ರಾಜಕೀಯ
ರಾಜ್ಯದಲ್ಲಿ ಪೊಲೀಸ್ ಆಡಳಿತ ತರಲು ರಾಜ್ಯ ಸರ್ಕಾರ ಪ್ರಯತ್ನ: ಬಸವರಾಜ ಬೊಮ್ಮಾಯಿ
ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂವಿಧಾನ ರಕ್ಷಣೆಯ ಮಾತನಾಡುತ್ತಾರೆ. ಸಂವಿಧಾನ ಅಂತ ಹೇಳುತ್ತ ಸಂವಿಧಾನ ವಿರುದ್ಧವೇ ಕೆಲಸ ಮಾಡುತ್ತಾರೆ. ಆಚಾರ ಹೇಳುವುದು ಬದನೆಕಾಯಿ ತಿನ್ನುವುದು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ. ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆರ್ ಎಸ್ ಎಸ್ ವಿರುದ್ಧ ರಾಜ್ಯ ಸರ್ಕಾರ ಮಾಡಿದ್ದ ಆದೇಶಕ್ಕೆ ರಾಜ್ಯ ಹೈಕೋರ್ಟ್ ತಡೆ ನೀಡಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು,
ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರ: 34 ಕೋಟಿ ಮೊತ್ತದ ಕ್ರಿಯಾ ಯೋಜನೆಗೆ ಮಂಜೂರಾತಿ
ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರದ 13ನೇ ಸಭೆಯಲ್ಲಿ ಒಟ್ಟು 34 ಕೋಟಿ ಮೊತ್ತದ ಕ್ರಿಯಾ ಯೋಜನೆಗೆ ಮಂಜೂರಾತಿ ನೀಡಲಾಯಿತು. ಕಾಗಿನೆಲೆಯಲ್ಲಿ ಪ್ರತಿ ವರ್ಷ ಕನಕ ಉತ್ಸವವನ್ನು ಆಚರಿಸಲು ಕ್ರಮ ಕೈಗೊಳ್ಳಲಾಗುವುದು. ಉತ್ಸವ ಸಂದರ್ಭದಲ್ಲಿ ಜಿಲ್ಲೆಯ ದಾರ್ಶನಿಕರ
ಗಾಜಾ ಪಟ್ಟಿ ಮೇಲೆ ಇಸ್ರೇಲ್ ವೈಮಾನಿಕ ದಾಳಿಗೆ 30 ಮಂದಿ ಬಲಿ
ಗಾಜಾ ಮತ್ತು ಇಸ್ರೇಲ್ ಪರಸ್ಪರ ಕದನ ವಿರಾಮವನ್ನು ಉಲ್ಲಂಘಿಸಿದ್ದು, ಇಸ್ರೇಲ್ ಗಾಜಾ ಪಟ್ಟಿ ಪ್ರದೇಶದ ಮೇಲೆ ವೈಮಾನಿಕ ದಾಳಿ ಪ್ರಾರಂಭಿಸಿದೆ. ಕದನ ವಿರಾಮದ ನಡುವೆಯೂ ಇಸ್ರೇಲ್ ಗಾಜಾದಲ್ಲಿ ವಾಯುದಾಳಿ ನಡೆಸಿದೆ. ಈ ದಾಳಿಯಲ್ಲಿ ಕನಿಷ್ಠ 30 ಮಂದಿ ಪ್ರಾಣ ಕಳೆದುಕೊಂಡಿದ್ದಾರೆಂದು ಗಾಜಾದ ನಾಗರಿಕ
ಆರೆಸ್ಸೆಸ್‌ಗೆ ನಿರ್ಬಂಧ: ಹಿಟ್ಲರ್ ಕಾಂಗ್ರೆಸ್ ಸರ್ಕಾರಕ್ಕೆ ಹೈಕೋರ್ಟ್ ಛಡಿಯೇಟು ಎಂದ ಆರ್ ಅಶೋಕ
RSS ಪಥಸಂಚನಲಕ್ಕೆ ಅವಕಾಶ ನೀಡದಿರುವ @INCKarnataka ಸರ್ಕಾರದ ನಿರಂಕುಶವಾದಿ ನಡೆಗೆ ಹೈಕೋರ್ಟ್ ಛೀಮಾರಿ ಹಾಕಿದ್ದು, ಸಂವಿಧಾನದತ್ತ ಮೂಲಭೂತ ಹಕ್ಕುಗಳ ಉಲ್ಲಂಘನೆ ಆಗುತ್ತದೆ ಎಂದು ಸ್ಪಷ್ಟವಾಗಿ ಹೇಳಿದೆ. ಈ ಮೂಲಕ ಹಿಟ್ಲರ್ ಕಾಂಗ್ರೆಸ್ ಸರ್ಕಾರಕ್ಕೆ ಹೈಕೋರ್ಟ್ ಛಡಿಯೇಟು ನೀಡಿದೆ ಎಂದು ಪ್ರತಿಪಕ್ಷ ನಾಯಕ
ಧಾರವಾಡ ಜಿಲ್ಲೆ ಜನತಾದರ್ಶನ: ಈವರೆಗೆ ಮೂರು ಸಾವಿರ ಅರ್ಜಿ ವಿಲೇವಾರಿ ಎಂದ ಸಚಿವ ಲಾಡ್
ಜಿಲ್ಲೆಯ ಜನರ ಸಮಸ್ಯೆಗಳನ್ನು ಆಲಿಸಿ ಪರಿಹರಿಸುವ ನಿಟ್ಟಿನಲ್ಲಿ ಜನತಾ ದರ್ಶನವನ್ನು ಆಯೋಜನೆ ಮಾಡಲಾಗುತ್ತಿದ್ದು, ಈವರೆಗೆ 3 ಸಾವಿರಕ್ಕೂ ಅಧಿಕ ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. ಈಗಾಗಲೇ 17 ಜನತಾ ದರ್ಶನ ಕಾರ್ಯಕ್ರಮಗಳು ಯಶಸ್ವಿಯಾಗಿ ನಡೆದಿದ್ದು, ಇದು 18ನೇ ಜನತಾ ದರ್ಶನ ಕಾರ್ಯಕ್ರಮವಾಗಿದೆ. ಜನರ
