ಗೋವಿಂದಪುರ ಪೊಲೀಸ್ ಠಾಣೆಯಲ್ಲಿ ಕರ್ತವ್ಯದಲ್ಲಿದ್ದ ಪೇದೆಯೊಬ್ಬರು ಕಳ್ಳನ ಜೊತೆ ರೂಮ್ ಶೇರ್ ಮಾಡಿ ಕರ್ತವ್ಯ ಲೋಪ ಎಸಗಿ ಕೆಲಸದಿಂದ ಅಮಾನತುಗೊಂಡಿದ್ದಾರೆ.
ಗೋವಿಂದಪುರ ಠಾಣೆಯ ಕಾನ್ಸ್ಟೇಬಲ್ ಹೆಚ್.ಆರ್ ಸೋನಾರ್, ಕಳ್ಳ ಸಲೀಂ ಅಲಿಯಾಸ್ ಬಾಂಬೆ ಸಲೀಂ ಜೊತೆ ರೂಂ ಶೇರ್ ಮಾಡಿದ್ದ. ಬಾಂಬೆ ಸಲೀಂನನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದಾಗ ಪೇದೆಯ ಕೃತ್ಯ ಬಯಲಾಗಿದೆ.
ಸಲೀಂ ಮೊಬೈಲ್‌ನಲ್ಲಿ ಆತನು ಸೋನಾರ್‌ನ ಪೊಲೀಸ್ ಯೂನಿಫಾರ್ಮ್ ಧರಿಸಿದ್ದ ಫೋಟೊಗಳು ಪತ್ತೆಯಾಗಿವೆ. ಪೊಲೀಸ್ ಯೂನಿಫಾರ್ಮ್ ಹಾಕೊಂಡು ಪತ್ನಿಗೆ ಖದೀಮ ಸಲೀಂ ವೀಡಿಯೊ ಕಾಲ್ ಮಾಡಿರುವುದು ಪತ್ತೆಯಾಗಿದೆ.
ವಿಚಾರಣೆಯ ವೇಳೆ ಪೊಲೀಸ್ ಕಾನ್ಸ್ಟೇಬಲ್ ಸೋನಾರ್‌ನ ಮನೆಯಲ್ಲಿ ಸಲೀಂ ವಾಸವಿದ್ದ ವಿಚಾರ ಬಯಲಾಗಿದೆ. ಕಳ್ಳನ ಜೊತೆ ರೂಂ ಶೇರ್ ಮಾಡಿ ಕರ್ತವ್ಯ ಲೋಪವೆಸಗಿದ ಪೊಲೀಸ್ ಕಾನ್ಸ್ಟೇಬಲ್ ಸೋನಾರ್‌ನನ್ನು ಪೂರ್ವ ವಿಭಾಗ ಡಿಸಿಪಿ ದೇವರಾಜ್ ಅಮಾನತು ಮಾಡಿದ್ದಾರೆ. ಸಲೀಂನ ಜೊತೆ ಪೊಲೀಸ್ ಪೇದೆ ಸ್ನೇಹ ಮಾತ್ರ ಇಟ್ಟುಕೊಂಡಿರುವುದೇ ಅಥವಾ ಬೇರೆ ಲಿಂಕ್ ಇದೆಯಾ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ.