Menu

ದರೋಡೆಯಾಗಿದ್ದ 400 ಕೋಟಿ ರೂ.ಗಳ ಕಂಟೇನರ್ ಬೆಳಗಾವಿ ಗಡಿ ಭಾಗದಲ್ಲಿ ವಶ, ಇಬ್ಬರ ಬಂಧನ

ಬೆಳಗಾವಿ-ಗೋವಾ ಗಡಿ ಚೋರ್ಲಾ ಘಾಟ್​​ದಿಂದ ನಾಪತ್ತೆಯಾಗಿದ್ದ 400 ಕೋಟಿ ರೂ.ಗಳ ಎರಡು ಕಂಟೇನರ್​​ಗಳನ್ನು ಗೋವಾದಿಂದ ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದಾಗ ಬೆಳಗಾವಿ ಗಡಿ ಭಾಗದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

2025 ಅಕ್ಟೋಬರ್ 16ರಂದು ನಡೆದಿರುವ ದೇಶದ ಅತಿ ದೊಡ್ಡ ದರೋಡೆ ಪ್ರಕರಣ ಈ ಮೂಲಕ ಬೆಳಕಿಗೆ ಬಂದಿದೆ. ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರ ರಾಜ್ಯಗಳ ಪೊಲೀಸ್​​ಗೆ ಈ ಪ್ರಕರಣ ದೊಡ್ಡ ಸವಾಲಾಗಿ ಪರಿಣಮಿಸಿತ್ತು. ನಾಸಿಕ್​ ಪೊಲೀಸರು ಪ್ರಕರಣ ಸಂಬಂಧ ನಾಲ್ವರನ್ನು ಬಂಧಿಸಿದ್ದು, ಉಳಿದ ಇಬ್ಬರಿಗಾಗಿ ಶೋಧ ನಡೆಸಿದ್ದಾರೆ.

ಘಟನೆ ನಡೆದು ತಿಂಗಳ ಬಳಿಕ ಪ್ರಕರಣ ಪತ್ತೆಯಾಗಿದ್ದು, ಮೂರು ರಾಜ್ಯದ ಪೊಲೀಸರೇ ಬೆಚ್ಚಿಬೀಳುವಂತಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ನಡೆದ ಈ ದರೋಡೆ ಪ್ರಕರಣ ಮಹಾರಾಷ್ಟ್ರದಲ್ಲಿ ಸಂಚಲನ ಸೃಷ್ಟಿಸಿತ್ತು. ಹಾಗಾಗಿ ಕರ್ನಾಟಕ, ಮಹಾರಾಷ್ಟ್ರ ಮತ್ತು ಗೋವಾ ಪೊಲೀಸರು ಕಂಟೇನರ್ ಹುಡುಕಾಟಕ್ಕೆ ಕಾರ್ಯಾಚರಣೆ ತೀವ್ರಗೊಳಿಸಿದ್ದರು.

ಮಹಾರಾಷ್ಟ್ರ ‌ಸಿಎಂ ದೇವೇಂದ್ರ ಫಡ್ನವಿಸ್, ಪ್ರಕರಣ ತನಿಖೆಗೆ ಎಸ್ಐಟಿ ರಚನೆ ಮಾಡಿ ಆದೇಶ ಹೊರಡಿಸಿದ್ದಾರೆ. ದರೋಡೆ ಆಗಿರುವ ಭಾರಿ ಮೊತ್ತವು ಮಹಾರಾಷ್ಟ್ರ ರಿಯಲ್ ಎಸ್ಟೇಟ್ ಉದ್ಯಮಿ ಕಿಶೋರ್ ಶೇಟ್​ಗೆ ಸೇರಿದ್ದು ಎಂದು ಹೇಳಲಾಗುತ್ತಿದೆ.

ನಾಸಿಕ್ ಮೂಲದ ಸಂದೀಪ್ ಪಾಟೀಲ್ ಎಂಬಾತನ ಅಪಹರಣದಿಂದ ಪ್ರಕರಣದಿಂದ ಈ ದರೋಡೆ ಕೇಸ್‌ ಬಯುಲಾಗಿದೆ. ಕಂಟೇನರ್ ದರೋಡೆ ಆದ ಬಳಿಕ ಕಿಶೋರ್ ಶೇಟ್ ಸಹಚರರು ಸಂದೀಪ್ ಪಾಟೀಲ್​​ಗೆ ಗನ್ ಪಾಯಿಂಟ್ ತೋರಿಸಿ ಅಪಹರಿ ಸಿದ್ದರು. ಕಂಟೇನರ್ ಹೈಜಾಕ್‌ಗೆ ನೀನೇ ಕಾರಣ ಎಂದು ಒಂದೂವರೆ ತಿಂಗಳು ಒತ್ತೆಯಾಳಾಗಿಸಿಕೊಂಡು ಚಿತ್ರಹಿಂಸೆ ನೀಡಿದ್ದಾರೆ.

