ರಾಜಕೀಯ
ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್‌ಐಆರ್: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
ಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂಬ ಆರೋಪದ ಮೇಲೆ ಉಪ್ಪಿನಂಗಡಿ ಠಾಣೆಯಲ್ಲಿ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ದಾಖಲಾದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಶಾಸಕರು ಎಫ್‌ಐಆರ್ ರದ್ದು ಕೋರಿ ಹೈಕೋರ್ಟ್ ಮೊರೆ ಹೋಗಿದ್ದು, ವಿಚಾರಣೆಯನ್ನು ಮೇ 20ಕ್ಕೆ ಮುಂದೂಡಲಾಗಿದೆ. ಪೂಂಜಾ ಸಲ್ಲಿಸಿರುವ ಅರ್ಜಿ ನ್ಯಾ. ವಿ. ಶ್ರೀಶಾನಂದ ಅವರಿದ್ದ ರಜಾ ಕಾಲದ ಏಕಸದಸ್ಯ ಪೀಠದ ಮುಂದೆ ಗುರುವಾರ ವಿಚಾರಣೆಗೆ
ಕೇಂದ್ರದ ಸೂಚನೆಯಂತೆ ಎಲ್ಲಾ ಸುರಕ್ಷತಾ ಕ್ರಮ ಪಾಲನೆ: ಸಿಎಂ
ಉಗ್ರರ ನೆಲೆಗಳ ಮೇಲೆ ದಾಳಿ ಬಳಿಕ ಕೇಂದ್ರ ಸರ್ಕಾರದ ನೀಡಿರುವ ಎಲ್ಲಾ ಸೂಚನೆಗಳನ್ನು ಪಾಲಿಸಲಾಗುತ್ತಿದೆ. ಎಲ್ಲೆಡೆ ಅಣುಕು ಕವಾಯತು ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮದ್ದೂರು ಕಾಫಿ ಡೇ ಹತ್ತಿರದ ಗೆಜ್ಜಲಗೆರೆ ಹೆಲಿಪ್ಯಾಡ್ ನಲ್ಲಿ ಬಂದಿಳಿದು ಕಾರ್ಯಕ್ರಮಕ್ಕೆ ತೆರಳುವ ಮುನ್ನ
ಸೇನೆಗೆ ಧೈರ್ಯ ತುಂಬಲು ಮುಜರಾಯಿ ದೇಗುಲಗಳಲ್ಲಿ ಪೂಜೆಗೆ ಸಚಿವ ರಾಮಲಿಂಗಾರೆಡ್ಡಿ ಸೂಚನೆ
ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಗೆ ಪ್ರತಿಯಾಗಿ ಭಾರತೀಯ ವಾಯುಪಡೆಯು ಪಾಕಿಸ್ತಾನ ನೆಲದಲ್ಲಿ ನೆಲೆಯೂರಿದ್ದ ಭಯೋತ್ಪಾದಕರ ತಾಣಗಳ ಮೇಲೆ ಆಪರೇಷನ್ ಸಿಂಧೂರ ಕಾರ್ಯಾಚರನೆಯ ಮೂಲಕ ದಾಳಿ ನಡೆಸಿ ತಕ್ಕ ಪ್ರತ್ಯುತ್ತರ ನೀಡಿದೆ. ಭಾರತೀಯ ಸೇನಾ ಕಾರ್ಯಾಚರಣೆಗೆ ಇನ್ನಷ್ಟು ಸ್ಥೈರ್ಯ ತುಂಬಲು ರಾಜ್ಯದ ಎಲ್ಲ
