Menu

ತರಗತಿಯಲ್ಲಿ ಚಾಕೊಲೇಟ್‌ ನೀಡಿ ವಿದ್ಯಾರ್ಥಿನಿಗೆ ಪ್ರಪೋಸ್‌: ಪ್ರೊಫೆಸರ್‌ಗೆ ಚಪ್ಪಲಿ ಸೇವೆ

ನೆಲಮಂಗಲ ತಾಲೂಕಿನ ಟಿ. ಬೇಗೂರು ಗ್ರಾಮದಲ್ಲಿರುವ ಪ್ರತಿಷ್ಠಿತ ಮೆಡಿಕಲ್‌ ಕಾಲೇಜಿನ ಪ್ರೊಫೆಸರ್‌ವೊಬ್ಬ ಕ್ಲಾಸ್‌ ರೂಮಿನಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ನೀಡಿ ಪ್ರಪ್ರೋಸ್‌ ಮಾಡಿದ್ದು. ವಿದ್ಯಾರ್ಥಿನಿಯಿಂದ ಚಪ್ಪಲಿ ಸೇವೆ ಸ್ವೀಕರಿಸಿರುವ ಘಟನೆ ನಡೆದಿದೆ.

ತರಗತಿ ನಡೆಯುತ್ತಿದ್ದಾಗಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರೊಫೆಸರ್‌ ಅಬ್ದುಲ್‌ ಪ್ರಪೋಸ್‌ ಮಾಡಿದ್ದು, ಆಕ್ರೋಶಗೊಂಡ ವಿದ್ಯಾರ್ಥಿನಿ ಪ್ರಶ್ನೆ ಮಾಡಿ ಚಪ್ಪಲಿಯಿಂದ ಥಳಿಸಿದ್ದಾರೆ. ಪ್ರೊಫೆಸರ್‌ ಅಬ್ದುಲ್‌ ವರ್ತನೆಯಿಂದ ರೊಚ್ಚಿಗೆದ್ದ ಇತರ ವಿದ್ಯಾರ್ಥಿಗಳು ಕ್ಯಾಂಪಸ್‌ನಲ್ಲೇ ಅಟ್ಟಾಡಿಸಿ ಹೊಡೆದಿದ್ದಾರೆ. ಕಾರಿನ ಬಳಿ ಬಂದು ಥಳಿಸಿದ್ದಾರೆ. ಹೆದರಿದ ಅಬ್ದುಲ್‌ ತಪ್ಪಿಸಿಕೊಂಡು ಪರಾರಿಯಾಗಿದ್ದಾನೆ.

ಘಟನೆ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಘಟನೆಯ ಸಂಪೂರ್ಣ ವಿವರಗಳನ್ನು ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ.  ಗೃಹಸಚಿವ ಪರಮೇಶ್ವರ್‌ ಒಡೆತನದ ಸಿದ್ದಾರ್ಥ ಮೆಡಿಕಲ್‌ ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

Related Posts

Leave a Reply

Your email address will not be published. Required fields are marked *