Menu

ಶಿವಶಂಕರಪ್ಪ ಸಾಹುಕಾರ್ ಮನೆ ಸೇರಿ ರಾಜ್ಯದ 21 ಕಡೆ ಇಡಿ ದಾಳಿ

ಕೆಪಿಎಸ್ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಮನೆ ಸೇರಿದಂತೆ ರಾಜ್ಯದ 21 ಕಡೆಗಳಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ರುದಾರೆ.  ರಾಯಚೂರು ದೇವದುರ್ಗ ತಾಲೂಕಿನ ಶಾವಂತಗೇರಾ ಗ್ರಾಮದಲ್ಲೂ ಇಡಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

ಶಿವಶಂಕರಪ್ಪ ಸಾಹುಕಾರ್ ಅಧಿಕಾರದಲ್ಲಿ ಇರುವಾಗ ನೇಮಕವಾಗಿದ್ದ ಶಾವಂತಗೇರಾ ಗ್ರಾಮದ ಪಶುವೈದ್ಯಾಧಿಕಾರಿ ಸುಗೂರೇಶ್ ಅವರ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ, ವಿವಿಧ ದಾಖಲೆಗಳು ಹಾಗೂ ಬ್ಯಾಂಕ್ ವ್ಯವಹಾರಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಪರಿಶೀಲಿಸಿದ್ದಾರೆ. ಮನೆಯಲ್ಲಿ ಕೆಲಕಾಲ ವಿಚಾರಣೆ ನಡೆಸಿ, ಅಗತ್ಯ ದಾಖಲೆಗಳನ್ನು ಪರಿಶೀಲನೆಗೆ ಒಳಪಡಿಸಿದ್ದಾರೆ ಎಂದು ತಿಳಿದುಬಂದಿದೆ.

ಸುಗೂರೇಶ್ ಅವರು ಶಿವಶಂಕರಪ್ಪ ಸಾಹುಕಾರ್ ಅವರ ದೂರದ ಸಂಬಂಧಿಯಾಗಿದ್ದಾರೆ ಎನ್ನಲಾಗಿದ್ದು, ಶಿವಶಂಕರಪ್ಪ ಸಾಹುಕಾರ್ ಕೆಪಿಎಸ್ಸಿ ಅಧ್ಯಕ್ಷರಾಗಿದ್ದ ಅವಧಿಯಲ್ಲೇ ಸುಗೂರೇಶ್ ಅವರು ಸರ್ಕಾರಿ ಉದ್ಯೋಗ ಪಡೆದಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಈ ಹಿನ್ನೆಲೆಯಲ್ಲಿ ಅವರ ನೇಮಕಾತಿ ಹಾಗೂ ಆರ್ಥಿಕ ವ್ಯವಹಾರಗಳಿಗೆ ಸಂಬಂಧಿಸಿದ ದಾಖಲೆಗಳ ಪರಿಶೀಲನೆಗಾಗಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎನ್ನಲಾಗಿದೆ.

ದಾಳಿಯ ವೇಳೆ ಅಧಿಕಾರಿಗಳು ಹಲವು ದಾಖಲೆಗಳು, ಬ್ಯಾಂಕ್ ಖಾತೆಗಳ ವ್ಯವಹಾರ ಸೇರಿದಂತೆ ವಿವಿಧ ಮಾಹಿತಿಗಳನ್ನು ಪರಿಶೀಲಿಸಿದ್ದು, ತನಿಖೆ ಮುಂದುವರಿಸಿದ್ದಾರೆ. ಇಡಿ ದಾಳಿಗೆ ಸಂಬಂಧಿಸಿದಂತೆ ಹೆಚ್ಚಿನ ವಿವರಗಳು ಅಧಿಕಾರಿಗಳ ಅಧಿಕೃತ ಮಾಹಿತಿಯ ಬಳಿಕವಷ್ಟೇ ಸ್ಪಷ್ಟವಾಗಬೇಕಿದೆ.

ಕಲಬುರಗಿ ನಗರದ ಆನಂದ ಹೋಟೆಲ್ ಬಳಿಯಿರುವ  ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ  ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಪಶು ವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಯಲ್ಲಿ ಕೋಟ್ಯಾಂತರ ರೂಪಾಯಿ ಅವ್ಯವಹಾರ ಆರೋಪದ ಹಿನ್ನೆಲೆಯಲ್ಲಿ 10 ಕ್ಕೂ ಹೆಚ್ಚು ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.  ಸಿಆರ್‌ಪಿಎಫ್ ಯೋಧರ ಭದ್ರತೆಯೊಂದಿಗೆ ಅಧಿಕಾರಿಗಳು ದಾಳಿ ನಡೆಸಿದ್ದು, ಒಟ್ಟು 13 ಕಡೆ ಶೋಧ ಕಾರ್ಯ  ಕೈಗೊಂಡಿದ್ದಾರೆ.

 

 

Related Posts

Leave a Reply

Your email address will not be published. Required fields are marked *