‘ಆಪರೇಷನ್ ಸಿಂಧೂರ್ ‘ ನಮ್ಮ ಸೇನೆ ನಮ್ಮ ಹೆಮ್ಮೆ: ಸಚಿವ ಜಮೀರ್ ಅಹಮದ್
ಪಹಲ್ಗಾಮ್ ದಾಳಿಯಲ್ಲಿ ಅಮಾಯಕರ ಜೀವ ಪಡೆದ ಪಾಕಿಸ್ತಾನ ಉಗ್ರರ ಕೃತ್ಯಕ್ಕೆ ಪ್ರತೀಕಾರವಾಗಿ ಭಾರತೀಯ ಸೇನೆ ‘ಆಪರೇಷನ್ ಸಿಂಧೂರ್ ‘ ನಡೆಸಿ ತನ್ನ ಶಕ್ತಿ ಹಾಗೂ ಪರಾಕ್ರಮ ತೋರಿಸಿದೆ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಅಭಿನಂದನೆ
“ಆಪರೇಷನ್ ಸಿಂಧೂರ್” ಬಳಿಕ ರಾಜ್ಯದ ಡ್ಯಾಂ, ಏರ್‌ಪೋರ್ಟ್‌ಗಳಿಗೆ ಬಿಗಿ ಭದ್ರತೆ: ಸಚಿವ ಪರಮೇಶ್ವರ್
ಭಾರತದ ವಾಯುಪಡೆಯು ಉಗ್ರರ ತಾಣಗಳ ಮೇಲೆ “ಆಪರೇಷನ್ ಸಿಂಧೂರ್” ಕಾರ್ಯಾಚರಣೆ ನಡೆಸಿದ ಬಳಿಕ ಕೇಂದ್ರ ಸರ್ಕಾರದ ಸೂಚನೆಯನ್ವಯ ರಾಜ್ಯದಲ್ಲೂ ನಾಗರಿಕ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ. ರಾಜ್ಯದ ವಿಮಾನ ನಿಲ್ದಾಣಗಳು ಮತ್ತು ಡ್ಯಾಮ್‌ಗಳಿಗೆ ಹೆಚ್ಚಿನ ಭದ್ರತೆ
ಆಪರೇಷನ್ ಸಿಂಧೂರ್: ಉಗ್ರರ ನೆಲೆಗಳ ನಾಶ, ಸೇನಾಪಡೆಗೆ ಅಭಿನಂದನೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ
ದೇಶದ ಸೇನಾಪಡೆಯು ಪಾಕಿಸ್ತಾನ ಹಾಗೂ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರಗಾಮಿಗಳ ನೆಲೆಗಳನ್ನು ನಾಶಗೊಳಿಸಿ ಪರಾಕ್ರಮ ಮೆರೆದಿದೆ, ರಾಜ್ಯದ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕಾವೇರಿಯಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಸೇನೆಯನ್ನು ಅಭಿನಂದಿಸಿದ ಮುಖ್ಯಮಂತ್ರಿ, ರಾಷ್ಟ್ರೀಯ ಭದ್ರತೆ ವಿಷಯಲ್ಲಿ ಯಾವುದೇ
ʻಆಪರೇಷನ್ ಸಿಂಧೂರʼದಿಂದ ಹೆಚ್ಚಿದ ಉದ್ವಿಗ್ನತೆ: ವಾಯುಪಡೆ ನಿಯಂತ್ರಣಕ್ಕೆ ಶ್ರೀನಗರ ವಿಮಾನ ನಿಲ್ದಾಣ
ʻಆಪರೇಷನ್ ಸಿಂಧೂರ್ʼ ದಾಳಿಯ ನಂತರ ಕಾಶ್ಮೀರದ ಗಡಿ ನಿಯಂತ್ರಣ ರೇಖೆಯುದ್ದ ಉದ್ವಿಗ್ನತೆ ತೀವ್ರಗೊಂಡಿದ್ದು, ಭಾರತೀಯ ವಾಯುಪಡೆಯು ಶ್ರೀನಗರ ವಿಮಾನ ನಿಲ್ದಾಣವನ್ನು ನಿಯಂತ್ರಣಕ್ಕೆ ಪಡೆದುಕೊಂಡಿದೆ. ನಾಗರಿಕ ವಿಮಾನಗಳ ಕಾರ್ಯಾಚರಣೆಯನ್ನು ಅನಿರ್ದಿಷ್ಟಾವಧಿವರೆಗೆ ತಡೆ ಹಿಡಿಯಲಾಗಿದೆ. ಜಮ್ಮು ಮತ್ತು ಕಾಶ್ಮೀರ, ಅಮೃತಸರ, ಚಂಡೀಗಢ, ಧರ್ಮಶಾಲಾ, ಲೇಹ್‌ನ
ಪಾಕ್‌ನಲ್ಲಿ ಗೂಗಲ್ ಟ್ರೆಂಡ್ ಆಯ್ತು “ಸಿಂಧೂರ್”, ಅರ್ಥಕ್ಕಾಗಿ ಸರ್ಚ್
ಪಾಕಿಸ್ತಾನಕ್ಕೆ ನಡುಕ ಹುಟ್ಟಿಸಿರುವ ಭಾರತ ವಾಯುಪಡೆ ನಡೆಸಿರುವ ಭಯೋತ್ಪಾದಕರ ತಾಣಗಳ ಮೇಲಿನ ದಾಳಿ ” ಆಪರೇಷನ್ ಸಿಂಧೂರ್” ಪಾಕ್‌ನಲ್ಲಿ ಗೂಗಲ್ ಟ್ರೆಂಡ್ ಆಗಿದೆ. ಅಲ್ಲಿನ ಜನತೆ ಸಿಂಧೂರ್ ಪದದ ಅರ್ಥವೇನು ಎಂದು ಹುಡುಕಾಟ ನಡೆಸುತ್ತಿದ್ದಾರೆ. ಗೂಗಲ್‌ನಲ್ಲಿ ವಾಯುದಾಳಿ, ಭಾರತೀಯ ಸೇನೆ, ಭಾರತ
ಕೆಪಿಎಸ್‌ಸಿ ಕರ್ಮಕಾಂಡದ ಸಮಗ್ರ ತನಿಖೆಗೆ ಸಚಿವ ಪ್ರಲ್ಹಾದ ಜೋಷಿ ಆಗ್ರಹ
ರಾಜ್ಯದ ವಿದ್ಯಾರ್ಥಿಗಳ ಭವಿಷ್ಯದ ಜತೆ ಚೆಲ್ಲಾಟವಾಡುತ್ತಿರುವ ಕೆಪಿಎಸ್‌ಸಿ ಕರ್ಮಕಾಂಡ ಬಗ್ಗೆ ರಾಜ್ಯ ಸರ್ಕಾರ ಕೂಡಲೇ ಸಮಗ್ರ ತನಿಖೆಗೆ ಆದೇಶಿಸಬೇಕು ಮತ್ತು ತಪ್ಪಿತಸ್ಥರನ್ನು ಶಿಕ್ಷೆಗೆ ಗುರಿಪಡಿಸಬೇಕೆಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಗ್ರಹಿಸಿದ್ದಾರೆ. ಕೆಪಿಎಸ್‌ಸಿ ಸಂಸ್ಥೆಯ ಪರೀಕ್ಷೆ ಪ್ರಹಸನಗಳು ಒಂದೆರೆಡಲ್ಲ, ಬೆಳಗ್ಗೆ ಪರೀಕ್ಷೆ
ಪಹಲ್ಗಾಮ್ ದಾಳಿಗೆ “ಆಪರೇಷನ್ ಸಿಂಧೂರ” ಸೂಕ್ತ ಪ್ರತ್ಯುತ್ತರವೆಂದ ಡಿ.ಕೆ ಶಿವಕುಮಾರ್
ಹೇಡಿತನದ ಪಹಲ್ಗಾಮ್ ಭಯೋತ್ಪಾದಕ ದಾಳಿಗೆ “ಆಪರೇಷನ್ ಸಿಂಧೂರ” ಸೂಕ್ತ ಪ್ರತ್ಯುತ್ತರ. ನಾವು ಸರ್ಕಾರದೊಂದಿಗೆ ನಿಲ್ಲುತ್ತೇವೆ, ನಮ್ಮ ಭದ್ರತಾ ಪಡೆಗಳೊಂದಿಗೆ ನಿಲ್ಲುತ್ತೇವೆ ಎಂಬುದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡುವ ಮೂಲಕ ಡಿಸಿಎಂ ಭಯೋತ್ಪಾದಕತೆಯನ್ನು ಬಗ್ಗುಬಡಿಯಲು ಸನ್ನದ್ಧವಾಗಿರುವ




