Menu

ವಿಜಯಪುರ ಮೆಡಿಕಲ್ ಕಾಲೇಜಿನಲ್ಲಿ  ರ‍್ಯಾಗಿಂಗ್ : ಆರೋಪಿ ವಿದ್ಯಾರ್ಥಿಗಳ ಬಂಧನ

ವಿಜಯಪುರದ ಅಲ್-ಅಮೀನ್ ಮೆಡಿಕಲ್ ಕಾಲೇಜಿನಲ್ಲಿ ಕಾಶ್ಮೀರದ ಪ್ರಥಮ ವರ್ಷದ ವಿದ್ಯಾರ್ಥಿ ಮೇಲೆ ಅದೇ ಕಾಲೇಜಿನ  ಎಂಬಿಬಿಎಸ್ ಹಿರಿಯ ವಿದ್ಯಾರ್ಥಿಗಳು ರ‍್ಯಾಗಿಂಗ್  ಮಾಡಿ ದೈಹಿಕ ಹಿಂಸೆ ನೀಡಿದ್ದಾರೆಂಬ  ಪ್ರಕರಣ ಸಂಬಂಧ ಪೊಲೀಸರು ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ. ಮೊಹಮ್ಮದ್ ಕೈಸರ್ (23), ಸಮೀರ್ ತಾಡಪತ್ರಿ (24), ಮನ್ಸೂರ್ ಬಾಷಾ (24), ಶೇಖ್ ದಾವೂದ್ (23), ಮತ್ತು ಮೊಹಮ್ಮದ್ ಜಮಾದಾರ್ (23) ಬಂಧಿತರು.

ಬಂಧಿತ ವಿದ್ಯಾರ್ಥಿಗಳ ವಿರುದ್ಧ ಬಿಎನ್‌ಎಸ್ ಕಾಯ್ದೆ 155(2), 329(4), 352 351(2), 189(2), 191(2), 190ರಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ.

ವಿಜಯಪುರ ಮತ್ತು ತಿಕೋಟಾ ತಹಶೀಲ್ದಾರ್‌ ಹಾಗೂ  ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳು ಹಲ್ಲೆಗೊಳಗಾದ ವಿದ್ಯಾರ್ಥಿ ಹಮೀಮ  ಅವರನ್ನು  ಭೇಟಿ ಮಾಡಿ ಯೋಗಕ್ಷೇಮ ವಿಚಾರಣೆ ನಡೆಸಿದ್ದಾರೆ.   ಜಿಲ್ಲಾಧಿಕಾರಿಗಳ ನಿರ್ದೇಶನದಂತೆ  ವಿಚಾರಣೆ ನಡೆಸಿದ ತಂಡವು ವಿದ್ಯಾರ್ಥಿಗೆ ಯಾವುದೇ ಗಾಯಗಳಾಗಿರುವುದಿಲ್ಲ ಹಾಗೂ ವಿದ್ಯಾರ್ಥಿಯು ದೈಹಿಕವಾಗಿ ಆರೋಗ್ಯಕರವಾಗಿದ್ದಾರೆ ಎಂದು ವರದಿ ನೀಡಿದೆ.

ಘಟನೆಯ ವಿವರವನ್ನು ವೈದ್ಯಕೀಯ ಶಿಕ್ಷಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಾದ ಮೊಹ್ಮದ ಮೊಹಸೀನ್ ಅವರಿಗೆ ಒದಗಿಸಿದ್ದು, ಈ ಕುರಿತು ಅವರು ಹಲ್ಲೆಗೊಳಗಾದ ವಿದ್ಯಾರ್ಥಿಗೆ ಸೂಕ್ತ ಸಹಾಯ ನೀಡುವ ಜೊತೆಗೆ ಹಲ್ಲೆ ಮಾಡಿರುವ 4 ಹಿರಿಯ ವಿದ್ಯಾರ್ಥಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ತಿಳಿಸಿದ್ದಾರೆ. ಹಲ್ಲೆ ಮಾಡಿದ ವಿದ್ಯಾರ್ಥಿಗಳ ವಿರುದ್ದ ಸೂಕ್ತ ಕಾನೂನ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Related Posts

Leave a Reply

Your email address will not be published. Required fields are marked *