ರಾಜಕೀಯ
ಕರ್ನಾಟಕ ಡಿಜಿಟಲ್ ಜಾಹೀರಾತು ಮಾರ್ಗಸೂಚಿ– 2024 ಜಾರಿ
ಸರ್ಕಾರದ ನೀತಿ ಮತ್ತು ಯೋಜನೆಗಳನ್ನು ಅಂತರ್ಜಾಲ ಬಳಕೆದಾರರಿಗೆ ಡಿಜಿಟಲ್ ಜಾಹೀರಾತುಗಳ ಮೂಲಕ ತಲುಪಿಸಲು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಕರ್ನಾಟಕ ಡಿಜಿಟಲ್ ಜಾಹೀರಾತು ಮಾರ್ಗಸೂಚಿ – 2024 ಜಾರಿಗೆ ತಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಕರ್ನಾಟಕ ಸರ್ಕಾರವು ಡಿಜಿಟಲ್ ಜಾಹೀರಾತಿಗಾಗಿ ಡಿಜಿಟಲ್ ಜಾಹೀರಾತು ಏಜೆನ್ಸಿ ಮತ್ತು ಡಿಜಿಟಲ್ ಮಾಧ್ಯಮಗಳನ್ನು ಎಂಪ್ಯಾನಲ್‌ಮೆಂಟ್ ಮಾಡಿ ಕೊಳ್ಳುತ್ತಿದೆ. ದೇಶದಲ್ಲಿಯೇ ಮೊದಲ ಬಾರಿಗೆ ಡಿಜಿಟಲ್ ಏಜೆನ್ಸಿ ಮತ್ತು ಮಾಧ್ಯಮಗಳನ್ನು ನೋಂದಾಯಿಸಿಕೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿಗಳು
ಕಾವೇರಿ ಆರತಿಗೆ 92 ಕೋಟಿ: ಸಿಎಂ, ಡಿಸಿಎಂ, ಸಚಿವರಿಗೆ ಶಾಸಕ ದಿನೇಶ್ ಗೂಳಿಗೌಡ ಅಭಿನಂದನೆ
ಕಾವೇರಿ ಮಾತೆಗೆ ಗಂಗಾರತಿ ಮಾದರಿಯಲ್ಲಿ ‘ಕಾವೇರಿ ಆರತಿ’ ನೆರವೇರಿಸುವ ಸಂಬಂಧ ರಾಜ್ಯ ಸರ್ಕಾರವು ಗುರುವಾರ ನಡೆದ ಸಚಿವ ಸಂಪುಟದಲ್ಲಿ 92 ಕೋಟಿ ರೂಪಾಯಿಯನ್ನು ಮೀಸಲಿಟ್ಟಿರುವುದು ಸ್ವಾಗತಾರ್ಹ ಕ್ರಮವಾಗಿದೆ. ಇದಕ್ಕೆ ಕಾರಣರಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ , ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಜಿಲ್ಲಾ
ಮಲೆ ಮಹದೇಶ್ವರ ಬೆಟ್ಟದಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ನಿರ್ಣಯ
ನಿನ್ನೆ ನಡೆದ ಮಲೆಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರ ಸಭೆಯಲ್ಲಿ ಮಹದೇಶ್ವರ ಬೆಟ್ಟದಲ್ಲಿ ಶುಚಿತ್ವ, ಪಾನನಿಷೇಧ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೊಳಿಸಲು ನಿರ್ಣಯ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಶ್ರೀ ಮಲೆ ಮಹದೇಶ್ವರ ಬೆಟ್ಟದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ, ಮೈಸೂರು ವಿಭಾಗದ ಚಾಮರಾಜನಗರ ಜಿಲ್ಲೆ ಹಿಂದುಳಿದ
