ಬೆಂಗಳೂರಿನ ಆಡುಗೋಡಿ ವ್ಯಾಪ್ತಿಯಲ್ಲಿ ನವೆಂಬರ್ 18 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ನಿರ್ವಹಣಾ ಕಾಮಗಾರಿ ನಡೆಯಲಿದ್ದು, ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.
ಆಡುಗೋಡಿ, ಸಲಾಪುರಿಯಾ ಟವರ್, ಬಿಗ್ ಬಜಾರ್, ಆಕ್ಸೆಂಚರ್, ಕೆ.ಎಮ್.ಎಫ್ ಗೋಡೌನ್, ನಂಜಪ್ಪ ಲೇಔಟ್, ನ್ಯೂ ಮೈಕೋ ರಸ್ತೆ, ಚಿಕ್ಕಲಕ್ಷ್ಮೀ ಲೇಔಟ್, ಮಹಲಿಂಗೇಶ್ವರ ಬಡಾವಾಣೆ, ಬೆಂಗಳೂರು ಡ್ಯೆರಿ, ಫೋರಮ್, ರಂಗದಾಸಪ್ಪ ಲೇಔಟ್, ಲಕ್ಕಸಂದ್ರ, ವಿಲ್ಸನ್ ಗಾರ್ಡನ್, ಚಿನ್ನಯ್ಯನ್ನ ಪಾಳ್ಯ, ಚಂದ್ರಪ್ಪ ನಗರ, ನಿಮ್ಯಾನ್ಸ್ ಅಡ್ಮಿನಿಸ್ರೆಟಿವ್ ಬ್ಲಾಕ್, ಬಂಡೆ ಸ್ಲಮ್, ಸುಣ್ಣದಕಲ್ಲು, ಬೃಂದವನ ಸ್ಲಮ್, ಲಾಲ್ ಜಿ ನಗರ, ಶಾಮಣ್ಣ ಗಾರ್ಡನ್ , ಎನ್ ಡಿ ರ್ ಐ, ಪೋಲಿಸ್ ವಸತಿ ಗೃಹಗಳು ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ಬೆಸ್ಕಾಂ ಕೇಂದ್ರ ಕಚೇರಿ ಮಾಹಿತಿ ನೀಡಿದೆ.
6/11 ಕೆವಿ ಶೋಭಾ ಸಿಟಿ ಉಪಕೇಂದ್ರದಲ್ಲಿ ಬೆಸ್ಕಾಂ ತುರ್ತು ನಿರ್ವಹಣಾ ಕಾರ್ಯ ಕೈಗೊಳ್ಳಲಿದ್ದು,ಶೋಭಾ ಸಿಟಿ, ಚೋಕ್ಕನಹಳ್ಳಿ, ಡೊಮಿನೋಸ್ ಪಿಜ್ಜಾ-ಪ್ಯಾರಡೈಸ್ ನೂರ್ ನಗರ, ಎಕ್ಸ್-ಸರ್ವಿಸ್‌ಮೆನ್ ಲೇಔಟ್, ಪೊಲೀಸ್ ಕ್ವಾರ್ಟರ್ಸ್, ಆರ್.ಕೆ. ಹೆಗ್ಡೆ ನಗರ, ಶಬರಿ ನಗರ, ನ್ಯೂ ಶಾಂತಿ ನಗರ,ಕೆಂಪೇಗೌಡ ಲೇಔಟ್, ನಾಗೇನಹಳ್ಳಿ ಗ್ರಾಮ, ರಿಜೆನ್ಸಿ ಪಾರ್ಕ್, ಎಸ್ತರ್ ಹಾರ್ಮೋನಿಕ್ ಲೇಔಟ್, ಬಾಲಾಜಿ ಲೇಔಟ್, ನಾಗೇನಹಳ್ಳಿ ಜಿಮ್, ಸ್ಲಮ್ ಬರ್ಡ್, ಬೆಂಚ್ ರಾಯಲ್ ವುಡ್, ಅರ್ಕಾವತಿ ಲೇಔಟ್, ಥಣಿಸಂದ್ರ, ಆರ್.ಕೆ. ಹೆಗ್ಡೆ ನಗರ, ಬೆಳ್ಳಹಳ್ಳಿ ಗ್ರಾಮ, ತಿರುಮೇನಹಳ್ಳಿ ಗ್ರಾಮ, ಮಿಟ್ಟಗನಹಳ್ಳಿ, ಕೋಗಿಲು ಗ್ರಾಮದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ವಿದ್ಯುತ್ ವ್ಯತ್ಯಯದ ಕಾರಣ ಸಾರ್ವಜನಿಕರು ಸಹರಿಸಬೇಕು, ನಿರ್ವಹಣಾ ಕಾರ್ಯಗಳು ಭವಿಷ್ಯದಲ್ಲಿನ ವಿದ್ಯುತ್ ತೊಂದರೆಗಳನ್ನು ತಪ್ಪಿಸಲು ಮತ್ತು ಸೇವಾ ಗುಣಮಟ್ಟವನ್ನು ಹೆಚ್ಚಿಸಲು ಅತ್ಯವಶ್ಯ ಎಂದು ಬೆಸ್ಕಾಂ ತಿಳಿಸಿದೆ.


