ರಾಜಕೀಯ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಸರ್ಕಾರ ಉತ್ತರ ನೀಡಿಲ್ಲ: ಆರ್ ಅಶೋಕ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆಯಾಗಿದೆ. ಆದರೆ ಸಿಎಂ ಸಿದ್ದರಾಮಯ್ಯ ಆ ಭಾಗಕ್ಕೆ ಹೊಸದಾಗಿ ಏನೂ ನೀಡಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಟೀಕಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಸಂಬಂಧಿಸಿದಂತೆ ನಾನು ಎರಡು ಗಂಟೆ, ಐವತ್ತೈದು ನಿಮಿಷ ಮಾತಾಡಿದ್ದೇನೆ. ಸಿಎಂ ಸಿದ್ದರಾಮಯ್ಯ ಹೊಸ ಘೋಷಣೆ ಮಾಡದೆ ಸಂಪೂರ್ಣ ವಿಫಲರಾಗಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ ಹಣ ನೀಡಲು ಏಕೆ ವಿಳಂಬವಾಗಿದೆ ಎಂದು ಸರ್ಕಾರ ಸರಿಯಾಗಿ ತಿಳಿಸಿಲ್ಲ.
ಮೋದಿ ಸರ್ಕಾರದ ನಿರ್ಧಾರದಿಂದ ಭವಿಷ್ಯದಲ್ಲಿ ನರೇಗಾ ಯೋಜನೆ ವಿಫಲ: ಡಿಕೆ ಶಿವಕುಮಾರ್ ಕಳವಳ
“ಮನಮೋಹನ್ ಸಿಂಗ್ ಅವರು ಅನೇಕ ಅಧ್ಯಯನ ನಡೆಸಿ ನರೇಗಾ ಯೋಜನೆ ಜಾರಿಗೆ ತಂದಿದ್ದರು. ಮೋದಿ ಸರ್ಕಾರದ ನಿರ್ಧಾರದಿಂದ ಭವಿಷ್ಯದಲ್ಲಿ ನರೇಗಾ ಯೋಜನೆ ವಿಫಲವಾಗಲಿದೆ. ಮೋದಿ ಸರ್ಕಾರ ಇಂತಹ ನಿರ್ಧಾರ ಕೈಗೊಳ್ಳುತ್ತದೆ ಎಂದು ಭಾವಿಸಿರಲಿಲ್ಲ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಕಳವಳ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ, ಬೆಂಬಲ ಕೋರಿ ಕೇಂದ್ರ ಸಚಿವರಿಗೆ ಡಿಸಿಎಂ ಮನವಿ
ಮೆಟ್ರೋ 2ನೇ ಹಂತದ ಪರಿಷ್ಕೃತ ದರಕ್ಕೆ ಒಪ್ಪಿಗೆ, ಮೆಟ್ರೋ 3ಎ ಹಂತಕ್ಕೆ ಅನುಮೋದನೆ, RRTS ಯೋಜನೆಗೆ ಬೆಂಬಲ, ಮಿಟ್ಟಗಾನಹಳ್ಳಿ ಕೆರೆ ಬಳಿ ವಿವಿಧಹಂತದ ತ್ಯಾಜ್ಯ ವಿಲೇವಾರಿ (Treatment and Disposal of Legacy Leachate)ಗೆ ಅನುಮತಿ ಸೇರಿದಂತೆ ಬೆಂಗಳೂರಿನ ಅಭಿವೃದ್ಧಿಗೆ ಅಗತ್ಯವಾಗಿರುವ
ಮಗು ಅತ್ತರೆ ಯಾರು ಸಮಾಧಾನ ಪಡಿಸಬೇಕು: ಕೆಎನ್ ರಾಜಣ್ಣ ಪತ್ರಕ್ಕೆ ಡಿಕೆ ಸುರೇಶ್ ಪ್ರತಿಕ್ರಿಯೆ
ಬೆಂಗಳೂರು: ಮಗು ಅತ್ತರೆ ಯಾರು ಸಮಾಧಾನ ಮಾಡಬೇಕು? ತಂದೆ – ತಾಯಿ, ಪೋಷಕರು ಸಮಾಧಾನ ಮಾಡಬೇಕು. ಇಲ್ಲಿ ಕೂಡ ಏನೇ ಸಮಸ್ಯೆ ಇದ್ರೂ ಹೈಕಮಾಂಡ್ ಗಮನಿಸುತ್ತದೆ ಎಂದು ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರ ಪತ್ರದ ಬಗ್ಗೆ ಮಾಜಿ ಸಂಸದ ಡಿ.ಕೆ.
