Saturday, October 24, 2026
Menu

ಕಾವೇರಿ ವಿಚಾರ ರಾಜಕೀಯ ಲಾಭಕ್ಕೆ ಬಿಜೆಪಿ ಯತ್ನ: ಸರ್ಕಾರದ ವಿರುದ್ಧ ಆರ್.ಅಶೋಕ್‌ ಆಕ್ರೋಶ!

ಉದಯಕಾಲ ನ್ಯೂಸ್, ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿಚಾರವನ್ನು ಮುಂದಿಟ್ಟುಕೊಂಡು ವಿಪಕ್ಷ ನಾಯಕ ಆರ್. ಅಶೋಕ್ ಅವರು ರಾಜ್ಯ ಸರ್ಕಾರದ ವಿರುದ್ಧ ಮಾಡುತ್ತಿರುವ ಆರೋಪಗಳು ಸಂಪೂರ್ಣ ರಾಜಕೀಯ ಪ್ರೇರಿತವಾಗಿದ್ದು, ತಮ್ಮ ಕುರ್ಚಿ ಉಳಿಸಿಕೊಳ್ಳಲು ವಿಪಕ್ಷ ನಾಯಕ ಆರ್‌.ಅಶೋಕ್‌ ಕಾವೇರಿ ನೀರಿನ ವಿಚಾರ ಮುಂದಿಟ್ಟುಕೊಂಡು ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ.
ರಾಜ್ಯದಲ್ಲಿ ನೀರಿನ ಲಭ್ಯತೆ ಮತ್ತು ವಾಸ್ತವಿಕ ಪರಿಸ್ಥಿತಿಯನ್ನು ಮರೆಮಾಚಿ, ಬಿಜೆಪಿ ನಾಯಕರು ಕೇವಲ ರಾಜಕೀಯ ಲಾಭಕ್ಕಾಗಿ ಜನರ ದಿಕ್ಕು ತಪ್ಪಿಸುವ ಯತ್ನ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾವೇರಿ ಪ್ರಾಧಿಕಾರದ ಆದೇಶ ಮತ್ತು ಕಾನೂನು ಚೌಕಟ್ಟಿನಲ್ಲಿ ನೀರು ಬಿಡುಗಡೆ

ಕೇಂದ್ರ ಸರ್ಕಾರದ ಅಡಿಯಲ್ಲಿರುವ ಸಂಸ್ಥೆ

ಕಾವೇರಿ ನೀರು ನಿಯಂತ್ರಣ ಮಂಡಳಿ ಹಾಗೂ ಪ್ರಾಧಿಕಾರವು ಕೇಂದ್ರ ಸರ್ಕಾರದ ವ್ಯಾಪ್ತಿಗೆ ಬರುವ ಸ್ವಾಯತ್ತ ಸಂಸ್ಥೆಯಾಗಿದ್ದು, ಇದರ ತೀರ್ಮಾನಗಳು ಹಾಗೂ ಕಾನೂನು ಬದ್ಧ ನಿರ್ದೇಶನಗಳನ್ನು ಎಲ್ಲ ರಾಜ್ಯಗಳೂ ಪಾಲಿಸಬೇಕಾದ ಅನಿವಾರ್ಯತೆ ಇರುತ್ತದೆ.ರಾಜ್ಯದಲ್ಲಿ ಮಳೆಯ ಕೊರತೆ ಹಾಗೂ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕಡಿಮೆಯಿರುವ ವಾಸ್ತವಿಕ ಪರಿಸ್ಥಿತಿಯನ್ನು ಮನವರಿಕೆ ಮಾಡಿಕೊಡಲು ನಮ್ಮ ಸರ್ಕಾರದ ಕಾನೂನು ತಜ್ಞರು ಹಾಗೂ ಅಧಿಕಾರಿಗಳು ಪ್ರಾಧಿಕಾರದ ಸಭೆಯಲ್ಲಿ ನಿರಂತರವಾಗಿ ಸಮರ್ಥ ವಾದ ಮಂಡಿಸಿದ್ದಾರೆ.ಆದರೂ ಒಪ್ಪಂದದನ್ವಯ ನೀರು ಬಿಡುಗಡೆ ಮಾಡಬೇಕಾದ ಅನಿವಾರ್ಯ ಪರಿಸ್ಥಿತಿ ಎದುರಾಗಿದೆ.

