ರಾಜಕೀಯ
ದೇವನಹಳ್ಳಿ ಭೂ ಸ್ವಾಧೀನ ರದ್ದು: ಏರೋಸ್ಪೇಸ್ ಉದ್ಯಮಿಗಳಿಗೆ ಆಂಧ್ರ ಸಚಿವ ನಾರಾ ಲೋಕೇಶ್ ಆಹ್ವಾನ
ಭೂಸ್ವಾಧೀನ ವಿರೋಧಿಸಿ ರೈತರು ಮಾಡಿದ ಆಗ್ರಹವನ್ನು ಗೌರವಿಸಿದ ಕರ್ನಾಟಕ ರಾಜ್ಯ ಸರ್ಕಾರವು ದೇವನಹಳ್ಳಿಯ ಚನ್ನರಾಯಪಟ್ಟಣ ಭೂಸ್ವಾಧೀನ ಪ್ರಕ್ರಿಯೆಯನ್ನು ರದ್ದುಗೊಳಿಸಿರುವ ಬೆನ್ನಲ್ಲೇ ಏರೋಸ್ಪೇಸ್ ಉದ್ಯಮಿಗಳಿಗೆ ಆಂಧ್ರ ಸಿಎಂ ಪುತ್ರ ಹಾಗೂ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ನಾರಾ ಲೋಕೇಶ್ ಬಹಿರಂಗ ಆಹ್ವಾನ ನೀಡಿದ್ದಾರೆ. 1,777 ಎಕರೆ ಭೂಸ್ವಾಧೀನಕ್ಕೆ ಸರ್ಕಾರ ಹೊರಡಿಸಿದ್ದ ಫೈನಲ್ ನೋಟಿಫಿಕೇಶನ್‌ನ್ನು ಕರ್ನಾಟಕ ಸರ್ಕಾರ ರದ್ದು ಮಾಡಿದೆ. ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ನಾರಾ ಲೋಕೆಶ್, ಈ ವಿಚಾರ ಕೇಳಿ ಬೇಸರವಾಯಿತು.
ಭಾರತದ ಸಾಮಾಜಿಕ ಪ್ರಜಾಪ್ರಭುತ್ವದ ಅಡಿಪಾಯ ಬಲಗೊಳಿಸುವುದು ನಮ್ಮ ಕರ್ತವ್ಯ: ಸಿಎಂ
ಈ ಸಂದರ್ಭದಲ್ಲಿ ಭಾರತದ ಸಾಮಾಜಿಕ ಪ್ರಜಾಪ್ರಭುತ್ವದ ಅಡಿಪಾಯವನ್ನು ಬಲಗೊಳಿಸುವುದು ನಮ್ಮ ಕರ್ತವ್ಯ. ಬಸವಣ್ಣ, ನಾಲ್ವಡಿ ಕೃಷ್ಣರಾಜ ಒಡೆಯರ್ ಮತ್ತು ದೇವರಾಜ ಅರಸ್ ಅವರ ಭೂಮಿಯಿಂದ, ಸಾಮಾಜಿಕ ನ್ಯಾಯವನ್ನು ಕೇವಲ ಘೋಷಣೆಯಾಗಿ ಅಲ್ಲ, ಜೀವಂತ ರಾಜಕೀಯ ಚೈತನ್ಯವಾಗಿ ಒಪ್ಪಿಕೊಂಡ ಈ ನಾಡಿನಿಂದ ನಿಮಗೆ ಆತ್ಮೀಯ
ಸಿಗಂದೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ: ಆರ್.ಅಶೋಕ್
ಬೆಂಗಳೂರು: ಸಿಗಂದೂರು ಸೇತುವೆ ಉಲ್ಲಂಘನೆ ಕಾರ್ಯಕ್ರಮದಲ್ಲಿ ಯಾವುದೇ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ ತಿರುಗೇಟು ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಪ್ರಧಾನ ಮಂತ್ರಿಗಳಿಗೆ ಪತ್ರ
ಗ್ರೇಟರ್ ಬೆಂಗಳೂರಿನಲ್ಲಿ ಐದು ಪಾಲಿಕೆ ರಚನೆ, ಶೀಘ್ರ ಚುನಾವಣೆ: ಡಿಕೆ ಶಿವಕುಮಾರ್
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ ಐದು ಪಾಲಿಕೆ ರಚನೆ ಮಾಡಿ, ಶೀಘ್ರ ಚುನಾವಣೆ ನಡೆಸುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಕೆಪಿಸಿಸಿ ಕಚೇರಿ ಭಾರತ್ ಜೋಡೋ ಭವನದಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಾಜ್ಯ, ಜಿಲ್ಲೆ, ತಾಲೂಕು ಮಟ್ಟದ ಪದಾಧಿಕಾರಿಗಳ
ಅರಸನ ಅರಮನೆಗೆ ಕಾರ್ಮೋಡ ಕವಿದೀತು ಎಂದರೇಕೆ ಕೋಡಿಮಠ ಶ್ರೀ
ದೇಶಕ್ಕೆ ವಿಶ್ವವೇ ತಿರುಗಿ ನೋಡುವ ಬಹುದೊಡ್ಡ ಗಂಡಾಂತರ ಕಾದಿದ್ದು, ಭಾರಿ ಮಟ್ಟಿನ ಆಘಾತ ಎದುರಾಗಲಿದೆ, ಅರಸನ ಅರಮನೆಗೆ ಕಾರ್ಮೋಡ ಕವಿದೀತು ಎಂದು ಕೋಡಿಮಠ ಸಂಸ್ಥಾನದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಮೈಸೂರಿನ ನಮನ್ ಫೌಂಡೇಶನ್ ವತಿಯಿಂದ ನಿರ್ಮಾಣವಾಗಲಿರುವ ಧ್ಯಾನ ಕೇಂದ್ರದ
