ದರ್ಶನ್ ಜಾಮೀನು ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಪೊಲೀಸರಿಂದ ಮೇಲ್ಮನವಿ
ನಟ ದರ್ಶನ್ ಗೆ ಹೈಕೋರ್ಟ್ ನೀಡಿರುವ ಮಧ್ಯಂತರ ಜಾಮೀನು ಪ್ರಶ್ನಿಸಲು ರಾಜ್ಯ ಸರ್ಕಾರ ಅನುಮತಿ ನೀಡಿದ ಬೆನ್ನಲ್ಲೇ ಪೊಲೀಸರು ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದಾರೆ.
ಬೆನ್ನು ನೋವಿನಿಂದ ನರಳುತ್ತಿರುವ ದರ್ಶನ್ ಗೆ ಚಿಕಿತ್ಸೆ ನೀಡಲು ಹೈಕೋರ್ಟ್ ೬ ವಾರಗಳ ಮಧ್ಯಂತರ ಜಾಮೀನು ನೀಡಿತ್ತು.
ಮಧ್ಯಂತರ ಜಾಮೀನು ಪ್ರಶ್ನಿಸಿ ಪೊಲೀಸರು ಸುಪ್ರೀಂಕೋರ್ಟ್ ಮೊರೆ ಹೋಗಲು ನಿರ್ಧರಿಸಿದ್ದು, ಈ ಪ್ರಸ್ತಾಪಕ್ಕೆ ರಾಜ್ಯ ಸರ್ಕಾರ ಅನುಮತಿ ನೀಡಿದೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ-೨ ಆರೋಪಿಯಾಗಿರುವ ದರ್ಶನ್ ಗೆ ಬೆನ್ನು ನೋವಿನ ಕಾರಣ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಿಕಿತ್ಸೆ ನೀಡುವ ಉದ್ದೇಶದಿಂದ ಹೈಕೋರ್ಟ್ ೬ ವಾರಗಳ ಕಾಲ ಮಧ್ಯಂತರ ಜಾಮೀನು ನೀಡಿತ್ತು.
ಪ್ರಕರಣದಲ್ಲಿ ಈಗಾಗಲೇ ಹಲವಾರು ಆರೋಪಿಗಳಿಗೆ ಜಾಮೀನು ನೀಡಲಾಗಿದೆ. ಈ ನಡುವೆ ದರ್ಶನ್ ಪರ ವಕೀಲರು ಮಧ್ಯಂತರ ಜಾಮೀನು ಜೊತೆಗೆ ಸಹಜ ಜಾಮೀನು ಪಡೆಯಲು ಪ್ರಯತ್ನಿಸಲಿದ್ದಾರೆ.