ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಆಗಸ್ಟ್ 31ರಿಂದ ಎರಡು ದಿನಗಳ ಚೀನಾ ಪ್ರವಾಸ ಕೈಗೊಳ್ಳಲಿದ್ದು, ಸ್ಥಳೀಯ ವಲಯ ಶೃಂಗಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಗುಲ್ವಾಮ್ ಘರ್ಷಣೆ ನಂತರ ಪ್ರಧಾನಿ ಮೋದಿ ಇದೇ ಮೊದಲ ಬಾರಿಗೆ ಚೀನಾ ಪ್ರವಾಸ ಕೈಗೊಳ್ಳುತ್ತಿದ್ದಾರೆ. 2020ರಲ್ಲಿ ಕೊನೆಯ ಬಾರಿಗೆ ಭೇಟಿ ನೀಡಿದ್ದ ಮೋದಿ ಇದೀಗ ಚೀನಾ ಪ್ರವಾಸ ಕೈಗೊಳ್ಳುತ್ತಿರುವುದು ಜಾಗತಿಕ ಮಟ್ಟದಲ್ಲಿ ತೀವ್ರ ಕುತೂಹಲ ಕೆರಳಿಸಿದೆ.
ಅಮೆರಿಕ ಚೀನಾ, ಭಾರತದ ಮೇಲೆ ಭಾರೀ ಪ್ರಮಾಣದಲ್ಲಿ ಸುಂಕ ಹೇರಿಕೆ ಮಾಡಿದೆ. ಅಲ್ಲದೇ ಮುಂದಿನ ದಿನಗಳಲ್ಲಿ ರಷ್ಯಾದ ಜೊತೆಗಿನ ವ್ಯಾಪಾರ ನಿಲ್ಲಿಸದೇ ಇದ್ದರೆ ಮತ್ತಷ್ಟು ಸುಂಕ ಹೇರುವ ಎಚ್ಚರಿಕೆ ನೀಡಿದೆ. ಈ ಬೆಳವಣಿಗೆ ಹಿನ್ನೆಲೆಯಲ್ಲಿ ಪ್ರಧಾನಿ ಚೀನಾ ಭೇಟಿ ಮಹತ್ವದ ಪಡೆದಿದೆ.
2019ರಲ್ಲಿ ಕೊನೆಯ ಬಾರಿ ಮೋದಿ ಚೀನಾ ಪ್ರವಾಸ ಕೈಗೊಂಡಿದ್ದರು. ಆದರೆ ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಅವರನ್ನು 2024ರ ಬ್ರಿಕ್ಸ್ ಸಮ್ಮೇಳನದಲ್ಲಿ ಭೇಟಿ ಮಾಡಿದ್ದರು.
ಅಮೆರಿಕದ ಸುಂಕ ಸಮರದ ಜೊತೆ ಪಾಕಿಸ್ತಾನ ವಿರುದ್ಧದ ದಾಳಿಗೆ ಚೀನಾ ಬೆಂಬಲ ನೀಡಿದ್ದು ಸೇರಿದಂತೆ ಹಲವು ಸುತ್ತಿನ ಮಾತುಕತೆ ನಡೆಯುವುದೇ ಎಂಬುದನ್ನು ಕಾದು ನೋಡಬೇಕಾಗಿದೆ.