ಸರ್ವಪಕ್ಷ ಸಭೆಯಲ್ಲಿ ಭದ್ರತಾ ಲೋಪ ಒಪ್ಪಿಕೊಂಡ ಕೇಂದ್ರ
ಜಮ್ಮು ಕಾಶ್ಮೀರದ ಪಹಲ್ಗಾಂ ನಲ್ಲಿ ನಡೆದ ಉಗ್ರರ ದಾಳಿಗೆ ಭದ್ರತಾ ಲೋಪ ಕಾರಣ ಎಂದು ಕೇಂದ್ರ ಸರ್ಕಾರ ಸರ್ವಪಕ್ಷ ಸಭೆಯಲ್ಲಿ ಒಪ್ಪಿಕೊಂಡಿದೆ ಎಂದು ಮೂಲಗಳು ತಿಳಿಸಿವೆ. ಪಹಲ್ಗಾವ್ ನಲ್ಲಿ ನಡೆದ ಉಗ್ರರ ದಾಳಿ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಗುರುವಾರ ಕರೆದಿದ್ದ ಸರ್ವ
ಚಾಮರಾಜನಗರಕ್ಕೆ ಅಂಟಿರುವ ಹಿಂದುಳಿದ ಜಿಲ್ಲೆ ಹಣೆಪಟ್ಟಿ ನಿರ್ಮೂಲನೆಗೆ ನಮ್ಮ ಸರ್ಕಾರ ಬದ್ಧ: ಡಿಸಿಎಂ ಡಿಕೆ ಶಿವಕುಮಾರ್
ಚಾಮರಾಜನಗರ: “ನಂಜುಂಡಪ್ಪ ವರದಿಯಲ್ಲಿ ಜಾಮರಾಜನಗರ ಜಿಲ್ಲೆಗೆ ಅತ್ಯಂತ ಹಿಂದುಳಿದ ಜಿಲ್ಲೆ ಎಂಬ ಹಣೆಪಟ್ಟಿ ಸಿಕ್ಕಿತ್ತು. ಈ ಹಣೆಪಟ್ಟಿಯನ್ನು ತೆಗೆಯಲು ನಮ್ಮ ಸರ್ಕಾರ ಬದ್ಧವಾಗಿದ್ದು, ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ನಮ್ಮ ಸರ್ಕಾರ ಕೈಗೊಂಡಿರುವ ತೀರ್ಮಾನ, ಯೋಜನೆಗಳು ಇದಕ್ಕೆ ನೆರವಾಗಲಿದೆ” ಎಂದು
ಕಾಂಗ್ರೆಸ್ಸಿನವರು ಹೊಣೆಯರಿತು ಮಾತನಾಡಲಿ: ವಿಜಯೇಂದ್ರ
ಜವಾಬ್ದಾರಿಯುತ ಸ್ಥಾನದಲ್ಲಿರುವ ಸಿದ್ದರಾಮಯ್ಯನವರು, ಪ್ರಿಯಾಂಕ್ ಖರ್ಗೆ ಅವರು ಹೊಣೆಯರಿತು ಮಾತನಾಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ. ಕಾಶ್ಮೀರದಲ್ಲಿ ಉಗ್ರರ ದಾಳಿಗೆ ಬಲಿಯಾದ ಬೆಂಗಳೂರಿನ ಮತ್ತೀಕೆರೆಯ ಭರತ್ ಭೂಷಣ್ ಅವರ ನಿವಾಸಕ್ಕೆ ತೆರಳಿ ಅಂತಿಮ ನಮನ ಸಲ್ಲಿಸಿದ ನಂತರ
ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾದಪ್ಪನ ಪೂಜೆ ನೆರವೇರಿಸಿದ ಲಕ್ಷ್ಮೀ ಹೆಬ್ಬಾಳ್ಕರ್
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು, ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿರುವ ಶ್ರೀ ಮಲೆ ಮಹದೇಶ್ವರ ಸ್ವಾಮಿಯ ಬೆಳಗಿನ ವಿಶೇಷ ಪೂಜೆಯಲ್ಲಿ ಪಾಲ್ಗೊಂಡು, ಬಳಿಕ ನಡೆದ ಉತ್ಸವದಲ್ಲಿ ಭಾಗಿಯಾದರು. ಮಾದಪ್ಪನ ಉತ್ಸವ ಮೂರ್ತಿ ಹೊತ್ತಿದ್ದ ಚಿಕ್ಕ
