ರೈತರ ಬ್ಯಾಂಕ್‌ ಖಾತೆಗಳಿಗೆ ನಾಳೆ 19 ಸಾವಿರ ಕೋಟಿ ರೂ. ಜಮಾ ಮಾಡಲಿರುವ ಪ್ರಧಾನಿ

ರೈತರ ಬ್ಯಾಂಕ್‌ ಖಾತೆಗಳಿಗೆ ನಾಳೆ 19 ಸಾವಿರ ಕೋಟಿ ರೂ. ಜಮಾ ಮಾಡಲಿರುವ ಪ್ರಧಾನಿ

ನವದೆಹಲಿ, ಮೇ 13 ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಯೋಜನೆಯಡಿ ಪ್ರಧಾನಿ ನರೇಂದ್ರ ಮೋದಿ ನಾಳೆ ಬೆಳಗ್ಗೆ 11 ಗಂಟೆಗೆ ಫಲಾನುಭವಿಗಳ ಖಾತೆಗೆ 8 ನೇ ಕಂತಿನ ಹಣವನ್ನು ಬಿಡುಗಡೆ ಮಾಡಲಿದ್ದಾರೆ.
9 ಕೋಟಿ 50 ಲಕ್ಷ ರೈತ ಕುಟುಂಬಗಳಿಗೆ 19 ಸಾವಿರ ಕೋಟಿ ರೂಪಾಯಿಗೂ ಹೆಚ್ಚು ಹಣವನ್ನು ರೈತರ ಬ್ಯಾಂಕ್‌ ಖಾತೆಗಳಿಗೆ ವರ್ಗಾಯಿಸಲಿದ್ದಾರೆ.
ಈ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಯೋಜನೆಯ ಫಲಾನುಭವಿಗಳೊಂದಿಗೆ ಸಂವಾದ ನಡೆಸಿಲಿದ್ದು ರೈತರು ಪಿಎಂ-ಕಿಸಾನ್ ನಿಂದ ತಮಗಾಗಿರುವ ಪ್ರಯೋಜನಗಳ ಅನುಭವಗಳನ್ನು ಹಂಚಿಕೊಳ್ಳಲಿದ್ದಾರೆ. ಸರ್ಕಾರ ಕೈಗೊಂಡಿರುವ ಇತರ ರೈತ ಕಲ್ಯಾಣ ಕಾರ್ಯಕ್ರಮಗಳ ಕುರಿತು ತಮ್ಮ ಅನಿಸಿಕೆ ಹಂಚಿಕೊಳ್ಳುವ ನಿರೀಕ್ಷೆಯಿದೆ. . ಕಾರ್ಯಕ್ರಮದಲ್ಲಿ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್‌ತೋಮರ್‌ ಹಾಜರಿರಲಿದ್ದಾರೆ.
ಈ ವರೆಗೆ ಪಿಎಂ ಕಿಸಾನ್‌ಸಮ್ಮಾನ್‌ ನಿಧಿ ಯೋಜನೆಯಡಿ 1 ಲಕ್ಷ 15 ಸಾವಿರ ಕೋಟಿ ರೂಪಾಯಿಗಳನ್ನು ರೈತ ಕುಟುಂಬಗಳಿಗೆ ವರ್ಗಾಯಿಸಲಾಗಿದೆ.
ಪಿಎಂ ಕಿಸಾನ್ ಕುರಿತು
ಪಿಎಂ-ಕಿಸಾನ್ ಯೋಜನೆ ಅಡಿಯಲ್ಲಿ ಅರ್ಹ ಫಲಾನುಭವಿ ರೈತರಿಗೆ ಪ್ರತಿ ವರ್ಷ 6000 ರೂ. ಆರ್ಥಿಕ ನೆರವನ್ನು ನೀಡಲಾಗುವುದು. ಈ ಹಣವನ್ನು 4 ತಿಂಗಳಿಗೊಮ್ಮೆ ತಲಾ 2000 ರೂ.ನಂತೆ ಮೂರು ಸಮಾನ ಕಂತುಗಳಲ್ಲಿ ಪಾವತಿಸಲಾಗುವುದು. ಈ ನಿಧಿಯನ್ನು ನೇರವಾಗಿ ಫಲಾನುಭವಿ ರೈತರ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುವುದು.

, ,

Leave a Reply

Your email address will not be published. Required fields are marked *