ಆಂಧ್ರದಲ್ಲಿ ಮದ್ಯ ದರ ಭಾರಿ ಇಳಿಕೆ
ರಾಜ್ಯದಲ್ಲಿ ಅಬಕಾರಿ ತೆರಿಗೆ ಸಂಗ್ರಹಕ್ಕೆ ಮದ್ಯದ ದರ ಏರಿಕೆ ಮಾಡುತ್ತಿದ್ದರೆ ಆಂಧ್ರಪ್ರದೇಶದಲ್ಲಿ ಚಂದ್ರಬಾಬು ನಾಯ್ಡು ನೇತೃತ್ವದ ಸರ್ಕಾರವು ಇದೇ ಮೊದಲ ಬಾರಿ ಮದ್ಯದ ದರ ಇಳಿಸಿದ್ದು, ಪ್ರತಿ ಬಾಟಲ್‌ಗೆ 10 ರೂಪಾಯಿಯಿಂದ 100 ರೂ.ವರೆಗೆ ಕಡಿತಗೊಳಿಸಿದೆ. ಈ ಕ್ರಮದಿಂದ ಆ ರಾಜ್ಯದಲ್ಲಿ
ರೈತರ ಹೋರಾಟಕ್ಕೆ ಸ್ಪಂದಿಸಿದ ರಾಜ್ಯ ಸರ್ಕಾರ: ಬಲವಂತದ ಭೂಸ್ವಾಧೀನ ಕೈಬಿಡಲು ತೀರ್ಮಾನ
ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹಾಗೂ ಇತರ ಗ್ರಾಮಗಳಲ್ಲಿನ ಭೂಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಕೈಬಿಟ್ಟಿದ್ದೇವೆ. ಸರ್ಕಾರ ಭೂಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಕೈಬಿಡಲು ನಿರ್ಧರಿಸಿದೆ. ಕೆಲವು ರೈತರು ಜಮೀನು ನೀಡಲು ಸಿದ್ಧರಿರುವುದಾಗಿ ಮುಂದೆ ಬಂದಿದ್ದಾರೆ. ಜಮೀನು ನೀಡಲು ಇಚ್ಚಿಸುವವರ ಜಮೀನು ಸರ್ಕಾರ ಸ್ವಾಧೀನಪಡಿಸಿಕೊಳ್ಳಲಿದ್ದು, ಅವರಿಗೆ
ಬಿ.ಸರೋಜಾದೇವಿ ಅದ್ಭುತ ಮೇರು ನಟಿ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬಿ.ಸರೋಜಾದೇವಿ ಒಬ್ಬ ಮೇರು ನಟಿ. ಪಂಚಭಾಷೆ ತಾರೆಯಾಗಿ ಕನ್ನಡ, ತಮಿಳು, ತೆಲುಗು ಹಿಂದಿ ಭಾಷೆಗಳಲ್ಲಿ ಪಾತ್ರಗಳನ್ನು ಮಾಡಿ ಸೈ ಎನಿಸಿಕೊಂಡಿದ್ದ ಅದ್ಭುತ ನಟಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮಲ್ಲೇಶ್ವರಂನ 11 ನೇ ಅಡ್ಡ ರಸ್ತೆಯಲ್ಲಿರುವ ಬಹುಭಾಷಾ ತಾರೆ ಹಿರಿಯ ನಟಿ
ಐಪಿಎಸ್ ಅಧಿಕಾರಿಗಳ ವರ್ಗಾವಣೆ
35 ಐಪಿಎಸ್ ಅಧಿಕಾರಿಗಳ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಸಿಸಿಬಿ ಜಂಟಿ ಪೊಲೀಸ್ ಆಯುಕ್ತರಾಗಿ ಅಜಯ್ ಹಿಲೋರಿ ನೇಮಕಗೊಂಡಿದ್ದಾರೆ. ಕಾರ್ತಿಕ್ ರೆಡ್ಡಿ ಸಂಚಾರಿ ಜಂಟಿ ಪೊಲೀಸ್ ಆಯುಕ್ತ, ಕೇಂದ್ರ ವಿಭಾಗದ ಡಿಸಿಪಿಯಾಗಿ ಅಕ್ಷಯ್ ಅಕಾಯ್, ಕೆ. ಪರುಷರಾಮ್ ವೈಟ್ ಫಿಲ್ಡ್ ಡಿಸಿಪಿ,
ವಿಜಯಪುರ ಭಾಗಕ್ಕೆ 3200 ಕೋಟಿ ರೂ. ಮೊತ್ತದ ನೀರಾವರಿ ಯೋಜನೆ: ಡಿಸಿಎಂ
ವಿಜಯಪುರ ಹಾಗೂ ಈ ಭಾಗದ 93 ಸಾವಿರ ಹೆಕ್ಟೇರ್ ಕೃಷಿ ಭೂಮಿಗೆ ನೀರಾವರಿ ಒದಗಿಸಲು ರೂ.3200 ಕೋಟಿ ಮೊತ್ತದ ಯೋಜನೆಗಳನ್ನು ರೂಪಿಸಲಾಗಿದೆ ಎಂದು ಜಲಸಂಪನ್ಮೂಲ ಸಚಿವರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಇಂಡಿ ತಾಲೂಕಿನಲ್ಲಿ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