ವಿದ್ಯುತ್ ಬಿಲ್ ಅಕ್ರಮ ಮೂವರ ಅಮಾನತು: ಸುನಿಲ್ ಕುಮಾರ್

ವಿದ್ಯುತ್ ಬಿಲ್ ಅಕ್ರಮ ಮೂವರ ಅಮಾನತು: ಸುನಿಲ್ ಕುಮಾರ್

 

 

ಬೆಂಗಳೂರು, ಸೆಪ್ಟಂಬರ್ 4  ವಿದ್ಯುತ್ ಬಿಲ್ ನಲ್ಲಿ ತಿದ್ದುಪಡಿ ಮಾಡಿ ಬೆಸ್ಕಾಂಗೆ ನಷ್ಟ ಉಂಟು

ಮಾಡಿದ ಮೂವರು ಸಿಬ್ಬಂದಿಯನ್ನು ಅಮಾನತು ಮಾಡಿರುವುದಾಗಿ ಇಂಧನ ಸಚಿವ ಸುನಿಲ್ ಕುಮಾರ್
ಹೇಳಿದ್ದಾರೆ.
ಮುಳಬಾಗಿಲು ಉಪವಿಭಾಗದ ಮೆಹಬೂಬ್ ಪಾಷ, ಕಿರಿಯ ಸಹಾಯಕ, ಗಾಯತ್ರಮ್ಮ ,ಕಿರಿಯ ಸಹಾಯಕಿ
ಹಾಗೂ ಸುಜಾತಮ್ಮ, ಕಿರಿಯ ಸಹಾಯಕಿ ,ಈ ಮೂವರು ಅaaವನತಿ ಗೊಳಗಾದ ಸಿಬ್ಬಂದಿ ಯಾಗಿದ್ದಾರೆ.
ಇವರು ಪ್ರತಿ ಮಾಹೆ ಗ್ರಾಹಕರಿಗೆ ವಿದ್ಯುತ್ ಬಿಲ್ಲು ವಿತರಿಸುವ ವೇಳೆಯಲ್ಲಿ ಕೆಲವು ಬಿಲ್ಲುಗಳನ್ನು ಮಾರ್ಪಾಟು
ಮಾಡಿ ಅದರ ಮೊತ್ತ ಕಡಿಮೆ ಮಾಡಿ ಆ ಮೂಲಕ ಬೆಸ್ಕಾಂಗೆ ಬರಬೇಕಾದ ವಾಸ್ತವಿಕ ಆದಾಯದಲ್ಲಿ ನಷ್ಟವಾಗಲು
ಕಾರಣರಾಗಿದ್ದಾರೆ, ಈ ಹಿನ್ನೆಲೆಯಲ್ಲಿ ಇವರ ಮೇಲೆ ಕೋಲಾರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ಕೂಡ
ದಾಖಲಿಸಲಾಗಿದೆ ಎಂದು ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ.

ತಾವು ಇಲಾಖೆಯಲ್ಲಿ ಯಾವುದೇ ರೀತಿಯ ಭ್ರಷ್ಟಾಚಾರವನ್ನು ಸಹಿಸುವುದಿಲ್ಲ, ಅಕ್ರಮದ ಮೂಲಕ ಮೂಲಕ
ಇಲಾಖೆಗೆ ನಷ್ಟವುಂಟು ಮಾಡುವ ಯಾವುದೇ ಅಧಿಕಾರಿ, ಸಿಬ್ಬಂದಿ ಇರಲಿ ಅವರ ಮೇಲೆ ಮುಲಾಜಿಲ್ಲದೆ ಕ್ರಮ
ಕೈಗೊಳ್ಳಲಾಗುವುದು ಎಂದು ಸಚಿವವರು ಹೇಳಿದ್ದಾರೆ.
ಪ್ರಸ್ತುತ ಈ ಮೂವರು ಸಿಬ್ಬಂದಿ ಗಳು ಬೇರೆ, ಬೇರೆ ಐ ಪಿ ವಿಳಾಸಗಳ ಗಣಕಯಂತ್ರಗಳಲ್ಲಿ ಐ ಡಿ ಗಳನ್ನು
ಉಪಯೋಗಿಸಿ ವಂಚನೆ ಎಸಗಿರುವುದು ದೃಢ ವಾಗಿದ್ದು, ಇವರ ವಿರುದ್ದ ಇಲಾಖಾ ವಿಚಾರಣೆ ನಡೆಸಿ ಶಿಸ್ತು ಕ್ರಮ
ಕೈಗೊಳ್ಳಲು ಆದೇಶಿಸಲಾಗಿದೆ.

, ,

Leave a Reply

Your email address will not be published. Required fields are marked *