ಬೆಲೆ ಏರಿಕೆ ಖಂಡಿಸಿ ಪೆಟ್ರೋಲ್ ಬಂಕ್ ಎದುರು ಪ್ರತಿಭಟನೆ;  ಬಸನಗೌಡ ಬಾದರ್ಲಿ

ಬೆಲೆ ಏರಿಕೆ ಖಂಡಿಸಿ ಪೆಟ್ರೋಲ್ ಬಂಕ್ ಎದುರು ಪ್ರತಿಭಟನೆ;  ಬಸನಗೌಡ ಬಾದರ್ಲಿ

ಸಿಂಧನೂರು: ಕೇಂದ್ರ ಸರ್ಕಾರದ ಧೋರಣೆ ಹಾಗೂ ಪ್ರತಿಯೊಂದರಲ್ಲೂ ಬೆಲೆ ಏರಿಕೆ ಮಾಡಿರುವುದನ್ನು ಖಂಡಿಸಿ ಕಾಂಗ್ರೆಸ್ ಪಕ್ಷದ ವಿವಿಧ ಘಟಕಗಳಿಂದ ಎಲ್ಲಾ ಪೆಟ್ರೋಲ್ ಬಂಕ್ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಯುವ ಕಾಂಗ್ರೆಸ್ ರಾಜ್ಯ ಅಧ್ಯಕ್ಷ ಬಸನಗೌಡ ಬಾದರ್ಲಿ ಹೇಳಿದರು ಅವರು ತಮ್ಮ ಕಾರ್ಯಾಲಯದಲ್ಲಿ ಗುರುವಾರ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು ಜೂನ್ 11ರಂದು ಜಿಲ್ಲಾ ಕೇಂದ್ರದಲ್ಲಿ ಪ್ರತಿಭಟನೆ ನಡೆಸಲಾಗುತ್ತದೆ 12 ರಂದು ತಾಲೂಕಿನ ನಗರ ಪ್ರದೇಶದಲ್ಲಿ, 13ರಂದು ಜಿಲ್ಲಾ ಪಂಚಾಯತಿ ವ್ಯಾಪ್ತಿಯಲ್ಲಿ ಹಾಗೂ 14ರಂದು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಇರುವ ಎಲ್ಲಾ ಪೆಟ್ರೋಲ್ ಬಂಕ್ ಮುಂದುಗಡೆ ಪ್ರತಿಭಟನೆ ನಡೆಸಲಾಗುತ್ತದೆ ರಾಜ್ಯದ ವಿವಿಧ ಜಿಲ್ಲಾ ತಾಲೂಕು ಕೇಂದ್ರಗಳಲ್ಲಿ 5 ದಿನಗಳ ಕಾಲ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಮಾರ್ಗದರ್ಶನದಂತೆ ಪ್ರತಿಭಟನೆ ನಡೆಸಲಾಗುತ್ತದೆ ಇದಕ್ಕೆ ಸಾರ್ವಜನಿಕರ ಸಹಕಾರ ಅಗತ್ಯವಾಗಿದೆ ಎಂದರು ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ಆಡಳಿತ ದಲ್ಲಿ ಪೆಟ್ರೋಲ್ ಡೀಸೆಲ್ ಇನ್ನಿತರ ಅನೇಕ ಬೆಲೆ ಏರಿಕೆ ಗಳು ಆಗುತ್ತಿದ್ದಾವೆ ಬಡವರ ಹೊಟ್ಟೆ ಮೇಲೆ ಬರೆ ಎಳೆಯುವ ಕೆಲಸ ಮಾಡುತ್ತಿದ್ದಾರೆ ಕೂಡಲೇ ಎಲ್ಲಾ ದರ ಇಳಿಕೆ ಆಗುವ ಕೆಲಸ ಮಾಡಬೇಕು ಎಂದರು ಹಿಂದೆ ಕಾಂಗ್ರೆಸ್ ಆಡಳಿತದಲ್ಲಿ ಬೆಲೆ ಏರಿಕೆಗಳು ಆಗಿಲ್ಲ ಜನಸಾಮಾನ್ಯರು ಈಗಲೂ ಕಾಂಗ್ರೆಸ್ ಪಕ್ಷವನ್ನು ನೆನಪಿಸಿಕೊಳ್ಳುತ್ತಿದ್ದಾರೆ, ಮತ್ತೆ ಹಳೆಯ ದಿನಗಳು ಬರಬೇಕು ಅನ್ನೋ ಭಾವನೆಗಳು ಪ್ರತಿಯೊಬ್ಬರಲ್ಲಿ ಇದೆ ರೈತರಿಗೆ ಜನಸಾಮಾನ್ಯರಿಗೆ ಕೂಲಿಕಾರ್ಮಿಕರಿಗೆ ವಂಚಿಸುವ ಕೆಲಸ ಬಿಜೆಪಿ ಪಕ್ಷದಿಂದ ಆಗುತ್ತಿದೆ ಎಂದರು ಈ ಸಂದರ್ಭದಲ್ಲಿ ಶಿವಕುಮಾರ್ ಜವಳಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ದಾಕ್ಷಾಯಣಮ್ಮ, ಕಾಂಗ್ರೆಸ್ ಎಸ್ .ಟಿ ಘಟಕದ ರಾಜ್ಯ ಉಪಾಧ್ಯಕ್ಷ ವೆಂಕಟೇಶ್ ರಾಗಲಪರ್ವಿ,ಖಾಜಾ ಹುಸೇನ್ ರೌಡಕುಂದ, ಅಮರೇಶ್ ಬಾಗೋಡಿ, ನಾಗರಾಜ್ ಕವಿತಾಳ,ನೂರ್ ಹುಸೇನ್ ಮೇಸ್ತ್ರಿ ಸೇರಿದಂತೆ ಇತರರು ಇದ್ದರು

, , ,

Leave a Reply

Your email address will not be published. Required fields are marked *