ಕಾರು ಬಿಟ್ಟು ಸಾರ್ವಜನಿಕ ಸಾರಿಗೆ ಬಳಸಲು ಕ್ಷೇತ್ರದ ಜನರಿಗೆ ತೇಜಸ್ವಿ ಸೂರ್ಯ ಕರೆ ನೀಡಲಿ
ಸಂಸದ ತೇಜಸ್ವಿ ಸೂರ್ಯರು ತಮ್ಮ ಕ್ಷೇತ್ರದ ಜನರಿಗೆ, ನೀವು ನಿಮ್ಮ ಕಾರುಗಳನ್ನು ಮನೆಯಲ್ಲೇ ನಿಲ್ಲಿಸಿ, ಸಾರ್ವಜನಿಕ ಸಾರಿಗೆಯಲ್ಲಿ ಸಂಚಾರ ಮಾಡಿ ಕರೆ ನೀಡಲಿ. ಆಗ ಯಾರು ಪಾಲನೆ ಮಾಡುತ್ತಾರೆ ನೋಡೋಣ. ಕಾರಿಲ್ಲದ ಹುಡುಗನ ಮನೆಗೆ ಹೆಣ್ಣು ನೀಡಲು ಹಿಂದೇಟು ಹಾಕುತ್ತಾರೆ. ಇಂತಹ
ಯಾವುದೇ ಕಾರಣಕ್ಕೂ ಪೊಲೀಸರು ರಾಜಕೀಯ ಹಿಂಬಾಲಕರಾಗಬೇಡಿ: ಡಿಕೆ ಶಿವಕುಮಾರ್
“ಯಾವುದೇ ಸರ್ಕಾರ ಬಂದರೂ ನಿಮ್ಮ ಆತ್ಮ ವಿಶ್ವಾಸ ಹಾಗೂ ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬಾರದು. ಒಂದು ವೇಳೆ ರಾಜಿ ಮಾಡಿಕೊಂಡರೆ ಸಂಪೂರ್ಣವಾಗಿ ವ್ಯವಸ್ಥೆ ಕುಸಿಯಲಿದೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಪೊಲೀಸ್ ಅಧಿಕಾರಿಗಳಿಗೆ ಕಿವಿ ಮಾತು ಹೇಳಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ
ಆರೆಸ್ಸೆಸ್ ಚಟುವಟಿಕೆ ನಿರ್ಬಂಧ: ಹೈಕೋರ್ಟ್ ತಡೆಯಾಜ್ಞೆ. ಸರ್ಕಾರಕ್ಕೆ ನೋಟಿಸ್
ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ಸರ್ಕಾರಿ ಜಾಗಗಳಲ್ಲಿ ಆರ್ಎಸ್ಎಸ್ ಚಟುವಟಿಕೆಗಳು ಹಾಗೂ ಪಥಸಂಚಲನ ನಿರ್ಬಂಧಿಸಿ ರಾಜ್ಯ ಸರ್ಕಾರ ನೀಡಿದ್ದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ನ ನ್ಯಾ.ಎಂ. ನಾಗಪ್ರಸನ್ನ ಅವರಿದ್ದ ಪೀಠ ಮಧ್ಯಂತರ ತಡೆಯಾಜ್ಞೆ ವಿಧಿಸಿದೆ. 10 ಜನಕ್ಕಿಂತ ಹೆಚ್ಚು ಜನ ಸೇರಿದರೆ ಅಕ್ರಮ ಕೂಟವೆಂದು
ಡ್ರಗ್ಸ್ ಮುಕ್ತ ಕರ್ನಾಟಕ ಸಾಧಿಸಿ ತೋರಿಸಿ: ಪೊಲೀಸ್‌ಗೆ ಸಿಎಂ ಕರೆ
ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ. ಇದರಿಂದ ಇಡೀ ಕರ್ನಾಟಕ ಜನತೆ ಪೊಲೀಸ್ ಇಲಾಖೆಗೆ ಕೃತಜ್ಞತೆ ಸಲ್ಲಿಸುತ್ತಾರೆ. ಡ್ರಗ್ ಮಾರುವವರು, ತರುವವರು, ಎಲ್ಲಿಂದ ಡ್ರಗ್ಸ್ ಬರುತ್ತದೆ, ಈ ಜಾಲದ ಏಜೆಂಟರು ಯಾರ್ಯಾರು ಎನ್ನುವುದೂ ನಿಮಗೇ ಗೊತ್ತಿರುತ್ತದೆ.
ಯಾರೇ ದ್ವೇಷ ಭಾಷಣ ಮಾಡಿದರೂ ಎಫ್‌ಐಆರ್ ದಾಖಲು: ಸಿಎಂ ಸಿದ್ದರಾಮಯ್ಯ
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ ದಾಖಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಕಲ್ಲಡ್ಕ ಪ್ರಭಾಕರ್ ಭಟ್ ಅವರ




