ಬೆಳಗಾವಿ : ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದ್ದು, ಗಾಯಗೊಂಡು ಪ್ರಯಾಣಿಕರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬೇಟಿ ನೀಡಿ, ಗಾಯಾಳುಗಳ ಆರೋಗ್ಯ ವಿಚಾರಿಸಿದರು.
ಸುವರ್ಣ ವಿಧಾನ ಸೌಧದ ವ್ಯಾಪ್ತಿಯ ಕೆಕೆ ಕೊಪ್ಪ ಗ್ರಾಮಕ್ಕೆ ತೆರಳುವ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಕೆಲವು ಪ್ರಯಾಣಿಕರಿಗೆ ಗಾಯಗಳಾಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈ ವಿಷಯ ಗಮನಿಸಿದ ಸಚಿವೆ ಆಸ್ಪತ್ರೆಗೆ ತೆರಳಿ ಗಾಯಾಳುಗಳ ಆರೋಗ್ಯ ವಿಚಾರಿಸಿ, ಎಲ್ಲರಿಗೂ ಧೈರ್ಯವನ್ನು ತುಂಬಿದರು. ಸೂಕ್ತ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚನೆಯನ್ನು ನೀಡಿದರು.
ಈ ಸಂದರ್ಭದಲ್ಲಿ ವೀರೇಶ ಹಿರೇಮಠ ಹಾಗೂ ಆಸ್ಪತ್ರೆಯ ಸಿಬ್ಬಂದಿ ಇತರರು ಇದ್ದರು.