Menu

ಕೊಡಗು ಹಾಸ್ಟೆಲ್‌ನಲ್ಲಿ ರಾಯಚೂರು ವಿದ್ಯಾರ್ಥಿನಿ ಆತ್ಮಹತ್ಯೆ

ಕೊಡಗು ಜಿಲ್ಲೆಯ ಪೊನ್ನಂಪೇಟೆಯಲ್ಲಿರುವ ಹಾಸ್ಟೆಲ್‌ನಲ್ಲಿ ರಾಯಚೂರು ಮೂಲದ ವಿದ್ಯಾರ್ಥಿನಿಯೊಬ್ಬಳು ಡೆತ್‌ ನೋಟ್‌ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ತೇಜಸ್ವಿನಿ, ರಾಯಚೂರಿನ ಮಹಾಂತಪ್ಪ ಎಂಬವರ ಏಕೈಕ ಪುತ್ರಿ ಪ್ರಥಮ ವರ್ಷದ ಎ.ಐ.ಎಂ.ಎಲ್ (ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಮತ್ತು ಮೆಷಿನ್ ಲರ್ನಿಂಗ್) ಕೋರ್ಸ್‌ನಲ್ಲಿ ವ್ಯಾಸಂಗ ಮಾಡುತ್ತಿದ್ದಳು ಶೈಕ್ಷಣಿಕ ಒತ್ತಡವನ್ನು ತಾಳಲಾರದೆ ಈ ನಿರ್ಧಾರ ಕೈಗೊಂಡಿದ್ದಾಳೆ ಎನ್ನಲಾಗಿದೆ.

ಒಂದು ದಿನ ಮೊದಲು ತೇಜಸ್ವಿನಿ ತನ್ನ ಹುಟ್ಟುಹಬ್ಬವನ್ನು ಸ್ನೇಹಿತರೊಂದಿಗೆ ಆಚರಿಸಿಕೊಂಡಿದ್ದಳು. ಮರುದಿನ ಸಂಜೆ 4 ಗಂಟೆಗೆ ತರಗತಿಗೆ ಆಗಮಿಸಿದ ನಂತರ  ಹಾಸ್ಟೆಲ್ ಕೊಠಡಿಗೆ ತೆರಳಿದ್ದಳು. ಬಳಿಕ ಆಕೆಯ ಸಹಪಾಠಿ ಕೊಠಡಿಗೆ ಬಂದಾಗ ಬಾಗಿಲು ಒಳಗಿನಿಂದ ಲಾಕ್ ಆಗಿತ್ತು. ಸ್ನೇಹಿತರು ಎಷ್ಟೇ ಕೂಗಿದರೂ ಯಾವುದೇ ಪ್ರತಿಕ್ರಿಯೆ ಬಾರದಿದ್ದಾಗ ಹಾಸ್ಟೆಲ್ ಮೇಲ್ವಿಚಾರಕರಿಗೆ ವಿಷಯ ತಿಳಿಸಿದರು. ಬಾಗಿಲನ್ನು ತೆಗೆದು ನೋಡಿದಾಗ ತೇಜಸ್ವಿನಿ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ.

ಪೊನ್ನಂಪೇಟೆ ಪೊಲೀಸರು ತನಿಖೆ ನಡೆಸುವಾಗ ತೇಜಸ್ವಿನಿಯ ಡೆತ್ ನೋಟ್ ಪತ್ತೆಯಾಗಿದೆ. ಅದರಲ್ಲಿ ಅವಳು ತನಗೆ ಮುಂದೆ ಓದಲು ಇಷ್ಟವಿಲ್ಲ ಎಂದು ಹೇಳಿಕೊಂಡಿದ್ದಾಳೆ. ಆರು ಬ್ಯಾಕ್ಲಾಗ್ ಇರುವುದರಿಂದ ಓದುವುದರಲ್ಲಿ ಆಸಕ್ತಿ ಕಳೆದುಕೊಂಡಿದ್ದೇನೆ ಎಂದು ಬರೆದಿದ್ದಾಳೆ.

Related Posts

Leave a Reply

Your email address will not be published. Required fields are marked *