ಉಗ್ರರನ್ನು ಸದೆ ಬಡಿಯುವಲ್ಲಿ ಕೇಂದ್ರಕ್ಕೆ ರಾಜ್ಯ ಸಂಪೂರ್ಣ ಬೆಂಬಲವೆಂದ ಸಿಎಂ
ಕಾಶ್ಮೀರದ ಪೆಹಲ್ಗಾಮನಲ್ಲಿ ಉಗ್ರರ ದಾಳಿಯಲ್ಲಿ ಮೃತಪಟ್ಟ ಕನ್ನಡಿಗರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರವನ್ನು ಘೋಷಿಸಲಾಗಿದೆ. ಸಂಕಷ್ಟದಲ್ಲಿರುವ ಕನ್ನಡಿಗರನ್ನು ರಕ್ಷಿಸುವುದು ಸರ್ಕಾರದ ಕರ್ತವ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬೆಂಗಳೂರಿನ ಮತ್ತೀಕೆರೆಯಲ್ಲಿರುವ ಭರತ್ ಭೂಷಣ್ ಅವರ ನಿವಾಸಕ್ಕೆ ತೆರಳಿ ಅಂತಿಮ ನಮನ
ರಾಜ್ಯದ ಧಾರ್ಮಿಕ ಕ್ಷೇತ್ರ ಅಭಿವೃದ್ಧಿ ಮಾಡಿರೋದು ಕಾಂಗ್ರೆಸ್ ಸರ್ಕಾರ ಮಾತ್ರ: ಡಿ.ಕೆ. ಶಿವಕುಮಾರ್
“ರಾಜ್ಯದ ಪ್ರಮುಖ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗೆ ನಾವು ಪ್ರಾಧಿಕಾರಗಳನ್ನು ರಚನೆ ಮಾಡಿದ್ದೇವೆ, ಮಾಡುತ್ತಿದ್ದೇವೆ. ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿ ಮಾಡಿದ್ದು ಕಾಂಗ್ರೆಸ್ ಸರಕಾರ ಮಾತ್ರ. ಈ ಕೆಲಸಗಳನ್ನು ಹಿಂದಿನ ಬಿಜೆಪಿ, ಜೆಡಿಎಸ್ ಸರ್ಕಾರಗಳು ಏಕೆ ಮಾಡಲಿಲ್ಲ? ನಾವು ಸರ್ವ ಜನಾಂಗಕ್ಕೂ ಒಳಿತು ಬೇಡಿಕೊಳ್ಳುತ್ತೇವೆ”
ರಾಜ್ಯದಲ್ಲಿನ ಸ್ಲೀಪರ್ ಸೆಲ್‌ಗಳನ್ನು ರಾಜ್ಯ ಸರ್ಕಾರ ಪತ್ತೆ ಮಾಡಲಿ
ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಭಾರತ ಸರ್ಕಾರ ತಕ್ಕ ಪ್ರತ್ಯುತ್ತರ ನೀಡಲಿದೆ. ರಾಜ್ಯದಲ್ಲೂ ಸರ್ಕಾರ ಸ್ಲೀಪರ್ ಸೆಲ್‌ಗಳನ್ನು ಪತ್ತೆ ಹಚ್ಚಿ ಕಾನೂನು ಸುವ್ಯವಸ್ಥೆ ಕಾಪಾಡಬೇಕಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಒತ್ತಾಯಿಸಿದರು. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದು ನಮಗೆಲ್ಲರಿಗೂ ದುಃಖದ ದಿನ.




