Menu

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭೇಟಿ ಮಾಡಿದ ಚಿಲಿ ಗಣರಾಜ್ಯದ ಅಧ್ಯಕ್ಷ ಗೇಬ್ರಿಯಲ್

gehlot

ಬೆಂಗಳೂರು: ಬೆಂಗಳೂರಿನ ಪ್ರವಾಸಕ್ಕಾಗಿ ನಿನ್ನೆ ಬೆಂಗಳೂರಿಗೆ ಆಗಮಿಸಿದ್ದ ಚಿಲಿ ಗಣರಾಜ್ಯದ ಅಧ್ಯಕ್ಷ ಗೇಬ್ರಿಯಲ್ ಬೋರಿಕ್ ಫಾಂಟ್ ಅವರು ಇಂದು ರಾಜಭವನಕ್ಕೆ ಭೇಟಿ ನೀಡಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿದರು.

ಗೌರವಾನ್ವಿತ ರಾಜ್ಯಪಾಲರು ಚಿಲಿ ಗಣರಾಜ್ಯದ ಅಧ್ಯಕ್ಷರನ್ನು ಗುಲಾಬಿ ಹೂ ನೀಡಿ ಆತ್ಮೀಯವಾಗಿ ಬರಮಾಡಿಕೊಂಡರು. ನಂತರ ರಾಜ್ಯಪಾಲರೊಂದಿಗೆ ಚಿಲಿಯಿಂದ ಆಗಮಿಸಿದ್ದ ಸಚಿವರು ಹಾಗೂ ಅಧಿಕಾರಿಗಳ ಸಮ್ಮುಖದಲ್ಲಿ ಚರ್ಚೆ ನಡೆಸಿದರು.

ಈ ಸಮಯದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ಚಿಲಿ ಗಣರಾಜ್ಯದ ಗಣ್ಯರು, ಅಧಿಕಾರಿಗಳು ಹಾಗೂ ರಾಜಭವನದ ಅಧಿಕಾರಿಗಳು ಉಪಸ್ಥಿತರಿದ್ದರು.

Related Posts

Leave a Reply

Your email address will not be published. Required fields are marked *