Wednesday, January 28, 2026
Menu

ಶಿವಮೊಗ್ಗದಲ್ಲಿ ಹೊತ್ತಿ ಉರಿದ ಖಾಸಗಿ ಬಸ್, ಪ್ರಯಾಣಿಕರು ಬಚಾವ್‌

ಶಿವಮೊಗ್ಗದ ಅರಸಾಳು ಸಮೀಪದ ಸೂಡುರು ಬಳಿಯ 9ನೇ ಮೈಲುಗಲ್ಲಿನಲ್ಲಿ ಮಂಗಳವಾರ ತಡ ರಾತ್ರಿ ಆಕಸ್ಮಿಕವಾಗಿ ಬಸ್‌ನಲ್ಲಿ  ಬೆಂಕಿ‌ ಕಾಣಿಸಿಕೊಂಡು ಸಂಪೂರ್ಣವಾಗಿ ಸುಟ್ಟು ಕರುಕಲಾಗಿದ್ದು, ಘಟನೆಯಲ್ಲಿ ಹಲವರಿಗೆ ಗಾಯಗಳಾಗಿವೆ. ಅದೃಷ್ಟವಷಾತ್‌ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಶ್ರೀ ಅನ್ನಪೂರ್ಣೇಶ್ವರಿ ಟ್ರಾನ್ಸ್‌ಪೋರ್ಟ್‌ ಸಂಸ್ಥೆಗೆ ಸೇರಿದ ಬಸ್ ಇದಾಗಿದ್ದು, ಬಸ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.  ಈ ಬಸ್ ರಿಪ್ಪನ್ ಪೇಟೆಯಿಂದ ಶಿವಮೊಗ್ಗ ಮೂಲಕ ಬೆಂಗಳೂರಿಗೆ ಪ್ರಯಾಣಿಕರನ್ನು ಹೊತ್ತು ತೆರಳುತಿತ್ತು. ಮಾರ್ಗ ಮದ್ಯೆ ಸೂಡುರು ಬಳಿಯ 9 ನೇ ಮೈಲುಗಲ್ಲು ಬಳಿ ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಚಾಲಕ ಸೇರಿ ಒಟ್ಟು 40 ಬಸ್ಸಿನಲ್ಲಿದ್ದರು ಎಂದು ತಿಳಿದುಬಂದಿದೆ.ಬಸ್ಸಿನಲ್ಲಿದ್ದ ಸುಮಾರು ಏಳರಿಂದ ಎಂಟು ಜನ ಪ್ರಯಾಣಿಕರಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ರಿಪ್ಪನ್ ಪೇಟೆ ಸಮೀಪವಿರುವ ಸರಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಘಟನಾ  ಸ್ಥಳಕ್ಕೆ ರಿಪ್ಪನ್ ಪೇಟೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

 

Related Posts

Leave a Reply

Your email address will not be published. Required fields are marked *