ಮೈಸೂರು: ರಾಜಕೀಯ ನಾಯಕರ ಅರೆ ಬೆತ್ತಲೆ ಚಿತ್ರದ ಮೇಲೆ ಒಂದು ಧರ್ಮದ ಕುರಿತು ಅವಹೇಳನಕಾರಿ ಪದಗಳ ಬಳಸಿದ ಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಹಿನ್ನೆಲೆಯಲ್ಲಿ ಉದಯಗಿರಿಯಲ್ಲಿ ಘರ್ಷಣೆ ನಡೆದಿರುವ ಪ್ರಸಂಗ ತಡವಾಗಿ ಬೆಳಕಿಗೆ ಬಂದಿದೆ.
ನಿನ್ನೆ ರಾತ್ರಿ ವ್ಯಕ್ತಿಯೊಬ್ಬರೂ ರಾಷ್ಟ್ರೀಯ ರಾಜಕೀಯ ನಾಯಕರ ಅರೆಬೆತ್ತಲೆ ಚಿತ್ರದ ಮೇಲೆ ಒಂದು ಧರ್ಮದ ಅವಹೇಳನಾಕಾರಿ ಪದಗಳನ್ನು ಬರೆದು ತನ್ನ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಇದನ್ನರಿತ ಒಂದು ಧರ್ಮದ ಜನರು ಒಂದು ಧರ್ಮದ ಬಗ್ಗೆ ಅವಹೇನ ಮಾಡಿದವರ ಬಗ್ಗೆ ಕ್ರಮ ಕೈಗೊಳ್ಳುವಂತೆ ಠಾಣೆಯಲ್ಲಿ ದೂರು ನೀಡಲು ಮುಂದಾಗಿದ್ದಾರೆ.
ಈ ವೇಳೆ ಪೊಲೀಸ್ ಠಾಣೆ ಸಮೀಪ ದೊಡ್ಡ ಮಟ್ಟದ ಗಲಾಟೆ ನಡೆದಿದ್ದು, ಪೊಲೀಸ್ ವಾಹನಗಳ ಮೇಲೂ ಕಲ್ಲು ತೂರಾಟ ನಡೆದು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತರು, ಸಹಾಯಕ ಪೊಲೀಸ್ ಆಯುಕ್ತರು ಆಗಮಿಸಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ. ಸದ್ಯ ಪರಿಸ್ಥಿತಿ ಬೂದಿ ಮುಂಚಿದಂತಿದ್ದು, ಇಂದು ಪ್ರಕರಣ ಸಂಬಂಧ ಉನ್ನತ ಮಟ್ಟದ ತನಿಖೆ ಹಾಗೂ ದೂರು ದಾಖಲಾಗುವ ಸಾಧ್ಯತೆಯಿದೆ.