ಬಿಜೆಪಿ ನಾಯಕರ ದ್ವಿಮುಖ ನೀತಿ: ಆರ್.ಅಶೋಕ್‌ ಆಕ್ರೋಶ

ಕನ್ನಡಿಗರಿಗೆ ಕುಡಿಯಲು ನೀರಿಲ್ಲ, ರೈತರ ಜಮೀನುಗಳಿಗೆ ನೀರಿಲ್ಲ. ಜಲಾಶಯಗಳಲ್ಲಿ ನೀರಿನ ಮಟ್ಟ ಕುಸಿಯುತ್ತಿದೆ. ಆದರೂ, ನಾಡಿನ ರೈತರ ಮತ್ತು ಜನರ ಹಿತ ಬಲಿ ಕೊಟ್ಟು, ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದು ಈ ನಾಡದ್ರೋಹಿ ಕಾಂಗ್ರೆಸ್ ಸರ್ಕಾರ ತನ್ನ ಪರಮ ಪಾತಕಿ ಬುದ್ಧಿಯನ್ನು ಮತ್ತೊಮ್ಮೆ ತೋರಿಸಿದೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಕಿಡಿ ಕಾರಿದ್ದಾರೆ.

ಆದರೆ ಇದಕ್ಕೆ ಪ್ರತ್ಯುತ್ತರವಾಗಿ ಕಾಂಗ್ರೆಸ್ ಬಿಜೆಪಿ ನಾಯಕರು ಕಾವೇರಿ ವಿವಾದವನ್ನು ಮುಂದಿಟ್ಟುಕೊಂಡು ಮೊಸಳೆ ಕಣ್ಣೀರುರಿಸುತ್ತಿದ್ದಾರೆ ಎಂದು ಕಿಡಿಕಾರಿದೆ. ತಮ್ಮ ಆಡಳಿತ ಅವಧಿಯಲ್ಲಿ ಕಾವೇರಿ ಮತ್ತು ಮೇಕೆದಾಟು ಯೋಜನೆಗಳ ಅನುಷ್ಠಾನಕ್ಕೆ ಯಾವುದೇ ಸ್ಪಷ್ಟ ನಿಲುವು ವ್ಯಕ್ತಪಡಿಸದ ಬಿಜೆಪಿ, ಇಂದು ದ್ವಿಮುಖ ನೀತಿ ಅನುಸರಿಸುತ್ತಿದೆ ಎಂದು ಟೀಕಿಸಲಾಗಿದೆ.

ಕನ್ನಡಿಗರ ಜೀವನಾಡಿ ಕಾವೇರಿಯ ಹಿತಾಸಕ್ತಿ ರಕ್ಷಿಸಲು ರಾಜ್ಯ ಸರ್ಕಾರ ಎಲ್ಲಾ ಕಾನೂನಾತ್ಮಕ ಹೋರಾಟಗಳನ್ನು ಪ್ರಾಮಾಣಿಕವಾಗಿ ನಡೆಸುತ್ತಿದ್ದು, ರೈತರ ಹಾಗೂ ಸಾರ್ವಜನಿಕರ ಹಿತ ಕಾಪಾಡಲು ಸರ್ಕಾರ ಬದ್ಧವಾಗಿದೆ. ಈ ಸೂಕ್ಷ್ಮ ವಿಷಯದಲ್ಲಿ ಪ್ರತಿಪಕ್ಷಗಳು ರಾಜಕೀಯ ಬೇಳೆಕಾಳು ಬೇಯಿಸಿಕೊಳ್ಳುವುದನ್ನು ಬಿಟ್ಟು, ರಾಜ್ಯದ ಒಳಿತಿಗಾಗಿ ಒಮ್ಮತದಿಂದ ಕೈಜೋಡಿಸಬೇಕು ಎಂದು ಆಡಳಿತ ಪಕ್ಷದ ನಾಯಕರು ಆಗ್ರಹಿಸಿದ್ದಾರೆ.
#CauveryIssue #CongressVsBJPRAshoka #KarnatakaGovernment #CauveryWaterDispute #UdayakalaNews #KarnatakaPolitics #R_Ashoka #CongressStand

Related Posts

Leave a Reply

Your email address will not be published. Required fields are marked *