ಕರ್ನಾಟಕ ಮಾಧ್ಯಮಿಕ ಮತ್ತು ಉನ್ನತ ಶಿಕ್ಷಣ ಮಂಡಳಿ ಎಂಬ ಸಂಸ್ಥೆಯ ಮೂಲಕ ಪಿಯುಸಿ ಮತ್ತು ಎಸ್ಎಸ್ಎಲ್ಸಿ ತತ್ಸಮಾನ ಎಂದು ನಕಲಿ ಅಂಕಪಟ್ಟಿ ನೀಡುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಸ್ಟಡಿ ಸೆಂಟರ್ಗಳನ್ನು ತೆರೆದು ನಕಲಿ ಅಂಕಪಟ್ಟಿ ನೀಡುತ್ತಿದ್ದರು. ಆರೋಪಿಗಳು ಬೆಂಗಳೂರು, ಬೆಳಗಾವಿ, ಧಾರವಾಡದಲ್ಲಿಂದ್ದುಕೊಂಡು ಈ ದಂಧೆ ನಡೆಸುತ್ತಿದ್ದರು.
ಸ್ಟಡಿ ಸೆಂಟರ್‌ಗೆ ಕರೆಸ್ಪಾಂಡಿಂಗ್ ವ್ಯಾಸಂಗ ಮಾಡುವರನ್ನು ದಾಖಲಿಸಿಕೊಳ್ಳುತ್ತಿದ್ದರು. ಕಲವೇ ದಿನಗಳದಲ್ಲಿ ಅವರಿಗೆ ಕರ್ನಾಟಕ ಮಾಧ್ಯಮಿಕ ಮತ್ತು ಉನ್ನತ ಶಿಕ್ಷಣ ಮಂಡಳಿ ಹೆಸರಿನಲ್ಲಿ ಆರೋಪಿಗಳು ಅಂಕಪಟ್ಟಿಗಳನ್ನು ನೀಡುತಿದ್ದರು. ಧಾರವಾಡದಲ್ಲಿ ಮತ್ತು ಬೆಂಗಳೂರಿನಲ್ಲಿ ಅಂಕಪಟ್ಟಿ ಪ್ರಿಂಟ್ ಮಾಡಿರುವುದು ಪತ್ತೆಯಾಗಿದೆ.
ಆರೋಪಿಗಳು 350 ಜನರಿಗೆ ನಕಲಿ ಅಂಕಪಟ್ಟಿ ನೀಡಿದ್ದು, ಇವರಿಂದ ನಕಲಿ ಅಂಕಪಟ್ಟಿ ಪಡೆದವರು ಸಾರಿಗೆ ಇಲಾಖೆ, ಶಿಶು ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯಲ್ಲಿ ಕೆಲಸಕ್ಕೆ ಸೇರಿದ್ದಾರೆ. ನಕಲಿ ಅಂಕಪಟ್ಟಿ ನೀಡಲು ಆರೋಪಿಗಳು 5ರಿಂದ 10 ಸಾವಿರ ಹಣ ಪಡೆಯುತ್ತಿದ್ದರು.
ಸರ್ಕಾರಿ ಇಲಾಖೆಗಳು ಕೆಲಸ ನೀಡುವ ಮೊದಲು ಪರಿಶೀಲನೆ ಮಾಡಿದಾಗ ಇದು ಅಸಲಿ ಅಂಕಪಟ್ಟಿ ಎಂದು ಆರೋಪಿಗಳು ತಿಳಿಸಿದ್ದರು. ಈ ಮಾದರಿಯ ಅಂಕಪಟ್ಟಿ ಎಲ್ಲಿಯಾದರೂ ಸಲ್ಲಿಕೆಯಾಗಿದ್ದಲ್ಲಿ ಸಿಸಿಬಿಗೆ ಮಾಹಿತಿ ನೀಡುವಂತೆ ಪೊಲೀಸರು ಮನವಿ ಮಾಡಿದ್ದಾರೆ.