Monday, September 01, 2025
Menu

ಆಫ್ಘನ್‌ನಲ್ಲಿ ಪ್ರಬಲ ಭೂಕಂಪಕ್ಕೆ 622 ಮಂದಿ ಬಲಿ, ಸಾವಿನ ಸಂಖ್ಯೆ ಹೆಚ್ಚಳ ಸಾಧ್ಯತೆ

ಅಫ್ಘಾನಿಸ್ತಾನದಲ್ಲಿ 6.0 ತೀವ್ರತೆಯ ಭೂಕಂಪ ಸಂಭವಿಸಿದ್ದು, ಕನಿಷ್ಠ 622 ಮಂದಿ ಮೃತಪಟ್ಟಿದ್ದರೆ 500ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಭಾನುವಾರ ರಾತ್ರಿ ಸ್ಥಳೀಯ ಕಾಲಮಾನ 11:47ಕ್ಕೆ ಭೂಕಂಪ ಸಂಭವಿಸಿದೆ. ಭೂಕಂಪದ ಕೇಂದ್ರಬಿಂದುವು ಆಗ್ನೇಯ ಅಫ್ಘಾನಿಸ್ತಾನದಲ್ಲಿ 160 ಕಿ.ಮೀ ಆಳದಲ್ಲಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.

ಭೂಕಂಪದಿಂದ ಕುನಾರ್ ಪ್ರಾಂತ್ಯದ ಮೂರು ಹಳ್ಳಿಗಳು ಸಂಪೂರ್ಣವಾಗಿ ನೆಲಸಮಗೊಂಡು, ಹಲವು ಹಳ್ಳಿಗಳಲ್ಲಿ ಭಾರೀ ಹಾನಿ ಉಂಟಾಗಿದೆ, ಒಂದೇ ಗ್ರಾಮದಲ್ಲಿ 30 ಮಂದಿ ಅಸು ನೀಗಿದ್ದಾರೆ. ಸಾವುನೋವುಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಆಫ್ಘನ್‌ ಆರೋಗ್ಯ ಸಚಿವಾಲಯ ಹೇಳಿದೆ.

ತೀವ್ರ ಹಾನಿಗೊಳಗಾದ ಪ್ರದೇಶಗಳಲ್ಲಿ ರಕ್ಷಣಾ ಕಾರ್ಯಾಚರಣೆ ಬಿರುಸಾಗಿ ನಡೆಯುತ್ತಿದೆ. ಬೇರೆ ದೇಶಗಳು ರಕ್ಷಣಾ ಅಥವಾ ಪರಿಹಾರ ಕಾರ್ಯಗಳಿಗೆ ಬೆಂಬಲ ನೀಡಲು ಮುಂದೆ ಬಂದಿಲ್ಲ ಎಂದು ಅಫ್ಘಾನಿಸ್ತಾನದ ವಿದೇಶಾಂಗ ಕಚೇರಿಯ ವಕ್ತಾರರು ತಿಳಿಸಿದ್ದಾರೆ.

ಪಾಕಿಸ್ತಾನ ಮತ್ತು ಉತ್ತರ ಭಾರತದ ಕೆಲವು ಪ್ರದೇಶಗಳಲ್ಲಿಯೂ ಭೂಕಂಪದ ಅನುಭವವಾಗಿದೆ. ದೆಹಲಿ ಎನ್‌ಸಿಆರ್ ಮತ್ತು ಇತರ ನಗರಗಳ ನಿವಾಸಿಗಳು ಕಂಪನದ ಅನುಭವ ಆದಾಗ ಭಯದಿಂದ ಕಟ್ಟಡಗಳಿಂದ ಹೊರಗೆ ಓಡಿದ್ದಾರೆ ಎಂದು ಮೂಲಗಳು ಮಾಧ್ಯಮ ತಿಳಿಸಿವೆ.

Related Posts

Leave a Reply

Your email address will not be published. Required fields are marked *