ಉಪ ರಾಷ್ಟ್ರಪತಿ ಸ್ಥಾನಕ್ಕೆ ಜಗದೀಪ್ ಧಂಕರ್ ನೀಡಿದ ರಾಜೀನಾಮೆಯನ್ನು ರಾಷ್ಟ್ರಪತಿ ದ್ರೌಪದಿ ಮರ್ಮು ಅಂಗೀಕರಿಸಿದ್ದಾರೆ.
ಅನಾರೋಗ್ಯದ ಕಾರಣವೊಡ್ಡಿ ಸೋಮವಾರ ದಿಢೀರನೆ ಉಪರಾಷ್ಟ್ರಪತಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ರಾಷ್ಟ್ರಪತಿಗಳಿಗೆ ಪತ್ರ ಬರೆದಿದ್ದರು. ಮಂಗಳವಾರ ರಾಷ್ಟ್ರಪತಿ ದ್ರೌಪದಿ ಮರ್ಮು ರಾಜೀನಾಮೆ ಅಂಗೀಕರಿಸಿದ್ದಾರೆ.
ಜಗದೀಪ್ ಧಂಕರ್ ಅನಾರೋಗ್ಯದಿಂದ ಶೀಘ್ರ ಚೇತರಿಸಿಕೊಳ್ಳಲಿ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವಿಟ್ ಮಾಡಿ ಶುಭ ಕೋರಿದ್ದಾರೆ.
ಸೋಮವಾರ ಮುಂಗಾರು ಅಧಿವೇಶನ ಆರಂಭವಾಗಿದ್ದು, ಸಂಜೆಯವರೆಗೂ ಯಾವುದೇ ಸುಳಿವು ನೀಡದ ಜಗದೀಪ್ ಧಂಕರ್ ರಾತ್ರಿ ದಿಢೀರನೆ ವೈದ್ಯಕೀಯ ಕಾರಣ ನೀಡಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದರು.
ಸಂವಿಧಾನದ 67(a) ವಿಧಿಯ ಪ್ರಕಾರ ʻಆರೋಗ್ಯ ಸಮಸ್ಯೆ ಮತ್ತು ವೈದ್ಯಕೀಯ ಸಲಹೆಯನ್ನು ಪಾಲಿಸಲು ತಕ್ಷಣದಿಂದಲೇ ಜಾರಿಗೆ ಬರುವಂತೆ ಉಪ ರಾಷ್ಟ್ರಪತಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆʼ ಎಂದು ಜಗದೀಪ್ ಧಂಕರ್ ಅವರು ತಮ್ಮ ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದರು.