ಗಲಭೆ ಪೀಡಿತ ಮಣಿಪುರದಲ್ಲಿ ತತ್ ಕ್ಷಣದಿಂದಲೇ ಜಾರಿಗೆ ಬರುವಂತೆ ರಾಷ್ಟ್ರಪತಿ ಆಳ್ವಿಕೆ ಹೇರಲಾಗಿದೆ.
ಮಣಿಪುರ ಸಿಎಂ ಸ್ಥಾನಕ್ಕೆ ಬಿರೇನ್ ಸಿಂಗ್ ರಾಜೀನಾಮೆ ನೀಡಿದ ಕೆಲವೇ ದಿನಗಳಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿ ಮಾಡಿ ಆದೇಶ ಹೊರಡಿಸಲಾಗಿದೆ.
ಕಳೆದ ಒಂದು ವರ್ಷದಿಂದ ನಡೆಯುತ್ತಿರುವ ಹಿಂಸಾಚಾರವನ್ನು ತಡೆಗಟ್ಟಲು ವಿಫಲವಾದ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ಫೆಬ್ರವರಿ 9ರಂದು ಬಿರೇನ್ ಸಿಂಗ್ ಮುಖ್ಯಮಂತ್ರಿ ಸ್ಥಾನಕ್ಕೆ ಬಿರೇನ್ ಸಿಂಗ್ ರಾಜೀನಾಮೆ ನೀಡಿದ್ದರು. ಇದರೊಂದಿಗೆ ಬಿಜೆಪಿ ಸರ್ಕಾರ ಪತನಗೊಂಡಿತ್ತು.
ಬಿರೇನ್ ಸಿಂಗ್ ರಾಜೀನಾಮೆ ನೀಡಿದ 3 ದಿನದಲ್ಲೇ ರಾಷ್ಟ್ರಪತಿ ದ್ರೌಪದಿ ಮರ್ಮು ರಾಷ್ಟ್ರಪತಿ ಆಳ್ವಿಕೆ ಜಾರಿ ಮಾಡಿ ಆದೇಶ ಹೊರಡಿಸಿದ್ದಾರೆ.