ಸಂಗೀತ ನಿರ್ದೇಶಕ ಹಾಗೂ ಗಾಯಕ ರಘು ದೀಕ್ಷಿತ್ ಮತ್ತು ವಾರಿಜಾಶ್ರೀ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.
ಬೆಂಗಳೂರು ನಗರದ ಹೊರವಲಯದ ಖಾಸಗಿ ರೆಸಾರ್ಟ್‌ವೊಂದರಲ್ಲಿ ಆಪ್ತರು, ಸ್ನೇಹಿತರು ಹಾಗೂ ಕುಟುಂಬದವರ ಸಮ್ಮುಖದಲ್ಲಿ ಸಡಗರದಿಂದ ಈ ವಿವಾಹ ನೆರವೇರಿದೆ.
ಸೋಶಿಯಲ್ ಮೀಡಿಯಾದಲ್ಲಿ ಮದುವೆಯ ಫೋಟೋಗಳು ವೈರಲ್ ಆಗುತ್ತಿವೆ. ರಘು ದೀಕ್ಷಿತ್ ಗೆ ಇದು ಎರಡನೇ ಮದುವೆ ಆಗಿದೆ.
ರಘು ದೀಕ್ಷಿತ್ ಮತ್ತು ವಾರಿಜಶ್ರೀ ಮದುವೆ ಆಗಲಿದ್ದಾರೆ ಎಂಬ ಬಗ್ಗೆ ಇತ್ತೀಚೆಗಷ್ಟೇ ಸುದ್ದಿ ಹೊರಬಿದ್ದಿತ್ತು. ಕುಟುಂಬದವರು ಮತ್ತು ಆಪ್ತರ ಸಮ್ಮುಖದಲ್ಲಿ ಈ ಮದುವೆ ನೆರವೇರಿದೆ.
ರಘು ದೀಕ್ಷಿತ್ ಹಾಗೂ ವಾರಿಜಶ್ರೀ ವೇಣುಗೋಪಾಲ್ ಇಬ್ಬರೂ ಸಂಗೀತ ಕ್ಷೇತ್ರದಲ್ಲಿ ಹೆಸರು ಮಾಡಿದ್ದಾರೆ. ಒಟ್ಟಿಗೆ ಕೆಲಸವನ್ನ ಮಾಡಿರುವ ಈ ಜೋಡಿ ಕೊರೊನಾ ಕಾಲದಲ್ಲಿ ಮಾಡಿದ `ಭರವಸೆಯ ಬದುಕು’ಹಾಡು ಅಪಾರ ಮೆಚ್ಚುಗೆಗೆ ಕಾರಣವಾಗಿತ್ತು. ಇದೀಗ ಕೆಲವೇ ಕೆಲವರು ಆಪ್ತರು ಹಾಗೂ ಕುಟುಂಬಸ್ಥರ ಸಮ್ಮುಖದಲ್ಲಿ ಸಪ್ತಪದಿ ತುಳಿದಿದ್ದಾರೆ.


