ಮುಂಬೈ, ಜ 22(ಉದಯಕಾಲ) – ಗ್ಲೋಬಲ್ ಸ್ಟಾರ್ ಪ್ರಿಯಾಂಕಾ ಚೋಪ್ರಾ, ನಿಕ್ ಜೋನಾಸ್ ದಂಪತಿಗಳು ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದ್ದಾರೆ. ಎರಡು ವರ್ಷಗಳ ಹಿಂದೆ ವಿವಾಹವಾಗಿದ್ದ ಈ ಜೋಡಿ ಮಕ್ಕಳು ಮರಿ ಬಗ್ಗೆ ಎಂದೂ ಬಹಿರಂಗವಾಗಿ ಮಾತನಾಡಿರಲಿಲ್ಲ. ಆದರೆ ಈಗ ತಾವು ಒಂದು ಮಗವಿಗೆ ತಂದೆತಾಯಿಯಾಗಿದ್ದೇವೆ ಎಂದು ಹೇಳಿಕೊಳ್ಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ವಿಷಯ ಹಂಚಿಕೊಂಡಿದ್ದು “ನಾವು ಸರೋಗೆಸಿ ಮೂಲಕ ಮಗುವನ್ನು ಸ್ವಾಗತಿಸಿದ್ದೇವೆ. ಈ ವಿಷಯ ಹಂಚಿಕೊಳ್ಳಲು ಸಂತೋಷವಾಗಿದೆ ಎಂದು ಹೇಳಿಕೊಂಡಿದ್ದಾರೆ.
ಈ ವಿಶೇಷ ಸಮಯದಲ್ಲಿ ನಾವು ನಮ್ಮ ಕುಟುಂಬದ ಮೇಲೆ ಗಮನ ಕೇಂದ್ರೀಕರಿಸಲು ಬಯಸಿದ್ದೇವೆ… ನಮ್ಮ ಖಾಸಗಿತನ ಗೌರವಿಸಿ,” ಎಂದು ನಿಕ್ ಪ್ರಿಯಾಂಕಾ ಸಾಮಾಜಿಕ ಜಾಲತಾಣದಲ್ಲಿ ಕೋರಿದ್ದಾರೆ. ಆದರೆ, ಮಗು ಗಂಡೋ ಹೆಣ್ಣೋ ಎನ್ನುವುದನ್ನು ಮಾತ್ರ ಅವರು ಹೇಳಿಲ್ಲ. ಇನ್‌ಸ್ಟಾಮ್ ಮೂಲಕ ವಿಷಯ ತಿಳಿದ ತಕ್ಷಣ ಅಭಿಮಾನಿಗಳು, ಸ್ನೇಹಿತರು ಶುಭ ಹಾರೈಸುತ್ತಿದ್ದಾರೆ.