ಕೈ ತಪ್ಪುತ್ತಿರುವ ಪ್ರತಿಷ್ಠಿತ ಯೋಜನೆಗಳು : ಬಿಜೆಪಿಗರಿಗೆ ಛಾಟಿ ಬೀಸಿದ ಪ್ರಿಯಾಂಕ್ ಖರ್ಗೆ

ಕಲಬುರಗಿ, ಆ.27  ಜಿಲ್ಲೆಯಿಂದ ಒಂದೊಂದೇ ಪ್ರಮುಖ ಹಾಗೂ ಪ್ರತಿಷ್ಠಿತ ಯೋಜನೆಗಳು ಕೈ ತಪ್ಪುತ್ತಿರುವ ಹಿನ್ನೆಲೆಯಲ್ಲಿ ಟ್ವೀಟ್ ಮಾಡುವ ಮೂಲಕ ಮಾಜಿ ಸಚಿವ, ಕೆಪಿಸಿಸಿ ವಕ್ತಾರ ಪ್ರಿಯಾಂಕ್ ಖರ್ಗೆ ಬಿಜೆಪಿ ಸರ್ಕಾರಕ್ಕೆ ಹಾಗೂ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ.
ರೈಲ್ವೆ ಡಿವಿಷನ್, ಏಮ್ಸ್, ಟೆಕ್ಸ್ ಟೈಲ್ಸ್ ಪಾರ್ಕ್, ಆಹಾರ ಪ್ರಯೋಗಾಲಯ ಹಾಗೂ ಇಂಧನ ಪ್ರಾದೇಶಿಕ ಕಚೇರಿ ಹೋಗಿವೆ. ಇದೀಗ ದಶಕಗಳ ಕಾಲ ಇತಿಹಾಸ ಹೊಂದಿರುವ ದೂರದರ್ಶನ ಕೇಂದ್ರವನ್ನೂ ಕೂಡಾ ಕಲಬುರಗಿಯಿಂದ ಕಿತ್ತುಕೊಳ್ಳಲಾಗುತ್ತಿದೆ ಎಂದು ಕೇಂದ್ರ ಸರ್ಕಾರದ ನಡೆಯ ವಿರುದ್ಧ ಅವರು ಟೀಕಿಸಿದ್ದಾರೆ.

ರಾಜ್ಯ ಮತ್ತು ಜಿಲ್ಲೆಯಲ್ಲಿ ಇಷ್ಟೆಲ್ಲ ಆಗುತ್ತಿರುವುದು ಯಾರ ಸೋಂಬೇರಿತನದಿಂದ? ಜಿಲ್ಲೆಯು ಜನರದ್ದಾ? ಅಥವಾ ಬಿಜೆಪಿಗರದ್ದಾ? ಎಂದು ಪ್ರಶ್ನಿಸುವ ಮೂಲಕ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ್ ನಿರಾಣಿ ಅವರ “ಕಲಬುರಗಿ ಜಿಲ್ಲೆಯ ಜನರು ಸೋಂಬೇರಿಗಳು” ಎನ್ನುವ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.

 

, ,

Leave a Reply

Your email address will not be published. Required fields are marked *