ಹಾಸನ ಹೊರವಲಯದ ಕೆಂಚನಹಳ್ಳಿ ಬಳಿ ಚಲಿಸುತ್ತಿದ್ದ ಬೈಕ್‌ಗೆ ಲಾರಿ ಡಿಕ್ಕಿ ಹೊಡೆದು ಪೊಲೀಸ್ ಕಾನ್ಸ್‌ಟೇಬಲ್ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.
ಪ್ರಕಾಶ್ (38) ಮೃತಪಟ್ಟ ಪೊಲೀಸ್ ಕಾನ್ಸ್‌ಟೇಬಲ್. ಅವರು 1ನೇ ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಪ್ರಕಾಶ್ ಹಾಸನ ನಗರದಿಂದ ಸರ್ಕಾರಿ ದ್ವಿಚಕ್ರ ವಾಹನದಲ್ಲಿ ಗಾಡೇನಹಳ್ಳಿಗೆ ಕರ್ತವ್ಯಕ್ಕೆ ತೆರಳುತ್ತಿದ್ದಾಗ ಬೈಕ್‌ಗೆ ಲಾರಿ ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ.
ಡಿಕ್ಕಿಯ ತೀವ್ರತೆಗೆ ಪ್ರಕಾಶ್ ಸ್ಥಳದಲ್ಲೇ ಅಸು ನೀಗಿದ್ದಾರೆ, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಕ್ರಮ ಕೈಗೊಂಡಿದ್ದಾರೆ.