Menu

ಮೇ 9 ರವರೆಗೆ ರಾಜ್ಯದ ಹಲವೆಡೆ ಮಳೆ

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮೇ 9 ರವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಉತ್ತರ ಒಳನಾಡು, ದಕ್ಷಿಣ ಒಳನಾಡಿನಲ್ಲಿ ಬಿರುಗಾಳಿ ಗುಡುಗು ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಕೆಲವು ಭಾಗಗಳಲ್ಲಿ ಸಾಮಾನ್ಯ ಮಳೆಯಾಗಲಿದೆ.

ಶಿವಮೊಗ್ಗ, ಚಿಕ್ಕಮಗಳೂರು, ಬಾಗಲಕೋಟೆ, ಗದಗ, ಹಾವೇರಿ, ವಿಜಯಪುರ, ಬೆಳಗಾವಿ, ಬೀದರ್, ಧಾರವಾಡ, ಸೇರಿದಂತೆ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಎರಡು ದಿನ ಒಣ ಹವೆ ಇರಲಿದೆ. ಮೇ 5 ರಿಂದ ಕೊಪ್ಪಳ, ಯಾದಗಿರಿ, ರಾಯಚೂರು, ಕಲಬುರಗಿ ಜಿಲ್ಲೆಗಳಲ್ಲಿ ಹಗುರ ಮಳೆ ಬೀಳುವ ಸಾಧ್ಯತೆ ಇದೆ ಎಂದು ಇಲಾಖೆ ಮಾಹಿತಿ ನೀಡಿದೆ.

ಭಾನುವಾರ ರಾತ್ರಿ ಹಾಗೂ ಸೋಮವಾರ ಬೆಳಗ್ಗೆ ಬೆಂಗಳೂರಿನ ಹಲವೆಡೆ ಭಾರಿ ಮಳೆಯಾಗಿದೆ. ಮುಂದಿನ ಮೂರು ದಿನ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಒಣ ಹವೆಯಿರಲಿದೆ. ಉತ್ತರ ಕರ್ನಾಟಕದ ಬೀದರ್, ಕಲ್ಬುರ್ಗಿ, ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಂಭವವಿದ್ದು, ಉಳಿದೆಡೆ ಶುಷ್ಕ ವಾತಾವರಣವಿರಲಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ವಿಜಯನಗರ, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ, ತುಮಕೂರು, ಹಾಸನ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

Related Posts

Leave a Reply

Your email address will not be published. Required fields are marked *