Menu

ಪ್ರಜ್ವಲ್ ರೇವಣ್ಣಗೆ ಮುಖಭಂಗ: 2ನೇ ಪ್ರಕರಣದಲ್ಲೂ ಅರ್ಜಿ ವಜಾ

prajwal revanna

ಬೆಂಗಳೂರು: ಮಹಿಳೆಯರ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಎರಡನೇ ಬಾರಿ ಸಲ್ಲಸಿದ್ದ ಅರ್ಜಿಯೂ ವಜಾಗೊಂಡಿದೆ.

ಹೊಳೆನರಸೀಪುರ ಅತ್ಯಾಚಾರ ಕೇಸ್ ನಲ್ಲಿ ಪ್ರಜ್ವಲ್ ರೇವಣ್ಣ ಜಾಮೀನು ಕೋರಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಎರಡನೇ ಬಾರಿಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ಕೋರ್ಟ್​, ಇಂದು(ಜುಲೈ 25) ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.

ಪ್ರಕರಣದಲ್ಲಿ ಆರೋಪಿ ಪ್ರಜ್ವಲ್‌ ಜಾಮೀನು ಕೋರಿ ಮೊದಲ ಬಾರಿಗೆ ಸಲ್ಲಿಸಿದ್ದ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಹೈಕೋರ್ಟ್‌ ಮತ್ತು ಸುಪ್ರೀಂ ಕೋರ್ಟ್‌ ವಜಾಗೊಳಿಸಿತ್ತು. ಬಳಿಕ ಪ್ರಜ್ವಲ್‌ ಜಾಮೀನು ಕೋರಿ ಕಳೆದ ಜೂನ್‌ನಲ್ಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ್ದ ಹೈಕೋರ್ಟ್‌, ವಿಚಾರಣಾಧೀನ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸುವಂತೆ ಸೂಚಿಸಿತ್ತು. ಅದರಂತೆ ಪ್ರಜ್ವಲ್‌ ಜಾಮೀನು ಕೋರಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಎರಡನೇ ಬಾರಿಗೆ ಅರ್ಜಿ ಸಲ್ಲಿಸಿದ್ದರು.

ಆರೋಪಿ ಪರ ಹಿರಿಯ ವಕೀಲ ವಿಕ್ರಂ ಹುಯಿಲಗೋಳ ವಾದ ಮಂಡಿಸಿ, ಪ್ರಜ್ವಲ್‌ ಬಂಧನವಾಗಿ 14 ತಿಂಗಳು ಕಳೆದಿದೆ. ಇದೇ ಪ್ರಕರಣದ ಆರೋಪಿ ಎಚ್‌ ಡಿ ರೇವಣ್ಣ ವಿರುದ್ಧದ ತನಿಖೆಗೆ ಹೈಕೋರ್ಟ್‌ ತಡೆ ನೀಡಿದೆ. ಹೀಗಾಗಿ ಪ್ರಜ್ವಲ್‌ಗೂ ಜಾಮೀನು ನೀಡುವಂತೆ ಕೋರಿದ್ದರು.

ಸಿಐಡಿಯ ಎಸ್‌ಐಟಿ ತನಿಖಾಧಿಕಾರಿಗಳ ಪರ ವಿಶೇಷ ಸರ್ಕಾರಿ ಅಭಿಯೋಜಕರು, ವಾದ ಮಂಡನೆ ಮಂಡಿದ್ದರು. ಈ ವಾದ ಪ್ರತಿವಾದ ಆಲಿಸಿದ್ದ ಜನಪ್ರತಿನಿಧಿಗಳ ವಿಶೇಷ ಕೋರ್ಟ್, ಪ್ರಜ್ವಲ್ ರೇವಣ್ಣ ಅವರ ಜಾಮೀನು ಅರ್ಜಿಯನ್ನು ತಿರಸ್ಕೃತಗೊಳಿಸಿ ಆದೇಶ ಹೊರಡಿಸಿದೆ. ಇದರೊಂದಿಗೆ ಎರಡನೇ ಬಾರಿಗೆ ಜಾಮೀನು ಸಿಗುವ ನಿರೀಕ್ಷೆಯಲ್ಲಿದ್ದ ಪ್ರಜ್ವಲ್ ರೇವಣ್ಣಗೆ ನಿರಾಸೆಯಾಗಿದೆ.

Related Posts

Leave a Reply

Your email address will not be published. Required fields are marked *