂ ಶಸ್ತ್ರಾಸ್ತ್ರ ಸೇನೆಗೆ ಪೂರ್ಣ ಅಧಿಕಾರ ನೀಡಿದ್ದಾರೆ.
ಸಭೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವಲ್ ಮತ್ತು ಚೀಫ್ ಆಫ್ ಡಿಫೆನ್ಸ್ ಸ್ಟಾಫ್ ಅನಿಲ್ ಚೌಹಾಣ್ ಪಾಲ್ಗೊಂಡಿದ್ದರು.
ಸಭೆಯಲ್ಲಿ ಭಾರತೀಯ ಸೇನೆ ಮೇಲೆ ಪೂರ್ಣ ವಿಶ್ವಾಸ ವ್ಯಕ್ತಪಡಿಸಿದ ಪ್ರಧಾನಿ ಮೋದಿ, ರಾಷ್ಟ್ರದ ಭದ್ರತೆಗೆ ಅಗತ್ಯವಾದ ಕ್ರಮ ಕೈಗೊಳ್ಳುವುದು ಹಾಗೂ ಉಗ್ರರ ಹಾವಳಿ ಹತ್ತಿಕ್ಕಲು ಭಾರತೀಯ ಸೇನೆ ಸಂಪೂರ್ಣ ವಿಶ್ವಾಸ ವ್ಯಕ್ತಪಡಿಸಿದರು.