400 ಕೋಟಿ ರೂ ಹಣ ಕೊಡದಿದ್ದರೆ ಜೀವ ತೆಗೆಯುತ್ತೇವೆಂದು ಬೆದರಿಕೆ ಹಾಕಿದ್ದಾರೆ. ಅಪಹರಣಕಾರರಿಂದ ತಪ್ಪಿಸಿಕೊಂಡು ಬಂದ ಸಂದೀಪ್​​ ನಾಸಿಕ್ ಪೊಲೀಸ್​ ಠಾಣೆಗೆ ದೂರು ನೀಡಿದ್ದರು. 400 ಕೋಟಿ ರೂ.ಗಳಿದ್ದ ವಾಹನ ಅಪಹರಿಸಿರುವ ಬಗ್ಗೆ
ಸಂದೀಪ್ ಪಾಟೀಲ್​​ ಹೇಳಿಕೆ ಬಿಡುಗಡೆ ಮಾಡಿದ್ದು, ಇದು 400 ಕೋಟಿ ರೂ.ಪ್ರಕರಣ ಅಲ್ಲ, 1000 ಕೋಟಿ ರೂ ಪ್ರಕರಣ. ಚೋರ್ಲಾ ಘಾಟ್​ನಲ್ಲಿ ರದ್ದಾದ 2000 ನೋಟು ತುಂಬಿದ ಹಣದ ಕಂಟೇನರ್​ ದರೋಡೆ ಆಗಿದೆ. ಆರೋಪಿಗಳು‌ ಬಿಲ್ಡರ್ ಕಿಶೋರ್​​​ಗೆ ನನ್ನ ಹೆಸರಿನಿಂದ ಕರೆ ಮಾಡಿ 100 ಕೋಟಿ ರೂ. ಡಿಮ್ಯಾಂಡ್​​ ಮಾಡಿರುವುದಾಗಿ ಹೇಳಿದ್ದಾರೆ.

ಕಿಶೋರ್ ಸಹಚರರು ನನ್ನ ಕಿಡ್ನ್ಯಾಪ್ ಮಾಡಿ ಚಿತ್ರಹಿಂಸೆ ಕೊಟ್ಟು ಬಿಡುಗಡೆ ಮಾಡಿದ್ದಾರೆ. ಮಹಾರಾಷ್ಟ್ರದ ಇಬ್ಬರು ಪೊಲೀಸ್ ಅಧಿಕಾರಿಗಳೇ ನನಗೆ ವಾಟ್ಸಪ್ ಕರೆ ಮಾಡಿ ಬೆದರಿಕೆ ಹಾಕಿದ್ದರು. ಕೆಲವು ದಿನ ಜೀವ ಭಯದಿಂದ ಸುಮ್ಮನಾಗಿದ್ದೆ. ವಿಚಾರ ಎಲ್ಲಿಯೂ ಬಾಯಿ ಬಿಡದಂತೆ ಪೊಲೀಸ್ ಅಧಿಕಾರಿಗಳ ಮೂಲಕ ಒತ್ತಡ ಹಾಕಲು ಯತ್ನಿಸಿದ್ದರು. ಆದರೂ ದೂರು ದಾಖಲಿಸಿರುವೆ. ನನ್ನ ಜೀವಕ್ಕೆ ತೊಂದರೆ ಆದರೆ ಬಿಲ್ಡರ್ ಕಿಶೋರ್ ಮತ್ತವರ ಸಹಚರರೇ ಹೊಣೆಗಾರರು ಎಂದು ಸಂದೀಪ್ ಪಾಟೀಲ್​​​  ಹೇಳಿಕೆ ಬಿಡುಗಡೆ ಮಾಡಿದ್ದಾರೆ.

Related Posts

Leave a Reply

Your email address will not be published. Required fields are marked *