Thursday, September 03, 2026
Menu

ದಾವಣಗೆರೆ ಹಾಸ್ಟೆಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪಿಯು ವಿದ್ಯಾರ್ಥಿನಿ

ದಾವಣಗೆರೆ ಕಾಲೇಜೊಂದರ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿಯ ಶವ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ. ಹೂವಿನ ಹಡಗಲಿ ತಾಲೂಕಿನ ಕುರುವತ್ತಿ ಗ್ರಾಮದ ಹದಿನೇಳು ವರ್ಷದ ರಂಜಿತಾ ಅನುಮಾನಾಸ್ಪದವಾಗಿ ಮೃತಪಟ್ಟ ವಿದ್ಯಾರ್ಥಿನಿ.

ರಂಜಿತಾ ದಾವಣಗೆರೆಯ ಟೀಮ್ ಅಕಾಡೆಮಿಯಲ್ಲಿ ದ್ವಿತೀಯ ಪಿಯು ಓದುತ್ತಿದ್ದಳು. ಸೆ.2ರ ರಾತ್ರಿ ಹಾಸ್ಟೆಲ್‌ನ ಕಿಟಕಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಆಕೆಯನ್ನು ಹೊಡೆದು ನೇಣು ಬಗಿದಿದ್ದಾರೆ ಎಂದು ಆಕೆಯ ಪೋಷಕರು ಅಕಾಡೆಮಿ ವಿರುದ್ಧ ಗಂಭೀರ ಆರೋಪ ಮಾಡಿ ವಿದ್ಯಾ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪೋಷಕರು ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಿಸಿರುವ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.

Related Posts

Leave a Reply

Your email address will not be published. Required fields are marked *