ಸಮಾಜವಾದದ ಹೆಸರಿನಲ್ಲಿ ರಾಜಕೀಯ ಆರಂಭಿಸಿ, ಅಹಿಂದ ಹೆಸರಿನಲ್ಲಿ ಅಧಿಕಾರ ಅನುಭವಿಸಿ, ಈಗ ಕುರ್ಚಿ ಉಳಿಸಿಕೊಳ್ಳಲು ನಕಲಿ ಗಾಂಧಿ ಕುಟುಂಬದ ಗುಲಾಮಗಿರಿ ಮಾಡುತ್ತಿರುವ ಸಿದ್ದರಾಮಯ್ಯ ಅವರಂಥ ಪಿಎಫ್ಐ ಏಜೆಂಟ್ ಗಳಿಂದ ಆರೆಸ್ಸೆಸ್ ಪಾಠ ಕಲಿಯಬೇಕಾಗಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಕಿಡಿ ಕಾರಿದ್ದಾರೆ.
ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಮಾಡಿರುವ ಪೋಸ್ಟ್ ಮೂಲಕ ಅವರು ಸಿಎಂ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಸರ್ಕಾರ ಭಯೋತ್ಪಾದಕರಿಂದ, ಭಯೋತ್ಪಾದಕರಿಗಾಗಿ ಭಯೋತ್ಪಾದಕರಿಗೋಸ್ಕರ. ಇದಕ್ಕಾಗಿ ಕರ್ನಾಟಕ ಕಾಂಗ್ರೆಸ್ ಸರ್ಕಾರ ಸಂಪೂರ್ಣವಾಗಿ ತುಷ್ಟೀಕರಣದಲ್ಲಿ ತೊಡಗಿದೆ ಎಂದು ಹೇಳಿದ್ದಾರೆ.
ಸ್ವಾಮಿ ಸಿದ್ದರಾಮಯ್ಯನವರೇ, ಆರೆಸ್ಸೆಸ್ ಅನ್ನು ದೂಷಿಸಿದರೆ ನಕಲಿ ಗಾಂಧಿಗಳನ್ನು ಮೆಚ್ಚಿಸಿ ಇನ್ನೊಂದಷ್ಟು ದಿನ ಕುರ್ಚಿಗೆ ಅಂಟಿಕೊಂಡು ಕೂತಿರಬಹುದು ಎನ್ನುವ ಭ್ರಮೆಯಿಂದ ಹೊರಗೆ ಬನ್ನಿ. ನಿಮ್ಮ ಪಕ್ಷದವರೇ ನಿಮ್ಮ ಕುರ್ಚಿಯನ್ನು ಒದ್ದು ಕಿತ್ತುಕೊಳ್ಳುವ ದಿನ ಬಹಳ ದೂರವಿಲ್ಲ.ನಿಮಗೆ ತಾಕತ್ತಿದ್ದರೆ ಕಾಂಗ್ರೆಸ್‌ನ ರಾಷ್ಟ್ರೀಯ ನಾಯಕತ್ವ ವಹಿಸಿಕೊಂಡು ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಎದುರಿಸಿ ನೋಡೋಣ ಎಂದಿದ್ದಾರೆ.
.
ಕಾಂಗ್ರೆಸ್ ಸರ್ಕಾರದ ಅತಿ ತುಷ್ಟೀಕರಣ ನೀತಿಯ ಪರಿಣಾಮವಾಗಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಪಾತಾಳಕ್ಕೆ ಕುಸಿದಿದೆ. ಮುಸ್ಲಿಮರ ಋಣದಲ್ಲಿರುವ ಕರ್ನಾಟಕದ ಕಾಂಗ್ರೆಸ್ ಸರ್ಕಾರ, ಮತಾಂಧ ಶಕ್ತಿಗಳ ಮುಂದೆ ಶರಣಾಗಿದೆ, ಮೂಲಭೂತವಾದಿಗಳ ತಾಳಕ್ಕೆ ಕುಣಿಯುತ್ತಿದೆ. ಆದ್ದರಿಂದಲೇ ಇವತ್ತು ವಿಧಾನಸೌಧದ ಮುಂದೆ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದರೂ ನಿಮ್ಮ ಬ್ರದರ್ಸ್ ಅಮಾಯಕರು. ಹಿಂದೂಗಳ ಕೊಲೆ ಮಾಡಿದರೂ ನಿಮ್ಮ ಬ್ರದರ್ಸ್ ಅಮಾಯಕರು ಎಂದು ಟೀಕಿಸಿದ್ದಾರೆ.