Menu

ಮೈಸೂರು ದಾಸನಕೊಪ್ಪಲಿನಲ್ಲಿ ವೇಶ್ಯಾವಾಟಿಕೆ ದಂಧೆ: ಆರೋಪಿಗಳ ಬಂಧನ

ಒಡನಾಡಿ ಸಂಸ್ಥೆ ನೀಡಿದ ಖಚಿತ ಮಾಹಿತಿಯ ಹಿನ್ನೆಲೆಯಲ್ಲಿ ಮೈಸೂರು ತಾಲೂಕಿನ ದಾಸನಕೊಪ್ಪಲಿನಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಹೈಟೆಕ್ ವೇಶ್ಯಾವಾಟಿಕೆ ದಂಧೆಯ ಮೇಲೆ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ರೆಡ್‌ ಹ್ಯಾಂಡ್ ಆಗಿ ಬಂಧಿಸಿದ್ದಾರೆ.

ಮಹಿಳಾ ಮತ್ತು ಮಕ್ಕಳ ಸುರಕ್ಷತೆ ಕಾರ್ಯನಿರ್ವಹಿಸುತ್ತಿರುವ ಓಡನಾಡಿ ಸಂಸ್ಥೆ, ಈ ಅಕ್ರಮದ ಬಗ್ಗೆ ಮಾಹಿತಿ ನೀಡಿದ ತಕ್ಷಣ ಪೊಲೀಸರು ತಂಡದೊಂದಿಗೆ ದಾಸನಕೊಪ್ಪಲು ಗ್ರಾಮದ ಒಂದು ಮನೆಮೇಲೆ ದಾಳಿ ನಡೆಸಿ 6 ಪುರುಷರು ಮತ್ತು ಇಬ್ಬರು ಮಹಿಳೆಯರನ್ನು ಬಂಧಿಸಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಿದ್ದಾರೆ.

ದಂಧೆಯ ಮುಖ್ಯ ಆರೋಪಿ ಮಂಜು ಎಂಬಾತನನ್ನು ಬಂಧಿಸಲಾಗಿದೆ, ಆತ 30 ದಿನಗಳಿಗೊಮ್ಮೆ ಮನೆ ಬದಲಾಯಿಸುತ್ತಾ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದಾನೆ ಎನ್ನಲಾಗಿದೆ. ಬೇರೆ ಸ್ಥಳಗಳಿಂದ ಯುವತಿಯರನ್ನು ಹಣ ಕೊಟ್ಟು ಕರೆಸಿಕೊಂಡು ಈ ದಂಧೆ ನಡೆಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ದಾಳಿಯ ವೇಳೆ ಇಬ್ಬರು ಯುವತಿಯರು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದರು, ಅವರನ್ನು ರಕ್ಷಿಸಿ ಪುನರ್ವಸತಿ ಕೇಂದ್ರಗಳಿಗೆ ಕಳಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. 3 ದಿನಗಳ ಹಿಂದೆ ಇದೇ ಮನೆಯಲ್ಲಿ ನಕಲಿ ಪೇಯಿಂಗ್ ಗೆಸ್ಟ್ ಎಂದು ಯುವತಿಯರನ್ನು ಇರಿಸಲಾಗಿತ್ತು ಎಂಬ ಮಾಹಿತಿ ಸಿಕ್ಕಿದೆ.

Related Posts

Leave a Reply

Your email address will not be published. Required fields are marked *