ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (KSPCB) ಅಧ್ಯಕ್ಷರಾಗಿ ನೇಮಕಗೊಂಡಿರುವ ಹಿರಿಯ ಶಾಸಕ ಮಳವಳ್ಳಿ ನರೇಂದ್ರ ಸ್ವಾಮಿ ಅವರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಧನ್ಯವಾದ ಅರ್ಪಿಸಿದರು.
ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿರುವ ನರೇಂದ್ರ ಸ್ವಾಮಿ ಅವರು ನೀಡಿದ ಪುಷ್ಪಗುಚ್ಛವನ್ನು ಸ್ವೀಕರಿಸಿದ ಮುಖ್ಯಮಂತ್ರಿಗಳು ಶುಭ ಹಾರೈಸಿದರು.
ಮೂರು ಬಾರಿ ಮಳವಳ್ಳಿ ಕ್ಷೇತ್ರದ ಶಾಸಕರಾಗಿರುವ ನರೇಂದ್ರಸ್ವಾಮಿ ಅವರು 1974 ರ ನೀರು (ಮಾಲಿನ್ಯ ತಡೆಗಟ್ಟುವಿಕೆ ಮತ್ತು ನಿಯಂತ್ರಣ) ಕಾಯ್ದೆಯ ಸೆಕ್ಷನ್ 4 (2)ರಡಿ ಮತ್ತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ನಾಮನಿರ್ದೇಶನ ವಿಧಾನ ಮತ್ತು ಅಧ್ಯಕ್ಷರು ಮತ್ತು ಸದಸ್ಯರ ಸೇವಾ ನಿಯಮಗಳು ಮತ್ತು ಇತರ ಷರತ್ತುಗಳು ಮತ್ತು ಸದಸ್ಯ ಕಾರ್ಯದರ್ಶಿ ನೇಮಕಾತಿ) ನಿಯಮಗಳು 2024ರ ಅನುಸಾರ ಮೂರು ವರ್ಷಗಳ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ ಜಾರಿಯಲ್ಲಿರು ವಂತೆ ಈ ಹುದ್ದೆಗೆ ನಾಮನಿರ್ದೇಶನಗೊಂಡಿದ್ದಾರೆ.