Menu

ಕನ್ನಡಿಗರಿಗೆ ಈ ವರ್ಷ ಮಾರಿಹಬ್ಬ: ಎಚ್ಚರಿಕೆ ನಿಜವಾಯ್ತು ಎಂದ ಆರ್‌. ಅಶೋಕ್‌

ಕನ್ನಡಿಗರಿಗೆ ಈ ವರ್ಷ ಮಾರಿಹಬ್ಬ ಕಾದಿದೆ ಎಂದು ಬಜೆಟ್ ಅಧಿವೇಶನದಲ್ಲಿ ನಾನು ನೀಡಿದ್ದ ಎಚ್ಚರಿಕೆ ಈಗ ಅಕ್ಷರಶಃ ನಿಜವಾಗುತ್ತಿದೆ. ಬಜೆಟ್ ನಲ್ಲಿ ಯಾವುದೇ ತೆರಿಗೆ ಹೆಚ್ಚಳವನ್ನ, ಬೆಲೆ ಏರಿಕೆಯನ್ನ ಘೋಷಣೆ ಮಾಡದೆ ಕನ್ನಡಿಗರ ಕಿವಿಗೆ ಹೂವಿಟ್ಟ ಸಿಎಂ ಸಿದ್ದರಾಮಯ್ಯ ಅವರು ಈಗ ದಿನಕ್ಕೊಂದು ವಸ್ತುಗಳ ಮೇಲೆ ತೆರಿಗೆ ಹಾಕಿ, ಬೆಲೆ ಹೆಚ್ಚಿಸಿ, ಬಡವರು, ಮಧ್ಯಮ ವರ್ಗದ ರಕ್ತ ಹೀರಲು ಹೊರಟಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ್‌ ಕಿಡಿ ಕಾರಿದ್ದಾರೆ.

ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಈ ಬಗ್ಗೆ ಪೋಸ್ಟ್‌ ಮಾಡಿದ್ದು, ಹಾಲಿನ ದರ ಏರಿಕೆ ಮಾಡಿದ್ದಾಯ್ತು, ಕಸ ಸಂಗ್ರಹಣ ಮೇಲೆ ಸೆಸ್ ಹಾಕಿದ್ದಾಯ್ತು, ಈಗ ಏಕಾಏಕಿ ಡೀಸೆಲ್ ಬೆಲೆಯನ್ನು ಲೀಟರ್ ಗೆ 2 ರೂಪಾಯಿ ಏರಿಕೆ ಮಾಡಿದೆ ಈ ದರಿದ್ರ ಕಾಂಗ್ರೆಸ್‌ ಸರ್ಕಾರ.  ಡೀಸೆಲ್ ಅಂದರೆ ಅದು ಸರಕು ಸಾಗಣೆಗೆ ಉಪಯೋಗಿಸುವ ಇಂಧನ. ಡೀಸೆಲ್ ಬೆಲೆ ಹೆಚ್ಚಾದರೆ ಹಾಲು, ತರಕಾರಿ, ಹಣ್ಣು, ದಿನಸಿ, ಟ್ಯಾಕ್ಸಿ ಸೇರಿದಂತೆ ಎಲ್ಲ ಅಗತ್ಯ ವಸ್ತುಗಳ, ಸೇವೆಗಳ ಬೆಲೆ ಹೆಚ್ಚಾಗುತ್ತವೆ ಎಂದು ಸ್ವಯಂ ಘೋಷಿತ ಆರ್ಥಿಕ ತಜ್ಞರಾದ ಸಿದ್ದರಾಮಯ್ಯನವರಿಗೆ ತಿಳಿದಿಲ್ಲವೇ ಎಂದು ಪ್ರಶ್ನಿಸಿದ್ದಾರೆ.

ಸಾರಿಗೆ ನೌಕರರಿಗೆ ಸಂಬಳ ಕೊಡಲು ದುಡ್ಡಿಲ್ಲದೆ ಇತ್ತೀಚೆಗಷ್ಟೆ ಬಸ್ ಟಿಕೆಟ್ ದರ ಏರಿಕೆ ಆಗಿತ್ತು. ಈಗ ಡೀಸೆಲ್ ಬೆಲೆ ಏರಿಕೆ ಆಗಿದೆ ಎನ್ನುವ ನೆಪವೊಡ್ಡಿ ಮತ್ತೊಮ್ಮೆ ಬಸ್ ಟಿಕೆಟ್ ದರ ಏರಿಕೆ ಮಾಡುವುದರಲ್ಲಿ ಅನುಮಾನವೇ ಇಲ್ಲ. ಇನ್ನು ಯಾವ ಯಾವ ವಸ್ತುಗಳ ಮೇಲೆ ತೆರಿಗೆ ಹಾಕಬೇಕು, ಯಾವ ಯಾವ ವಸ್ತುಗಳ ಬೆಲೆ ಏರಿಕೆ ಮಾಡಬೇಕು ಎಂದು ಹೊಂಚು ಹಾಕಿದ್ದೀರಿ ಸಿದ್ದರಾಮಯ್ಯನವರೇ? ಬಡವರು, ಮಧ್ಯಮ ವರ್ಗದ ರಕ್ತ ಹೀರುತ್ತಿರುವ ರಕ್ತಪಿಪಾಸು ಕಾಂಗ್ರೆಸ್ ಸರ್ಕಾರಕ್ಕೆ ಜನರ ಶಾಪ ತಟ್ಟದೇ ಇರದು ಎಂದು ಅಶೋಕ್‌ ಹೇಳಿದ್ದಾರೆ.

Related Posts

Leave a Reply

Your email address will not be published. Required fields are marked *