Wednesday, February 04, 2026
Menu

ಜಾತಕ ತೋರಿಸಲು ಹೋದರೆ ರೇಪ್‌: ಮೂಡಿಗೆರೆಯಲ್ಲಿ ಅರ್ಚಕನ ಬಂಧನ

ಮೂಡಿಗೆರೆ ತಾಲೂಕಿನ ಹೊರಟ್ಟಿ ಗ್ರಾಮದಲ್ಲಿ ಮದುವೆಯಾಗುತ್ತಿರುವ ಯುವತಿ ತನ್ನ ಜಾತಕ ತೋರಿಸಲು  ಹೋಗಿದ್ದ ಯುವತಿ ಮೇಲೆ ದೇವಸ್ಥಾನದ ಅರ್ಚಕ ಅತ್ಯಾಚಾರ ನಡೆಸಿರುವ ಘಟನೆ ನಡೆದಿದೆ.

ಯುವತಿ ಬಣಕಲ್‌ ಠಾಣೆಗೆ ದೂರು ನೀಡಿದ್ದು, ಪೊಲೀಸರು ಅರ್ಚಕ ಕೃಷ್ಣರಾವ್‌ ಎಂಬವರನ್ನು ಬಂಧಿಸಿದ್ದಾರೆ. ಆರೋಪಿ ಕೃಷ್ಣರಾವ್ ಹೊರಟ್ಟಿ ಗ್ರಾಮದ ಪುರಾತನ ಈಶ್ವರ-ಪಾರ್ವತಿ ದೇವಸ್ಥಾನದ ಅರ್ಚಕ. ಜಾತಕ ತೋರಿಸಲು ಹೋದಾಗ 2025 ನವೆಂಬರ್ 23 ರಿಂದ 2026 ಫೆಬ್ರವರಿ 2ರವರೆಗೆ ಅರ್ಚಕ ಹಲವು ಬಾರಿ ಅತ್ಯಾಚಾರ ನಡೆಸಿದ್ದಾನೆ. ಜಾತಕದಲ್ಲಿ ದೋಷ ಇದೆ. ಅದಕ್ಕೆ ತಡೆಯೊಡೆಯಬೇಕು ಎಂದು ಹೆದರಿಸಿದ್ದ ಎಂದು ಯುವತಿ ಅರ್ಚಕನ ವಿರುದ್ಧ ದೂರು ನೀಡಿದ್ದಾಳೆ.

ಆರೋಪಿ ವಿರುದ್ಧ ಅತ್ಯಾಚಾರ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯ ವಿಚಾರಣೆ ನಡೆಸುತ್ತಿದ್ದಾರೆ.

Related Posts

Leave a Reply

Your email address will not be published. Required fields are marked *