Menu

ಮನೆಗೆ ನುಗ್ಗಿ  ಸೆಕ್ಸ್‌ಗೆ ಪೀಡಿಸಿದ ಪಿಯುಸಿ ಹುಡುಗ: ನಿರಾಕರಿಸಿದ ಮಹಿಳಾ ಟೆಕ್ಕಿಯ ಕೊಂದು ಬೆಂಕಿ ಹಚ್ಚಿ ಪರಾರಿ

ಇತ್ತೀಚೆಗೆ ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ನಡೆದ ಮಹಿಳಾ ಟೆಕ್ಕಿ ಶರ್ಮಿಳಾ ಸಾವು ಪ್ರಕರಣವನ್ನು ಪೊಲೀಸರು ಬೇಧಿಸಿದ್ದು, ಪಕ್ಕದ ಮನೆಯ ಪಿಯುಸಿ ವಿದ್ಯಾರ್ಥಿ ಆಕೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಲು ಯತ್ನಿಸಿ, ಹಲ್ಲೆ ಮಾಡಿ ಬೆಂಕಿ ಹಚ್ಚಿ ಪರಾರಿಯಾಗಿರುವುದು ಪತ್ತೆಯಾಗಿದೆ.

ಆರೋಪಿ ವಿರಾಜಪೇಟೆ ಮೂಲದ ಕರ್ನಾಲ್‌ ಕುರೈ(18) ಎಂಬಾತನನ್ನು ಬಂಧಿಸಲಾಗಿದೆ. ಜ.3ರಂದು ಶರ್ಮಿಳಾ(34) ಮೇಲೆ ಹಲ್ಲೆ ನಡೆಸಿ ಸಾಕ್ಷ್ಯ ನಾಶಪಡಿಸಲು ಮನೆಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಮಂಗಳೂರಿನ ಕಾವೂರಿನ ಶರ್ಮಿಳಾ ಒಂದೂವರೆ ವರ್ಷದಿಂದ ಸುಬ್ರಹ್ಮಣ್ಯ ಲೇಔಟ್‌ನ ಅಪಾರ್ಟ್‌ಮೆಂಟ್‌ನಲ್ಲಿ ಸ್ನೇಹಿತೆ ಜತೆ ವಾಸವಾಗಿದ್ದರು ಸಾಫ್ಟ್‌ವೇರ್‌ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದರು. ರಜೆಯಿದ್ದುದರಿಂದ ಸ್ನೇಹಿತೆ ಊರಿಗೆ ತೆರಳಿದ್ದರು. ಮನೆಯಲ್ಲಿ ಒಬ್ಬರೇ ಇದ್ದರು. ಪಕ್ಕದ ಫ್ಲ್ಯಾಟ್‌ನಲ್ಲಿ ತಾಯಿ ಜತೆ ವಾಸವಾಗಿದ್ದ ಆರೋಪಿಗೆ ಶರ್ಮಿಳಾ ಮತ್ತು ಆಕೆ ಸ್ನೇಹಿತೆಯ ಪರಿಚಯವಿತ್ತು. ಶರ್ಮಿಳಾ ಮನೆಯಲ್ಲಿ ಒಬ್ಬರೇ ಇರುವುದನ್ನು ಗಮನಿಸಿ ಆರೋಪಿ ಮನೆ ಪ್ರವೇಶಿಸಿ ಶರ್ಮಿಳಾರನ್ನು ತಬ್ಬಿಕೊಂಡಿದ್ದ. ಗಾಬರಿಗೊಂಡ ಆಕೆ ಜೋರಾಗಿ ಕೂಗಿಕೊಂಡು ದೂರ ತಳ್ಳಿದ್ದರು. ದೈಹಿಕವಾಗಿ ತನಗೆ ಸಹಕಾರ ನೀಡುವಂತೆ ಪೀಡಿಸಿದ್ದ. ಕೋಪಗೊಂಡ ಶರ್ಮಿಳಾ ಆರೋಪಿಗೆ ಮನೆಯಿಂದ ಹೊರಗಡೆ ಹೋಗುವಂತೆ ಎಚ್ಚರಿಕೆ ನೀಡಿದ್ದರು.

ಆರೋಪಿ ಏಕಾಏಕಿ ಶರ್ಮಿಳಾ ಮೇಲೆ ಹಲ್ಲೆ ನಡೆಸಿ ಮೂಗು ಮತ್ತು ಬಾಯಿ ಮುಚ್ಚಿದ್ದ. ಮೂಗಿನಿಂದ ರಕ್ತಸ್ರಾವ ಉಂಟಾಗಿ ಆಕೆ ಮೃತಪಟ್ಟಿದ್ದರು. ಆರೋಪಿ ರಕ್ತವಾಗಿದ್ದ ಬಟ್ಟೆಗಳನ್ನು ಹಾಸಿಗೆ ಮೇಲೆ ಹಾಕಿ ಬೆಂಕಿ ಹಚ್ಚಿ ಪರಾರಿಯಾಗಿದ್ದ. ಶಾರ್ಟ್ ಸರ್ಕ್ಯೂಟ್‌ನಿಂದ ಉಂಟಾದ ಬೆಂಕಿಯಿಂದ ಉಸಿರುಗಟ್ಟಿ ಶರ್ಮಿಳಾ ಮೃತಪಟ್ಟಿರಬಹುದು ಎಂದು ಹೇಳಲಾಗಿತ್ತು. ಮರಣೋತ್ತರ ಪರೀಕ್ಷೆಯಲ್ಲಿ ಆಕೆಯ ಕುತ್ತಿಗೆ ಭಾಗ, ಕೈಗಳ ಮೇಲೆ ಗಾಯ ಪತ್ತೆಯಾಗಿತ್ತು. ವೈದ್ಯರು, ಶರ್ಮಿಳಾ ಬೆಂಕಿಯ ಹೊಗೆಯಿಂದ ಪ್ರಜ್ಞೆ ಕಳೆದುಕೊಂಡಿಲ್ಲ. ಮೇಲೆ ಹಲ್ಲೆ ನಡೆಸಿ ಉಸಿರುಗಟ್ಟಿಸಲಾಗಿದೆ.ಆಕೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಲು ಪ್ರಯತ್ನ ನಡೆದಾಗ ಹಲ್ಲೆ ಆಗಿರುವ ಸಾಧ್ಯತೆಯಿದೆ ಎಂದು ಮಾಹಿತಿ ನೀಡಿದ್ದರು.

ಫ್ಲ್ಯಾಟ್‌ನಲ್ಲಿದ್ದ ಅಸ್ಸಾಂ ಮೂಲದ ಯುವಕರನ್ನು ‍‍‍‍ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದ್ದರು. ಕರ್ನಾಲ್‌ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಸತ್ಯ ಬಾಯಿಬಿಟ್ಟಿದ್ದ. ನನಗೆ ಆಕೆಯ ಮೇಲೆ ಪ್ರೀತಿಯಾಗಿದ್ದು, ಆಕೆ ನಿರಾಕರಿಸಿದ್ದಳು ಎಂದು ಪೊಲೀಸರಲ್ಲಿ ಹೇಳಿದ್ದಾನೆ. ರಾಮಮೂರ್ತಿನಗರ ಠಾಣೆ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.

Related Posts

Leave a Reply

Your email address will not be published. Required fields are marked *