Menu

ಕೊಡಗಿನ ಹಲವೆಡೆ ಮಳೆ: ಭರ್ತಿಯಾಗುತ್ತಿದೆ ಹಾರಂಗಿ ಜಲಾಶಯ

ಕೊಡಗಿನ ಹಲವೆಡೆ ನಿರಂತರ ಮಳೆ ಸಯರಿಯುತ್ತಿದ್ದು, ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ಹಳ್ಳ-ಕೊಳ್ಳಗಳು ತುಂಬಿ ಹರಿಯಲಾರಂಭಿಸಿವೆ. ತಗ್ಗು ಪ್ರದೇಶಗಳಲ್ಲಿ ನೀರು ನಿಂತು ಸಮಸ್ಯೆಯುಂಟಾಗಿದೆ.

ಹಾರಂಗಿ ಜಲಾಶಯದ ಗರಿಷ್ಠ ನೀರಿನ ಮಟ್ಟ 2,859 ಅಡಿ ಆಗಿದ್ದು, ಜಲಾಶಯದಲ್ಲಿ 2,832.72 ಅಡಿ ನೀರು ಸಂಗ್ರಹವಾಗಿದೆ. ಜಲಾಶಯಕ್ಕೆ 1,479 ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, ಜಲಾಶಯದಿಂದ 180 ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ.

ಮಡಿಕೇರಿ, ಸೋಮವಾರಪೇಟೆ, ವಿರಾಜಪೇಟೆ ಸೇರಿದಂತೆ ಹಲವು ಭಾಗಗಳಲ್ಲಿ ನಿರಂತರ ಮಳೆ ಸುರಿಯುತ್ತಿದೆ. ಭತ್ತ, ಕಾಫಿ ಹಾಗೂ ಇತರ ಬೆಳೆಗಳ ಕೃಷಿಯಲ್ಲಿ ರೈತರು ತೊಡಗಿದ್ದು, ಉತ್ತಮ ಬೆಳೆಯ ನಿರೀಕ್ಷೆಯಲ್ಲಿದ್ದಾರೆ. ಇಲ್ಲಿ
ನಿರಂತರ ಮಳೆಯ ಪರಿಣಾಮವಾಗಿ ಕಾವೇರಿ ನದಿಯ ನೀರಿನ ಮಟ್ಟವೂ ನಿಧಾನವಾಗಿ ಏರಿಕೆಯಾಗುತ್ತಿದೆ. ಕಾವೇರಿ ಮೈ ದುಂಬಿದರೆ ಕೆಆರ್‌ಎಸ್‌ ಭರ್ತಿಯಾಗಿ ಬೆಂಗಳೂರು , ಮೈಸೂರು , ಮಂಡ್ಯದಲ್ಲಿ ನೀರಿನ ಬವಣೆ ದೂರವಾಗಲಿದೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡ್ಮೂರು ದಿನ ಮಳೆಯಾಗಲಿದೆ. ಕರಾವಳಿ, ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಮಳೆ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಬೆಂಗಳೂರು ನಗರದಾದ್ಯಂತ ತುಂತುರು ಮಳೆ ಜೊತೆಗೆ ತಂಪು ಗಾಳಿ ಬೀಸುವಿಕೆ ಮುಂದುವರಿಯಲಿದೆ.

Related Posts

Leave a Reply

Your email address will not be published. Required fields are marked *