Menu

ರಾಜ್ಯದಲ್ಲಿ ಮುಂದಿನ ಮೂರು ದಿನ ಮಳೆ

Heavy rains Karnataka

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮುಂದಿನ ಮೂರು ದಿನ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಉತ್ತರ ಒಳನಾಡಿನಲ್ಲಿ ಗರಿಷ್ಠ ತಾಪಮಾನ ಮುಂದುವರಿಯಲಿದೆ. ಬೆಂಗಳೂರಿನಲ್ಲೂ ಮಳೆಯಾಗಿ ತಾಪಮಾನ ಅಲ್ಪ ಇಳಿಕೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಮೇ 8 ಮತ್ತು 9ರಂದು ಗುಡುಗು ಸಹಿತ ಮಳೆಯಾಗಲಿದೆ. ಉತ್ತರ ಒಳನಾಡಿನ ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಹೆಚ್ಚಿನ ಮಳೆಯ ಸುರಿಯಲಿದೆ ಎಂದು ಎಚ್ಚರಿಕೆ ನೀಡಲಾಗಿದೆ.

ಕೆಲವು ಜಿಲ್ಲೆಗಳಲ್ಲಿ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆ ಇದೆ. ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಭಾಗಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಮುಂದಿನ 24 ರಿಂದ 48 ಗಂಟೆಗಳಲ್ಲಿ ಸಂಜೆ ಅಥವಾ ರಾತ್ರಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

Related Posts

Leave a Reply

Your email address will not be published. Required fields are marked *