ಕಾರ್ಮಿಕ ಸಚಿವ ಸಂತೋಷ್ ಲಾಡ್ಗೆ ಜೀವ ರಕ್ಷಕ ಪ್ರಶಸ್ತಿ
ಸಮಾಜದಲ್ಲಿ ಬದಲಾವಣೆ ಬೇಕಾದರೆ ಮೊದಲು ಸರಿಯಾದ ಜನಪ್ರತಿನಧಿಯನ್ನು ಆಯ್ಕೆ ಮಾಡಬೇಕು. ಈ ಆಯ್ಕೆ ಮಾಡುವುದು ಸವಾಲಿನ ಕೆಲಸ. ಇದು ಜವಾಬ್ದಾರಿಯುತವಾದ ಕೆಲಸ ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಎಸ್ ಲಾಡ್ ಹೇಳಿದರು. ಚಿತ್ರದುರ್ಗದ ವಾಲ್ಮೀಕಿ ಭವನದಲ್ಲಿ
ಮಾರ್ಚ್ಗೆ ಕೋರಮಂಗಲ- ಸರ್ಜಾಪುರ ಬಫರ್ ರಸ್ತೆ ಕಾಮಗಾರಿ ಪೂರ್ಣ: ಡಿಸಿಎಂ
“ಮುಂದಿನ ವರ್ಷ ಮಾರ್ಚ್ ತಿಂಗಳ ವೇಳೆಗೆ ಕೋರಮಂಗಲದಿಂದ ಸರ್ಜಾಪುರವರೆಗಿನ 5.50 ಕಿ.ಮೀ ಉದ್ದದ ಬಫರ್ ರಸ್ತೆ ಕಾಮಗಾರಿ ಪೂರ್ಣಗೊಳ್ಳಲಿದೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ ರಾಜಕಾಲುವೆ ಪಕ್ಕದಲ್ಲಿ ಸಂಚಾರಿಯುಕ್ತ ಬಫರ್ ರಸ್ತೆ ನಿರ್ಮಾಣ ಕಾಮಗಾರಿಗಳನ್ನು
ದ್ವೇಷ ಭಾಷಣ ತಡೆ ಕಾಯ್ದೆ ಎಲ್ಲಾ ಪಕ್ಷದವರಿಗೂ ಅನ್ವಯ, ಬಿಜೆಪಿಯವರಿಂದ ಏಕೆ ವಿರೋಧ?
ದ್ವೇಷ ಭಾಷಣ ತಡೆ ಮಸೂದೆಯನ್ನು ಪ್ರಚೋದನಕಾರಿ ಭಾಷಣ ಮಾಡುವವರು ಮಾತ್ರ ವಿರೋಧಿಸುತ್ತಾರೆ. ಈ ಕಾಯ್ದೆ ಎಲ್ಲಾ ಪಕ್ಷದವರಿಗೂ ಅನ್ವಯವಾಗುತ್ತದೆ. ಪ್ರಚೋದನಾಕಾರಿ ಭಾಷಣ ಮಾಡದೆ ಹೋದರೆ ಸುಮ್ಮನೆ ಪ್ರಕರಣ ದಾಖಲಿಸುವುದಿಲ್ಲ . ಬಿಜೆಪಿಯವರು ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ಏಕೆ ನೋಡಿಕೊಳ್ಳುತ್ತಿದ್ದಾರೆ
ಖಜಾನೆ ತುಂಬಿಸಲು ಸರ್ಕಾರದಿಂದ 569 ಮದ್ಯ ಲೈಸೆನ್ಸ್ ಇ- ಹರಾಜು
ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಹಿಳಾ ಆಯೋಗ ಇತ್ತೀಚೆಗೆ ಮನವಿ ಮಾಡಿದೆ, ಇದೀಗ ಸರ್ಕಾರ ರಾಜ್ಯದ 569 ವೈನ್ ಸ್ಟೋರ್ ಹಾಗೂ ಬಾರ್ ಆ್ಯಂಡ್ ರೆಸ್ಟೋರೆಂಟ್ಗಳ ಲೈಸೆನ್ಸ್ ಇ-ಹರಾಜಿಗೆ ಮುಂದಾಗಿದೆ. ಮದ್ಯ ಮಾರಾಟ ಇಳಿಕೆಯಾಗಿದ್ದು, ಸಂಪನ್ಮೂಲ ಕ್ರೋಢೀಕರಣಕ್ಕೆ
ಅಧಿಕಾರ ಹಂಚಿಕೆ ಬಗ್ಗೆ ರಾಹುಲ್ ಗಾಂಧಿ ತೀರ್ಮಾನಿಸುತ್ತಾರೆ: ಸಿಎಂ ಸಿದ್ದರಾಮಯ್ಯ
ಮೈಸೂರು : ಯಾರು ಪಕ್ಷಕ್ಕಿಂತ ದೊಡ್ಡವರಾದರೂ ಸಾಧ್ಯವೇ ಇಲ್ಲ. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತು ರಾಹುಲ್ ಗಾಂಧಿ ಏನು ತೀರ್ಮಾನಿಸುತ್ತಾರೋ ಅದಕ್ಕೆ ನಾವು ಬದ್ಧ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಮೈಸೂರಿನಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷಕ್ಕಿಂತ ಯಾರು ದೊಡ್ಡವರಲ್ಲ.
ಕಾಂಗ್ರೆಸ್ನ ಯಾವ ನಾಯಕರಾದ್ರೂ ಖರ್ಗೆ ಸಾಹೇಬರ ಮಾತು ಕೇಳಬೇಕು: ದಿನೇಶ್ ಗುಂಡೂರಾವ್
ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರ ಮಾತಿನಂತೆ ಎಲ್ಲರೂ ನಡೆಯಬೇಕಿದೆ. ಅನಾವಶ್ಯಕ ಗೊಂದಲ ಪಕ್ಷಕ್ಕೂ, ಕಾರ್ಯಕರ್ತರಿಗೂ ಒಳ್ಳೆಯದಲ್ಲ. ಯಾರೇ ನಾಯಕರು ಆದರೂ ಕೂಡಾ ಖರ್ಗೆ ಸಾಹೇಬರ ಮಾತು ಕೇಳಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಚಿತ್ರದುರ್ಗದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ




